ಉಡುಪಿ: ಜೂನ್ 1 ರಂದು ನಡೆಯುವ ಲಸಿಕಾಕರಣದ ಮಾಹಿತಿ
ಉಡುಪಿ ಮೇ 31, 2021: ಜೂನ್ 1 ರಂದು ಉಡುಪಿಯ ಹಲವೆಡೆ ಲಸಿಕೆ ನೀಡಲಾಗುವುದು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಸರಕಾರಿ ಪ್ರಾಥಮಿಕ ಶಾಲೆ ಆದಿ ಉಡುಪಿ ಯಲ್ಲಿ) 250 ಡೋಸ್, ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ (ಸೇಂಟ್ ಸಿಸಿಲಿ ಶಾಲೆ) 250 ಡೋಸ್, ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ) 400 ಡೋಸ್, ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ಇಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) 100 ಡೋಸ್ ಅನ್ನು ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗುವುದು.
45 ವರ್ಷ ಮೇಲ್ಪಟ್ಟ ಸಾರ್ವಜನಿಕರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಉಡುಪಿಯ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ (100 ಡೋಸ್) ನೀಡಲಾಗುವುದು.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಜೂನ್ 1 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.
ಈ ಕೆಳಗಿನ ರಾಜ್ಯ ಸರಕಾರ ಗುರುತಿಸಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳು ಲಸಿಕೆ ಪಡೆಯಲು ಅರ್ಹರಿರುತ್ತಾರೆ.
ವಿಕಲಚೇತನರು (ಮಾನಸಿಕ ಅಸ್ವಸ್ಥತೆ ಸೇರಿದಂತೆ), ಚಿತಾಗಾರ /ಸ್ಮಶಾನ /ರುದ್ರ ಭೂಮಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಸ್ವಸಹಾಯಕರು-ಅನುಬಂಧ 3 ರಲ್ಲಿ ಅರ್ಹತಾ ಪ್ರಮಾಣ ಪತ್ರ ಪಡೆದಿರುವವರು, ಕೋವಿಡ್ ಕರ್ತವ್ಯ ನಿರ್ವಹಿಸಲು ಆದೇಶ ಪತ್ರ ಪಡೆದ ಅಥವಾ ಅನುಬಂಧ 3 ರಲ್ಲಿ ಅರ್ಹತಾ ಪ್ರಮಾಣ ಪತ್ರ ಪಡೆದ ಕೋವಿಡ್ ಕರ್ತವ್ಯ ನಿರ್ವಹಿಸಿದ ಶಿಕ್ಷಕರು, ಸರಕಾರಿ ಸಾರಿಗೆ ಸಿಬ್ಬಂದಿ, ಲೈಸೆನ್ಸ್ ಹೊಂದಿರುವ ಆಟೋ ಚಾಲಕರು ಮತ್ತು ಬ್ಯಾಡ್ಜ್ ಹೊಂದಿರುವ ಕ್ಯಾಬ್ ಚಾಲಕರು, ವಿದ್ಯುತ್ ಮತ್ತು ನೀರು ಸರಬರಾಜು ಮಾಡುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಅಂಚೆ ಇಲಾಖೆಯ ಸಿಬ್ಬಂದಿಗಳು, ಬೀದಿ ಬದಿಯ ವ್ಯಾಪಾರಸ್ಥರು (ಗ್ರಾಮ ಪಂಚಾಯತ್ ಅಥವಾ ನಗರ ಸ್ಥಳೀಯ ಆಡಳಿತದಿಂದ ಅನುಬಂಧ-3 ರಲ್ಲಿ ಅರ್ಹತಾ ಪ್ರಮಾಣ ಪತ್ರ ಪಡೆದಿರುವವರು), ಭದ್ರತೆ ಮತ್ತು ಕಛೇರಿಗಳ ಹೌಸ್ ಕೀಪಿಂಗ್ ಸಿಬ್ಬಂದಿಗಳು, ನ್ಯಾಯಾಂಗ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ವಯೋವೃದ್ಧರ/ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಆರೈಕೆದಾರರು, ಮಕ್ಕಳ ಸಂರಕ್ಷಣಾಧಿಕಾರಿಗಳು ಮತ್ತು ಸಿಬ್ಬಂದಿಗಳು, ಮಾಧ್ಯಮದವರು, ಆಯಿಲ್ ಇಂಡಸ್ಟಿçà ಮತ್ತು ಗ್ಯಾಸ್ ಸರಬರಾಜು ಮಾಡುವವರು (ಪೆಟ್ರೋಲ್ ಬಂಕ್, ಕರ್ಮಚಾರಿ ಒಳಗೊಂಡAತೆ), ಆಸ್ಪತ್ರೆಗೆ ಸರಕು ಸರಬರಾಜು ಮಾಡುವ ವ್ಯಕ್ತಿಗಳು, ಆಸ್ಪತ್ರೆೆಗಳಿಗೆ ಆಕ್ಸಿಜನ್/ಔಷಧಿಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವ ಸಿಬ್ಬಂದಿಗಳು- ಅನುಬಂಧ-3 ರಲ್ಲಿ ಅರ್ಹತಾ ಪ್ರಮಾಣ ಪತ್ರ ಪಡೆದಿರುವವರು, ಅಧೀಕೃತ ಗುರುತಿನ ಚೀಟಿ ಹೊಂದಿರದ ಫಲಾನುಭವಿಗಳು (ವೃದ್ದಾಶ್ರಮ ವಾಸಿಗಳು, ನಿರ್ಗತಿಕರು)- ಅನುಬಂಧ-3 ರಲ್ಲಿ ಅರ್ಹತಾ ಪ್ರಮಾಣ ಪತ್ರ ಪಡೆದಿರುವವರು, ಭಾರತೀಯ ಆಹಾರ ನಿಗಮ ಸಿಬ್ಬಂದಿಗಳು ಮತ್ತು ಕರ್ನಾಟಕ ರಾಜ್ಯ ಆಹಾರ ನಿಗಮ ಸಿಬ್ಬಂದಿಗಳು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎ.ಪಿ.ಎಂ.ಸಿ) ಕೆಲಸಗಾರರು, ಕರ್ನಾಟಕ ರಾಜ್ಯ ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು, ಎಲ್.ಎಂ.ಒ ಸಿಬ್ಬಂದಿಗಳು, 18 ರಿಂದ 44 ವರ್ಷ ವಯೋಮಾನದಲ್ಲಿನ ಕೋಮಾರ್ಬಿಡಿಟಿ (ಭಾರತ ಸರಕಾರ ಸೂಚಿಸಲಾಗಿರುವ ಪಟ್ಟಿಯಲ್ಲಿರುವಂತೆ) ಹೊಂದಿರುವ ಫಲಾನುಭವಿಗಳು (ಸರಕಾರಿ ವೈದ್ಯಾಧಿಕಾರಿಗಳು/ ಟ್ರೀಟಿಂಗ್ ವೈದ್ಯಾಧಿಕಾರಿಗಳಿಂದ ನಿಗದಿತ ನಮೂನೆ ಯಲ್ಲಿ ದೃಢೀಕೃತ ಪ್ರಮಾಣ ಪತ್ರ ಪಡೆದಿರುವವರು), ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಸಿಬ್ಬಂದಿಗಳು, ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ತೋಟಗಾರಿಕೆ ಇಲಾಖೆಯ ಸಿಬ್ಬಂದಿಗಳು, ಭಾರತ್ ಎಲೆಕ್ಟಾçನಿಕ್ ಲಿಮಿಟೆಡ್(ಬಿ.ಇ.ಎಲ್) ಸಿಬ್ಬಂದಿಗಳು ಲಸಿಕೆ ಪಡೆಯಲು ಅರ್ಹರಿರುತ್ತಾರೆ.
ರಾಜ್ಯ ಸರಕಾರ ಗುರುತಿಸಿರುವ ಆದ್ಯತಾ ಗುಂಪುಗಳಿಗೆ (ಅನುಬಂಧ-2 ರಲ್ಲಿರುವ) ಲಸಿಕಾಕರಣದ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಜೂನ್ 1 ರಂದು ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ.