ಮಂಗಳೂರು: ಶಿಷ್ಯವೇತನ ಕ್ಕೆ ಅರ್ಜಿ ಆಹ್ವಾನ
ಮಂಗಳೂರು, ಮೇ 28, 2021: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
www.ssp.postmetric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ದೂ. ಸಂಖ್ಯೆ: 0824-2225078, ಸಹಾಯವಾಣಿ ಸಂಖ್ಯೆ: 8050770005, 8050770004 ಹಾಗೂ [email protected] ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.