ಹೆಚ್ಚುತ್ತಿರುವ ಕೋವಿಡ್ ಸಂಖ್ಯೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾತ್ರೆ, ಸಭೆ, ಸಮಾರಂಭ ನಿಷೇಧ
ಮಂಗಳೂರು, ಮಾರ್ಚ್ 20, 2021: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಜಿಲ್ಲೆಯಾದ್ಯಂತ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಜಾತ್ರೆ, ಸಭೆ, ಸಮಾರಂಭ ಹಾಗೂ ಆಚರಣೆಗಳನ್ನು ನಿಷೇಧಿಸಿದ್ದಾರೆ.
ಮಾರ್ಚ್ 27 ರ ಮುಖ್ಯ ಕಾರ್ಯದರ್ಶಿಯ ಆದೇಶವನ್ನು ಅನುಸರಿಸಿ ಈ ಆದೇಶ ಮಾಡಲಾಗಿದೆ.
ಆದೇಶದ ಪ್ರತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಜಿಲ್ಲಾಧಿಕಾರಿಗಳ ಆದೇಶ:
- ಜಿಲ್ಲೆಯಾದ್ಯಂತ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಜಾತ್ರೆ, ಸಭೆ, ಸಮಾರಂಭ ಹಾಗೂ ಆಚರಣೆಗಳನ್ನುನಿಷೇಧಿಸಲಾಗಿದೆ.
- ಎಲ್ಲಾ ರೀತಿಯ ಧಾರ್ಮಿಕ ಆಚರಣೆಗಳನ್ನು ಸಾಂಕೇತಿಕವಾಗಿ ಆಚರಿಸುವುದು. ಮುಂಬರುವ ಧಾರ್ಮಿಕ ಹಬ್ಬಗಳಾದ ಶಬ್ -ಈ-ಬಾರಾತ್, ಗುಡ್ ಫ್ರೈಡೆ, ಇತ್ಯಾದಿ ಸಂದರ್ಭಗಳಲ್ಲಿ ಜಿಲ್ಲೆಯ ಯಾವುದೇ ಸಾರ್ವಜನಿಕ ಸ್ಥಳಗಳು , ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆಗಳು, ಧಾರ್ಮಿಕ ಪ್ರದೇಶಗಳು ಇತ್ಯಾದಿಗಳಲ್ಲಿ ಸಾರ್ವಜನಿಕ ಸಭೆ ಸಮಾರಂಭಗಳು ನಡೆಸುವುದನ್ನು ಜಾತ್ರೆಗಳು, ಮೇಳಗಳನ್ನು ನಡೆಸುವುದು ನಿಷೇಧಿಸಿದೆ.
- ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಕೋವಿಡ್ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು.
ಇದನ್ನೂ ಓದಿ: ಜಾತ್ರೆ, ಸಭೆ, ಸಮಾರಂಭ ನಿಷೇಧ: ಸ್ಪಷ್ಟನೆ ನೀಡಿದ ಸಚಿವ ಕೋಟ