ಸಾಮೂಹಿಕ ಸರಳ ವಿವಾಹವಾಗುವ ಪರಿಶಿಷ್ಟ ಜಾತಿಯ ಯುವಕ, ಯುವತಿಯರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

 ಸಾಮೂಹಿಕ ಸರಳ ವಿವಾಹವಾಗುವ  ಪರಿಶಿಷ್ಟ ಜಾತಿಯ ಯುವಕ, ಯುವತಿಯರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ
Share this post

ಉಡುಪಿ, ಮೇ 08, 2021: ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪರಿಶಿಷ್ಟ ಜಾತಿಯ ಯುವಕ/ ಯುವತಿಯರು ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಡಿ ವಿವಾಹವಾದಲ್ಲಿ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಅನುಷ್ಟಾನ ಮಾಡಲಾಗುತ್ತಿದ್ದು, ಈ ಯೋಜನೆಯ ಅರ್ಹ ಫಲಾನುಭವಿಗಳಿಗೆ ತಲಾ 50,000 ರೂ. ಗಳ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ ಸಲ್ಲಿಸಬೇಕು.

ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ (ದೂ.ಸಂಖ್ಯೆ: 0820-2574892) ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!