ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ

 ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ
Share this post

ಉಡುಪಿ, ಮಾರ್ಚ್ 31, 2021: ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲ್ಪಡುವ 2020 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳು ಜಿಲ್ಲೆಯಲ್ಲಿ ಏಪ್ರಿಲ್ 3 ರಿಂದ 5 ರ ವರೆಗೆ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ), ಉಡುಪಿ ಇಲ್ಲಿ ನಡೆಯಲಿದೆ.

ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರದ
ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

Subscribe to our newsletter!

Other related posts

error: Content is protected !!