ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಕೋವಿಡ್ ಗೆ ಉಚಿತ ಚಿಕಿತ್ಸೆ

 ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಕೋವಿಡ್ ಗೆ ಉಚಿತ ಚಿಕಿತ್ಸೆ
Share this post

ಮಂಗಳೂರು, ಮೇ 13, 2021: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ 80 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಕಾಯಿಲೆಯಿಂದ ಬಳಲುತ್ತಿರುವ, ಐ.ಸಿ.ಯು/ ವೆಂಟಿಲೇಟರ್ ನಲ್ಲಿ ಚಿಕಿತೆ ಪಡೆಯುತ್ತಿರುವ ರೋಗಿಗಳಿಗೆ ಉಚಿತ ಚಿಕಿತ್ಸೆ ಲಭ್ಯವಿದೆ.

ರೋಗಿಗಳು (ಎ.ಪಿ.ಎಲ್ ಮತ್ತು ಬಿ.ಪಿ.ಎಲ್‍ಕಾರ್ಡ್ ಹೊಂದಿರುವವರು) ತಮ್ಮ ಹೆಸರಿನ ಆಧಾರ್ ಕಾರ್ಡ್ ಮೂಲ ಪ್ರತಿಯನ್ನು ದಾಖಲಾತಿ ಸಮಯದಲ್ಲಿ ಹಾಜರಿಪಡಿಸುವುದು. ಜಿಲ್ಲಾ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡು ಜನರಲ್ ವಾರ್ಡ್/ಹೆಚ್.ಡಿ.ಯು ಬೆಡ್‍ಗಳು ಖಾಲಿ ಇಲ್ಲದಿದ್ದಲ್ಲಿ ರೆಫೆರಲ್ ಪತ್ರವನ್ನು ಪಡೆದುಕೊಂಡಲ್ಲಿ ಮಾತ್ರ ಚಿಕಿತ್ಸೆಯನ್ನುಉಚಿತವಾಗಿ ನೀಡಲಾಗುವುದು. ಸ್ಪೆಷಲ್ ವಾರ್ಡ್/ ಸೆಮಿ ಪ್ರೈವೇಟ್ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆದುಕೊಳ್ಳುವವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.

ಕೋವಿಡ್ ರೋಗಿಗಳಿಗೆ ಉಚಿತವಾಗಿ ಡಯಾಲಿಸಿಸ್ ಸೌಲಭ್ಯವನ್ನು ಖಾಸಗಿ ಆಸ್ಪತ್ರೆಯಲ್ಲಿ ನೀಡಲಾಗುವುದು. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲು ರೋಗಿ/ ರೋಗಿಯ ಕಡೆಯವರು ದಾಖಲಾತಿ ಸಮಯದಲ್ಲಿ ಆಸ್ಪತ್ರೆ ಸಿಬ್ಬಂದಿ, ಆರೋಗ್ಯ ಮಿತ್ರ, ಜಿಲ್ಲಾ ಸಂಯೋಜಕರು, ಹಾಗೂ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿಜಿಲ್ಲಾ ಕುಷ್ಠ ರೋಗ ನಿವಾರಣಾ, ಜಿಲ್ಲಾಕಾರ್ಯಕ್ರಮ ವ್ಯವಸ್ಥಾಪಕರ ಕಚೇರಿಯ ದೂ. ಸಂಖ್ಯೆ: 0824-2423818 ಅಥವಾ [email protected] ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!