ಮಂಗಳೂರು: ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

 ಮಂಗಳೂರು: ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ
Share this post

ಮಂಗಳೂರು, ಮೇ 25, 2021: ತೋಟಗಾರಿಕೆ ಇಲಾಖೆ ವತಿಯಿಂದ ಖಾದ್ಯ ತೈಲ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸುವ ನಿಟ್ಟಿನಲ್ಲಿ ತಾಳೆ ಬೆಳೆ ಬೇಸಾಯ ಪ್ರಮುಖ ಪಾತ್ರ ವಹಿಸುತ್ತದೆ.

ಈ ನಿಟ್ಟಿನಲ್ಲಿ ಕೇಂದ್ರ ವಲಯದ ಸಾಮರ್ಥ್ಯವುಳ್ಳ ರಾಜ್ಯಗಳಲ್ಲಿ ಎಣ್ಣೆ ತಾಳೆಯ ವ್ಯವಸಾಯ ಯೋಜನೆಯಡಿ ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶವಿದ್ದು, ಇಚ್ಛೆಯುಳ್ಳ ರೈತರು ಸದರಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

ಈ ಯೋಜನೆಯಡಿಯಲ್ಲಿ ಸಹಾಯಧನ ಪಡೆಯಲು ಇಚ್ಛಿಸುವ ಆಸಕ್ತ ರೈತರುಗಳು ತಮ್ಮ ಜಮೀನಿನ ಪಹಣಿ ಪತ್ರ ಹಾಗೂ ಇತರೆ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಆಯಾ ತಾಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕು ಮಟ್ಟದ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.

  • ಮಂಗಳೂರು- ಮೊ.ನಂ. 8277806378 (0824-2423615)
  • ಬಂಟ್ವಾಳ- ಮೊ.ನಂ.8277806371 (08255-234102)
  • ಪುತ್ತೂರು-ಮೊ.ನಂ 9731854527 (08251-230905)
  • ಸುಳ್ಯ-ಮೊ.ನಂ. 9880993238 (08257-232020)
  • ಬೆಳ್ತಂಗಡಿ-ಮೊ.ನಂ. 8277806380 (08256-232148) ನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!