ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ : ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ ಮೇ 28, 2021: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟಲು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನುತಡೆಯುವುದುಅವಶ್ಯವಕವಾಗಿದ್ದು, ಸಾರ್ವಜನಿಕರಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಅವಶ್ಯಕ ಚಟುವಟಿಕೆಗಳನ್ನು ಹೊರತು ಪಡಿಸಿ, ಇತರೆ ಉದ್ದೇಶಗಳಿಗೆ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.
ಈ ಸಂದರ್ಭದಲ್ಲಿ ಯಾವುದೇ ಮೈಕ್ರೋ ಫೈನಾನ್ಸಗಳು/ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳ ಸಾಲ ವಸೂಲಾತಿದಾರರು, ಮನೆ ಮನೆಗೆ ಭೇಟಿ ನೀಡುವುದನ್ನು ಜೂನ್ 6 ರವರೆಗೆ ನಿರ್ಬಂಧಿಸಲಾಗಿದೆ.
ಯಾವುದೇ ಮೈಕ್ರೋ ಫೈನಾನ್ಸಗಳು/ ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳು ಸಾಲಗಾರರಿಗೆ ಸಾಲ ಮರು ಪಾವತಿ ಮಾಡಲು ಒತ್ತಡ ಹೇರುವಂತಿಲ್ಲ, ಅಲ್ಲದೇ ಸಾಲ ಮರುಪಾವತಿ ಮಾಡಲು ಒತ್ತಡ ಹೇರಿದ್ದಲ್ಲಿ , ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳಲು ನೋಡೆಲ್ ಅಧಿಕಾರಿಗಳನ್ನಾಗಿ , ರುದ್ರೇಶ್ ಡಿ.ಸಿ , ಲೀಡ್ ಡಿಸ್ಟ್ರಿಕ್ಟ್ ಮ್ಯಾನೆಜರ್, 9449860858, ಪ್ರವೀಣ್ ಬಿ.ನಾಯಕ್, ಸಹಕಾರ ಸಂಘಗಳ ಉಪನಿಬಂಧಕರು 9448633338 ಇವರನ್ನು ನೇಮಿಸಲಾಗಿದೆ.
ಈ ನೋಡೆಲ್ ಅಧಿಕಾರಿಗಳು ಸಾರ್ವಜನಿಕರಿಂದ ಸ್ವೀಕೃತವಾದ ಸಾಲ ಮರುಪಾವತಿ ಕುರಿತು ದೂರುಗಳಿಗೆ ತಕ್ಷಣವೇ ಸ್ಪಂದಿಸುವುದು. ಮೈಕ್ರೋ ಫೈನಾನ್ಸ್ಗಳು/ ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳು ಹಾಗೂ ಸಾರ್ವಜನಿಕರ ಮಧ್ಯೆ ಸಮನ್ವಯತೆಯಿಂದ ಯಾವುದೇ ಗೊಂದಲ/ ಸಂಘರ್ಷ ಉಂಟಾಗದoತೆ ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ನೀಡವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.