ಮಂಗಳೂರು: ಶಿಷ್ಯವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

 ಮಂಗಳೂರು: ಶಿಷ್ಯವೇತನ  ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
Share this post

ಮಂಗಳೂರು, ಮೇ 21, 2021: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ಪ್ರಸ್ತುತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ,  ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ  ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ.

ವಿದ್ಯಾರ್ಥಿಗಳು ವೆಬ್‍ಸೈಟ್ ವಿಳಾಸ www.ssp.postmatric.karnataka.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಕಾರ್ಯಕ್ರಮಗಳ ವಿವರ, ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಯನ್ನು ವೆಬ್ ಸೈಟ್ ವಿಳಾಸ www.bcwd.karnataka.gov.in ಹಾಗೂ  ಇಲಾಖಾ ಸಹಾಯವಾಣಿ ದೂ ಸಂಖ್ಯೆ: 8050770005, 8050770004, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ, ದೂ ಸಂಖ್ಯೆ: 080-35254757 ಅಥವಾ ಇಮೇಲ್ ವಿಳಾಸ: [email protected] ನಲ್ಲಿ ಪಡೆಯಬಹುದು ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!