ಜಾತ್ರೆ, ಸಭೆ, ಸಮಾರಂಭ ನಿಷೇಧ: ಸ್ಪಷ್ಟನೆ ನೀಡಿದ ಸಚಿವ ಕೋಟ
ಮಂಗಳೂರು, ಮಾರ್ಚ್ 30, 2021: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಾರ್ವಜನಿಕ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಜಾತ್ರೆ, ಸಭೆ ಸಮಾರಂಭ ಆಚರಣೆಯನ್ನು ನಿಷೇಧಿಸಿ ಆದೇಶ ಹೊರಡಿಸಿದ ಬೆನ್ನಿನಲ್ಲೇ ಧಾರ್ಮಿಕ ದತ್ತಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ ಹೆಚ್ಚುತ್ತಿರುವ ಕೋವಿಡ್ ಸಂಖ್ಯೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾತ್ರೆ, ಸಭೆ, ಸಮಾರಂಭ ನಿಷೇಧ
“ಡಿಸಿ ಹೊರಡಿಸಿದ ನಿಷೇಧದ ಆದೇಶದ ಬಗ್ಗೆ ಜನರು ಕಳವಳ ವ್ಯಕ್ತಪಡಿಸಿದ್ದಾರೆ. ಸ್ಪಷ್ಟನೆ ನೀಡುವಂತೆ ನಾನು ಅವರನ್ನು ಕೇಳಿಕೊಂಡಿದ್ದೇನೆ. ಈಗಾಗಲೇ ಹಮ್ಮಿಕೊಂಡಿರುವ ಯಕ್ಷಗಾನ, ಕೋಲ, ನೇಮ, ಪೂಜೆ ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ನಡೆಸಬಹುದು” ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
“ಬಯಲು, ಮೈದಾನ ಪ್ರದೇಶದಲ್ಲಿ ಗರಿಷ್ಠ ೫೦೦ ಜನಕ್ಕಿಂತ ಜಾಸ್ತಿ ಸೇರುವ ಹಾಗಿಲ್ಲ. ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳುವುದು ಜನರ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದ್ದಾರೆ.