ಮನೆ ಮನೆಗೆ ತೆರಳಿ ಸೊಂಕು ಪತ್ತೆಹಚ್ಚುವ ಕಾರ್ಯದಲ್ಲಿ ಜನರ ಸಹಕಾರ ಅತ್ಯಗತ್ಯ : ಮುಲ್ಲೆ ಮುಹಿಲನ್

 ಮನೆ ಮನೆಗೆ ತೆರಳಿ ಸೊಂಕು ಪತ್ತೆಹಚ್ಚುವ ಕಾರ್ಯದಲ್ಲಿ ಜನರ ಸಹಕಾರ ಅತ್ಯಗತ್ಯ : ಮುಲ್ಲೆ ಮುಹಿಲನ್
Share this post
ಜಿಲ್ಲಾಧಿಕಾರಿ ಮುಲ್ಲೆ ಮುಹಿಲನ್ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು


ಕಾರವಾರ ಮೇ 31, 2021: ಆಶಾ ಕಾರ್ಯಕರ್ತೆಯರು ಹಾಗೂ ಕಿರಿಯ ಮಹಳಾ ಆರೋಗ್ಯ ಸಹಾಯಕಿಯರ ತಂಡ ಮನೆ-ಮೆನಗೆ ಭೇಟಿ ನೀಡಿ ಕೋವಿಡ್-19 ರೋಗ ಲಕ್ಷಣ ಇರುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರ ಸ್ವ್ಯಾಬ್ ಪರೀಕ್ಷೆ ಮಾಡಿ ಜನರಲ್ಲಿ ಅರಿವು ಮೂಡಿಸುವಂತಹ ಕಾರ್ಯಕ್ರಮವನ್ನು ಜಿಲ್ಲೆಯಾಧ್ಯಂತ ಹಮ್ಮಿಕೊಳ್ಳಲಾಗಿದ್ದು ಇದಕ್ಕೆ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಮುಲ್ಲೆ ಮುಹಿಲನ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಆಶಾ ಕಾರ್ಯಕರ್ತರು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೋವಿಡ್ ಲಕ್ಷಣಗಳನ್ನು ಹೊಂದಿರುವರು ಮಾಹಿತಿ ನೀಡಿ ಚಿಕಿತ್ಸೆ ಪಡೆಯಲು ಮುಂದಾಗಬೇಕು. ಮನೆಯಲ್ಲಿಯೇ ಸ್ವಯಂ ಚಿಕಿತ್ಸೆಗೆ ಪಡೆಯಬಾರದು. ಅಲ್ಲದೇ ಈ ಕಾರ್ಯಕ್ರಮದಲ್ಲಿ ಧೀರ್ಘ ಕಾಲದ ಕಾಯಿಲೆಯಿಂದ ಬಳಲುತ್ತಿರುವವರು ಹಾಗೂ ವಯೋ ವೃದ್ದರ ಪಲ್ಸ್ ಆಕ್ಸಿಮೀಟರ್ ಸಹಾಯದಿಂದ ಅಲ್ಲಿಯೇ ಪರೀಕ್ಷಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಗುಣಮುಖರಾದವರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿತರ ಪ್ರಮಾಣ ಕಡಿಮೆ ಆಗಿದೆ. ಅದೇ ರೀತಿ ಮರಣ ಪ್ರಮಾಣವೂ ಕೂಡ ಕಡಿಮೆಯಾಗುತ್ತಿದೆ. ಒಟ್ಟಾರೆಯಾಗಿ ಮರಣ ಪ್ರಮಾಣವನ್ನು 0% ಮಾಡುವ ಗುರಿಯನ್ನು ಹೋಂದಲಾಗಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 23 ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆಗಳೆಂದು ಗುರುತಿಸಲಾಗಿದ್ದು ಒಟ್ಟು 1351 ಹಾಸಿಗೆಗಳನ್ನು ಕೋವಿಡ್ ರೋಗಿಗಳ ಸಲುವಾಗಿ ಕಾದಿರಿಸಲಾಗಿದೆ. ಇದರಲ್ಲಿ 811 ಆಕ್ಸಿಜನ್ ಹಾಸಿಗೆಗಳನ್ನು ಗುರುತಿಸಲಾಗಿದೆ. ಇವುಗಳ ಜೊತೆಗೆ 16 ಕೋವಿಡ್ ಕೇರ್ ಸೆಂಟರ್ ಳನ್ನು ಗುರುತಿಸಲಾಗಿದೆ. ಇದರಲ್ಲಿ 1030 ಹಾಸಿಗೆಗಳನ್ನು ಮೀಸಲಿಡಲಾಗಿದೆ ಎಂದರು

ಜಿಲ್ಲೆಯಲ್ಲಿ ಕೇಂದ್ರೀಕೃತ ಕೋವಿಡ್ ಮ್ಯಾನೇಜ್ಮೆಂಟ್ ಸಿಸ್ಟಮ್ ಅನ್ನು ಸ್ಟೇಟ್ ಕೋವಿಡ್ ವಾರ್ ರೂಂ ನ ನಿರ್ದೇಶನದಂತೆ ತೆರೆಯಲಾಗಿದೆ . ಕೇಂದ್ರಿಕೃತ ಬೆಡ್ ಮ್ಯಾನೇಜ್ಮೆಂಟ್ ವ್ಯವಸ್ಥೆಯಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆಗಳನ್ನು ಬ್ಲಾಕ್ ಮಾಡಲು ಅಂದರೆ ಕಾಯ್ದಿರಿಸಲು ಅವಕಾಶಗಳನ್ನು ಮಾಡಿಕೊಡಲಾಗಿದೆ ಎಂದರು.

ಲೈನ್ ಲಿಸ್ಟ್ ಮೂಲಕ ಪಾಸಿಟಿವ್ ಪ್ರಕರಣಗಳನ್ನು ಗುರುತಿಸಿದಾಗ ಹಾಸಿಗೆ ಬೇಕಾದವರ ರೋಗಿಗಳಿಗೆ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಕಾಯ್ದಿರಿಸಬಹುದಾಗಿರುತ್ತದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್‍ವಷ್ಠಾಧಿಕಾರಿ ಶಿವಪ್ರಕಾಶ ದೇವರಾಜ ಅವರು ಮಾತನಾಡಿ ಲಾಕ್ ಡೌನ್ ಸಮಯದಲ್ಲಿ ಕೋವಿಡ್ ಜಿಲ್ಲೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ ತಪ್ಪಿತಸ್ಥರಿಂದ ದಂಡವನ್ನು ಮಾತ್ರ ಸಂಗ್ರಹಿಸಲಾಗಿದ್ದು ಲಾಠಿ ಚಾರ್ಜ ಮಾಡಲಾಗಿರುವದಿಲ್ಲ. ಸಾರ್ವಜನಿಕರು ಸಹಕಾರ ನೀಡಿದ್ದು ಜಿಲ್ಲಾಡಳಿತದೊಂದಿಗೆ ಪೊಲೀಸ್ ಇಲಾಖೆಯೂ ಜನರಿಗೆ ಕೃತಜ್ಞತೆ ಸಲ್ಲಿಸುತ್ತದೆ ಎಂದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ. ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!