ಉಡುಪಿ: ಕೋವಿಡ್ ಚಿಕಿತ್ಸೆಗೆ ದರ ನಿಗದಿ

 ಉಡುಪಿ: ಕೋವಿಡ್ ಚಿಕಿತ್ಸೆಗೆ ದರ ನಿಗದಿ
Share this post

ಉಡುಪಿ, ಮೇ 21, 2021: ಜಿಲ್ಲೆಯ ಜಿಲ್ಲಾಧಿಕಾರಿಗಳ ರೆಫರಲ್ ಮೂಲಕ ಸರ್ಕಾರಿ ಕೋಟಾದಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಸರ್ಕಾರಿ ಕೋಟಾದ ರೋಗಿಗಳಿಗೆ ರೆಮ್ಡಿಸಿವಿರ್ ಇಂಜೆಕ್ಷನ್ ಅನ್ನು ಉಚಿತವಾಗಿ ಒದಗಿಸಲಾಗುತ್ತದೆ.

ಕೋವಿಡ್ ರೋಗಿಗಳು ನೇರವಾಗಿ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡಲ್ಲಿ, ಸರ್ಕಾರವು ನಿಗದಿಪಡಿಸಿರುವ ಜನರಲ್ ವಾರ್ಡ್ಗೆ 10,000 ರೂ., ಐಸೋಲೇಷನ್ ಐಸಿಯು ವೆಂಟಿಲೇಟರ್ ಇಲ್ಲದೆ 15,000 ರೂ., ಹೆಚ್‌ಡಿಯು 12,000 ರೂ., ಐಸೋಲೇಷನ್ ಐಸಿಯು ವೆಂಟಿಲೇಟರ್ ಸಹಿತ 25,000 ರೂ., ದರಗಳ ಮಿತಿಯಲ್ಲಿ ಚಿಕಿತ್ಸೆಯ ವೆಚ್ಚವನ್ನು ರೋಗಿಗಳೇ ಭರಿಸಬೇಕಾಗುತ್ತದೆ.

ಖಾಸಗಿ ಆಸ್ಪತ್ರೆಗಳು ಕೋವಿಡ್-19 ರೋಗಿಗಳನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದ್ದಲ್ಲಿ, ಚಿಕಿತ್ಸೆ ನೀಡಲು ವಿಳಂಬ ಮಾಡಿದರೆ ಅಥವಾ ಸರ್ಕಾರ ನಿಗದಿ ಮಾಡಿರುವ ದರಗಳಿಗಿಂತ ಹೆಚ್ಚಿನ ದರಗಳನ್ನು ವಿಧಿಸಿದರೆ ಟೋಲ್ ಫ್ರೀ ಸಂಖ್ಯೆ: 1800 425 8330 ಗೆ ಹಾಗೂ 1912 ಗೆ ಕರೆ ಮಾಡಿ ದೂರು ನೀಡಬಹುದು ಅಥವಾ ಇ-ಮೇಲ್ [email protected] ಗೆ ದೂರು ಸಲ್ಲಿಸಬಹುದು ಹಾಗೂ ದೂ. ಸಂಖ್ಯೆ: 080-22536200 ಗೆ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!