ಉಡುಪಿ: ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಲಸಿಕೆ

 ಉಡುಪಿ: ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಲಸಿಕೆ
Share this post

ಉಡುಪಿ, ಜೂನ್ 04, 2021: ಉಡುಪಿ ನಗರ ಪ್ರದೇಶದ ಹಲವೆಡೆ ಜೂನ್ 5ರಂದು ಕೋವಿಡ್ ಲಸಿಕೆಯನ್ನು ನೀಡಲಾಗುವುದು.

ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ

  • ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳಿಗೆ 1)ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ)- 200 ಡೋಸ್.
  • ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ (ಸರಕಾರಿ ಪ್ರಾಥಮಿಕ ಶಾಲೆ ಆದಿಉಡುಪಿಯಲ್ಲಿ)- 250 ಡೋಸ್.
  • ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)-150 ಡೋಸ್

2ನೇ ಡೋಸ್ ಕೋವಿಶೀಲ್ಡ್ ಲಸಿಕೆ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ/ HCW/FLW (ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ)

  • ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ)- 50 ಡೋಸ್.

ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಉಡುಪಿ ನಗರ ಪ್ರದೇಶದ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 6 ವಾರ ಮೀರಿದ 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ/ ಊಅW/ ಈಐW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ)

  • ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ-250 ಡೋಸ್.
  • ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ)-300 ಡೋಸ್.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು CW/FLW (ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಇವರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ 05.06.2021 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬೇಕು.

ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು
ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 6 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು
ಅರ್ಹರಿರುತ್ತಾರೆ.

ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ.

Subscribe to our newsletter!

Other related posts

error: Content is protected !!