ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ
ಮಂಗಳೂರು, ಮಾರ್ಚ್ 06, 2021: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ವೆಬ್ಸೈಟ್ www.ssp.postmatric.karnataka.gov.in ನಲ್ಲಿ ಮಾರ್ಚ್ 20 ರೊಳಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ , ಜಿಲ್ಲಾ ಅಧಿಕಾರಿಯವರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆನೆಗುಂಡಿ ರಸ್ತೆ, ಬಿಜೈ-ಕಾಪಿಕಾಡ್, ಮಂಗಳೂರು-4, ದೂರವಾಣಿ ಸಂಖ್ಯೆ: 0824-2225078 ನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.