ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
ಕಾರವಾರ ಏಪ್ರಿಲ್ 20, 2021: ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ 2021-22 ನೇ ಸಾಲಿನ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ಪಾವತಿಸುವ ಕಾರ್ಯಕ್ರಮದಡಿ ಸಮಾಜ ಕಲ್ಯಾಣ ಇಲಾಖೆಯು ಅರ್ಜಿ ಆಹ್ವಾನಿಸಿದೆ.
ಕಾನೂನು ಪದವಿ ಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆಸಕ್ತ ಅಭ್ಯರ್ಥಿಗಳು ಮೇ 1 ರಿಂದ ಜೂನ್ 30ರಳಗಾಗಿ ಆನ್‍ಲೈನ್ ಮೂಲಕ ಅರ್ಜಿಸಲ್ಲಿಸಬಹುದಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಹಾರ್ಡ್ ಕಾಪಿ ಹಾಗೂ ಅರ್ಹ ದಾಖಲೆಗಳನ್ನು ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ತಲುಪಿಸಬೇಕೆಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎಸ್ ಪುರುಷೋತ್ತಮ ತಿಳಿಸಿದ್ದಾರೆ.