18 – 44 ವಯೋಮಾನದವರಿಗೆ ಲಸಿಕೆ ತಾತ್ಕಾಲಿಕ ಸ್ಥಗಿತ

 18 – 44 ವಯೋಮಾನದವರಿಗೆ ಲಸಿಕೆ ತಾತ್ಕಾಲಿಕ ಸ್ಥಗಿತ
Share this post

ಬೆಂಗಳೂರು, ಮೇ 12, 2021: 18-44 ವಯೋಮಾನದವರ ಲಸಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮೇ 7 ರಿಂದ ರಾಜ್ಯ ಸರ್ಕಾರವು ಭಾರತ ಸರ್ಕಾರದಿಂದ 45+ ವಯೋಮಾನದವರ ಲಸಿಕಾಕರಣಕ್ಕಾಗಿ ಹಂಚಿಕೆಯಾದ ಲಸಿಕೆಗಳನ್ನು 2ನೇಯ ಡೋಸ್ ಪಡೆಯಲು ಬಾಕಿ ಇರುವ ಫಲಾನುಭವಿಗಳ ಲಸಿಕಾಕರಣಕ್ಕೆ ಮಾತ್ರ ಬಳಸಲು ನಿರ್ಧರಿಸಿತ್ತು.

ಇಂದು ರಾಜ್ಯ ಸರ್ಕಾರವು 18 ರಿಂದ 44 ವರ್ಷದ ವಯೋಮಾನದ ಫಲಾನುಭವಿಗಳ ಲಸಿಕಾಕರಣಕ್ಕೆ ನೇರವಾಗಿ ಖದೀದಿಸಿದ ಪೂರ್ಣ ದಾಸ್ತಾನನ್ನು ಸಹ 2ನೆಯ ಡೋಸ್ ಪಡೆಯಲು ಬಾಕಿ ಇರುವ ಫಲಾನುಭವಿಗಳ ಬಳಕೆಗೆ ವಿನಿಯೋಗಿಸಲು ನಿರ್ಧರಿಸಿದೆ.

Also read: Karnataka Govt temporarily suspends vaccination of 18-44 age group

ಆದ್ದರಿಂದ ರಾಜ್ಯದಲ್ಲಿ ಇರುವ ಎಲ್ಲಾ ಲಸಿಕೆಗಳ (ಕೇಂದ್ರ ಸರ್ಕಾರದಿಂದ ಒದಗಿಸಲಾದ ಹಾಗೂ ರಾಜ್ಯ ಸರ್ಕಾರದಿಂದ ನೇರವಾಗಿ ಖರೀದಿಸಿದ) ಪೂರ್ಣ ದಾಸ್ತಾನನ್ನು 2ನೇಯ ಡೋಸ್ ಪಡೆಯಲು ಬಾಕಿ ಇರುವ ಫಲಾನುಭವಿಗಳ ಲಸಿಕಾಕರಣಕ್ಕೆ ಮಾತ್ರ ಬಳಸಲು ನಿರ್ಧರಿಸಿರುತ್ತದೆ.

ಈ ಹಿನ್ನೆಲೆಯಲ್ಲಿ, 18 ರಿಂದ 44 ವರ್ಷ ವಯೋಮಾನದವರ ಕೋವಿಡ್ ಲಸಿಕಾಕರಣವನ್ನು (ಈಗಾಗಲೇ ಲಸಿಕೆಗಾಗಿ ಸಮಯ ನಿಗಧಿಪಡಿಸಿಕೊಂಡವರೂ ಸೇರಿದಂತೆ) ಮೇ 14 ರಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಈ ಆದೇಶವು ಕೋವಿಡ್ ಲಸಿಕಾಕರಣ ನಡೆಸುತ್ತಿರುವ ಎಲ್ಲಾ ಸರ್ಕಾರಿ ಕೋವಿಡ್ ಲಸಿಕಾ ಕೇಂದ್ರಗಳಿಗೆ ಅನ್ವಯಿಸುತ್ತದೆ.

Subscribe to our newsletter!

Other related posts

error: Content is protected !!