ಮಂಗಳೂರು ವಿಶ್ವವಿದ್ಯಾನಿಲಯ: ಇಂಗ್ಲೀಷ್ ವಿಷಯದಲ್ಲಿ ಅರ್ಜಿ ಆಹ್ವಾನ
ಮಂಗಳೂರು, ಮೇ 26, 2021: ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ, ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರದಲ್ಲಿ ಯೋಗ ವಿಜ್ಞಾನ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಹಾಗೂ ಮಂಗಳೂರಿನಲ್ಲಿ ಇಂಗ್ಲೀಷ್ ವಿಷಯದಲ್ಲಿ ಪ್ರಸ್ತುತ ಸಾಲಿನ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದೆ.
ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% (ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಟ 50%) ಅಂಕಗಳನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್ www.mangaloreuniversity.ac.in ನಿಂದ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಕುಲಸಚಿವರ ಕಚೇರಿಯ [email protected] ಮೂಲಕ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಕುಲಸಚಿವರ ಕಚೇರಿಯ ದೂರವಾಣಿ ಸಂಖ್ಯೆ: 0824-2287276 ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.