ಏಪ್ರಿಲ್ 10 ರಿಂದ 20 ರ ವರೆಗೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕೊರೋನಾ ಕರ್ಫ್ಯೂಜಾರಿ: ಜಿಲ್ಲಾಧಿಕಾರಿ
ಉಡುಪಿ, ಎಪ್ರಿಲ್ 09, 021: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಪರಿಸ್ಥಿತಿಯನ್ನು ಪರಾಮರ್ಶಿಸಿ ಕರೋನಕರ್ಫ್ಯೂ ವಿಧಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತಿ ಅವಶ್ಯಕವೆಂದು ಕಂಡುಬಂದಿದ್ದು ,ಅದರಂತೆ ಏಪ್ರಿಲ್ 10 ರಿಂದ 20 ರ ವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ (ಮಣಿಪಾಲ ಸೇರಿದಂತೆ) ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿಸಿ, ಉಳಿದಂತೆ ಎಲ್ಲಾ ಸೇವೆಗಳನ್ನು /ಸಂಚಾರಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
ಆದೇಶಗಳನ್ನು ಪಾಲಿಸದೇ ಇರುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 188 ಪ್ರಕಾರ ಪೊಲೀಸ್ ಠಾಣೆಗಳಲ್ಲಿ ನಿಯಮಾನುಸಾರ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.