ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ: ಡಿ ಹೆಚ್ ಒ
ಕಾರವಾರ, ಮಾರ್ಚ್ 31, 2021: ಸರಕಾರದ ಆದೇಶದಂತೆ ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಜಿಲ್ಲೆಯಲ್ಲಿ ಕೊರೋನಾ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರದ್ ನಾಯಕ ಹೇಳಿದರು.
ಈಗಾಗಲೇ ಮೊದಲ ಮತ್ತುಎರಡನೇ ಹಂತದಲ್ಲಿ ನೀಡಲಾದ ಕೋವಿಡ್ ವ್ಯಾಕ್ಸಿನ್ ಅನ್ನು ಸಾಕಷ್ಟು ಸಾರ್ವಜನಿಕರು ತೆಗೆದುಕೊಂಡಿದ್ದು,ಅದು ಪರಿಣಾಮಕಾರಿಯಾಗಿದೆ. ಈ ನಿಟ್ಟಿನಲ್ಲಿ ಸರಕಾರದ ಆದೇಶದಂತೆ 45 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ ಎಂದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 1545720 ಜನಸಂಖ್ಯೆ ಇದ್ದು, ಇದರಲ್ಲಿ 390294 ಜನ 45 ವರ್ಷ ಮೇಲ್ಪಟ್ಟವರಿದ್ದಾರೆ, ಇವರೆಲ್ಲರಿಗೂ ವ್ಯಾಕ್ಸಿನ್ ನೀಡುವ ಗುರಿ ಹೊಂದ್ದಿದ್ದೇವೆ ಎಂದು ಹೇಳಿದರು.
ಜಿಲ್ಲೆಯ ಕೆಲವು ಶಾಲೆಗಳಲ್ಲಿ ಕೋವಿಡ್ ಪ್ರಕರಣಗಳು ಕಂಡುಬರುತ್ತಿದ್ದು, ಹೊರಗಿನಿಂದ ಬರುವ ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಗಮನ ವಹಿಸಿ ತಪಾಸಣೆ ಮಾಡಲಾಗುತ್ತಿದೆ ಹಾಗೂ ವಿವಿಧಶಾಲೆಗಳ ಮಕ್ಕಳ ಗಂಟಲು ದ್ರವದ ಮಾದರಿಗಳನ್ನೂ ತಪಾಸಣೆಗೆ ಕಳುಹಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಆರ್ಸಿಎಚ್‍ಒ ಡಾ. ರಮೇಶ್‍ರಾವ್, ಜಿಲ್ಲಾ ಸರ್ವೇಕ್ಷಣಾಧಿಕಾರಿಡಾ. ವಿನೋದ್ ಭೂತೆ ಉಪಸ್ಥಿತರಿದ್ದರು.