ಜಿಲ್ಲಾ ಧರ್ಮೊತ್ಥಾನ ಪ್ರಶಸ್ತಿ: ಅರ್ಜಿ ಆಹ್ವಾನ
ಮಂಗಳೂರು, ಎಪ್ರಿಲ್ 07, 2021: ಜಿಲ್ಲಾ ಧಾರ್ಮಿಕ ಪರಿಷತ್ ವತಿಯಿಂದ ಧಾರ್ಮಿಕ ಕ್ಷೇತ್ರಕ್ಕೆ ಅರ್ಹ ಕೊಡುಗೆಯನ್ನು ನೀಡಿದ ವ್ಯಕ್ತಿಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಓರ್ವ ವ್ಯಕ್ತಿಯನ್ನು ಸಾಧನೆಯ ಆಧಾರದ ಮೇಲೆ ಪರಿಗಣಿಸಿ ಜಿಲ್ಲಾ ಮಟ್ಟದ “ಜಿಲ್ಲಾ ಧರ್ಮೊತ್ಥಾನ ಪ್ರಶಸ್ತಿ” ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಎಪ್ರಿಲ್ 15 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು ಹಾಗೂ ಪದನಿಮಿತ್ತ ಕಾರ್ಯದರ್ಶಿ, ಜಿಲ್ಲಾ ಧಾರ್ಮಿಕ ಪರಿಷತ್ ಜಿಲ್ಲಾಧಿಕಾರಿಯವರ ಕಛೇರಿ ಆವರಣ, ದ.ಕ. ಮಂಗಳೂರು, ದೂರವಾಣಿ ಸಂಖ್ಯೆ: 0824-2220576 ಅಥವಾ ಇಮೇಲ್: [email protected] ನ್ನು ಸಂಪರ್ಕಿಸುವಂತೆ ಜಿಲ್ಲಾ ಧಾರ್ಮಿಕ ಪರಿಷತ್, ಮಂಗಳೂರು ಹಾಗೂ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಪದನಿಮಿತ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.