ಮಲೇರಿಯಾ, ಡೆಂಗ್ಯೂ ನಿಯಂತ್ರಣ ಕಾರ್ಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಡಾ. ರಾಜೇಂದ್ರ. ಕೆ. ವಿ

 ಮಲೇರಿಯಾ, ಡೆಂಗ್ಯೂ ನಿಯಂತ್ರಣ ಕಾರ್ಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಡಾ. ರಾಜೇಂದ್ರ. ಕೆ. ವಿ
Share this post


ಮಂಗಳೂರು, ಜೂನ್ 21, 2021: ಜಿಲ್ಲೆಯಲ್ಲಿ ಮಲೇರಿಯಾ, ಡೆಂಗ್ಯೂ, ಚಿಕೂನ್ಗುನ್ಯಾ, ಸೇರಿದಂತೆ ಮತ್ತಿತರ ರೋಗಗಳ ನಿಯಂತ್ರಣ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ಒಟ್ಟು 277 ಪ್ರಕರಣಗಳು ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ 22 ಮಲೇರಿಯಾ ಪ್ರಕರಣಗಳು ದಾಖಲಾಗಿದೆ ಹಾಗೆಯೆ ಒಟ್ಟು 104 ಡೆಂಗ್ಯೂ ಪ್ರಕರಣಗಳು ಕಂಡುಬಂದಿದೆ

ಅವರು ಇಂದು ತಮ್ಮ ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಮಲೇರಿಯಾ/ಡೆಂಗ್ಯೂ ನಿಯಂತ್ರಣದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭಗೊಂಡಿದ್ದು ಮಳೆ ನೀರು ಎಲ್ಲೆಂದರಲ್ಲಿ ನಿಂತು ಅದರಲ್ಲಿ ಸೊಳ್ಳೆ ಉತ್ಪತ್ತಿ ಹೆಚ್ಚಾಗಿ ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯಾ ಸೇರಿದಂತೆ ಮತ್ತಿತರ ರೋಗಗಳು ಹರಡುವ ಸಂಭವವಿದೆ. ಸಾರ್ವಜನಿಕರಲ್ಲಿ ಸೊಳ್ಳೆಗಳ ನಿಯಂತ್ರಣ ಹಾಗೂ ಆರೋಗ್ಯ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ಒಟ್ಟು 277 ಪ್ರಕರಣಗಳು ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ 22 ಮಲೇರಿಯಾ ಪ್ರಕರಣಗಳು ದಾಖಲಾಗಿದೆ ಹಾಗೆಯೆ ಒಟ್ಟು 104 ಡೆಂಗ್ಯೂ ಪ್ರಕರಣಗಳು ಕಂಡುಬಂದಿದೆ ಎಂದರು.

ಜನರಲ್ಲಿ ಜ್ವರದ ಪ್ರಕರಣಗಳು ಕಂಡುಬಂದಲ್ಲಿ ಕಡ್ಡಾಯವಾಗಿ ಮಲೇರಿಯಾ ರಕ್ತ ಪರೀಕ್ಷೆ ಮಾಡುವುದು ಸೂಕ್ತ ಎಂದ ಅವರು, ಮಂಗಳೂರು ನಗರದ ಬಂದರು, ಬೆಂಗ್ರೆ, ಜೆಪ್ಪು, ಲೇಡಿಹಿಲ್, ಪಡೀಲ್, ಎಕ್ಕೂರು, ಶಕ್ತಿನಗರ, ಕುಲಾಲ್, ಕುಳಾಯಿ ಹಾಗೂ ಸುರತ್ಕಲ್ ಪ್ರದೇಶಗಳಲ್ಲಿ ಹೆಚ್ಚು ಮಲೇರಿಯಾ/ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿವೆ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದರು.

ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಲಕಾಲಕ್ಕೆ ಘನತ್ಯಾಜ್ಯ ವಿಲೇವಾರಿ ಮಾಡಿ ಸೊಳ್ಳೆ ಉತ್ಪತ್ತಿಗೆ ಅವಕಾಶ ನೀಡಬಾರದು ಎಂದ ಅವರು, ಮೀನುಗಾರಿಕಾ ದೋಣಿಗಳಲ್ಲಿ ನೀರು ಸಂಗ್ರಹ ಟ್ಯಾಂಕ್, ಬ್ಯಾರಲ್‍ಗಳನ್ನು ಮುಚ್ಚಳದಿಂದ ಮುಚ್ಚಬೇಕು. ಸಣ್ಣ ದೋಣಿಗಳಲ್ಲಿಯೂ ಮತ್ತು ಪ್ಲಾಸ್ಟಿಕ್ ಕ್ರೇಟ್‍ಗಳಲ್ಲಿ, ಟೈರ್ ಮತ್ತು ವಾಣಿಜ್ಯ ಸಂಕೀರ್ಣಗಳ ಮೇಲ್ಚಾವಣಿಯಲ್ಲಿ, ಅಂಗಡಿಗಳಲ್ಲಿ ಸಂಗ್ರಹವಾಗುವ ಎಳನೀರು ಚಿಪ್ಪುಗಳಲ್ಲಿ ಹಾಗೂ ತಂಪು ಪಾನೀಯದ ಖಾಲಿ ಬಾಟಲ್‍ಗಳಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಪಂಚಾಯತ್ ವ್ಯಾಪ್ತಿಯಲ್ಲಿ ಟಾಸ್ಕ್ ಫೋರ್ಸ್ ಸಭೆಯನ್ನು ನಡೆಸಿ ಮಲೇರಿಯಾ/ಡೆಂಗ್ಯೂ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಹಾಗೂ ಸ್ವಚ್ಛತೆಯಿಲ್ಲದಿರುವ ಜನವಸತಿ ಪ್ರದೇಶಗಳನ್ನು ಗುರುತಿಸಿ ಮನೆಯ ಸುತ್ತಮುತ್ತಲಿನ ಜಾಗವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ಮನೆಯ ಮಾಲೀಕರಿಗೆ ಸೂಚನೆ ನೀಡಬೇಕು ಹಾಗೂ ಧ್ವನಿವರ್ಧಕದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾಧಿಕಾರಿ ಹೇಳಿದ್ದು

  • ಪ್ರತಿಯೊಂದು ಶಿಕ್ಷಣ ಸಂಸ್ಥೆಗಳ ಕಟ್ಟಡಗಳು ಹಾಗೂ ಪರಿಸರದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು.
  • ಶಾಲಾ-ಕಾಲೇಜು ಆರಂಭಕ್ಕೆ ಮುನ್ನ ಸೊಳ್ಳೆ ಉತ್ಪತ್ತಿ ತಾಣಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಮಾಹಿತಿ ನೀಡಬೇಕು.
  • ಮಲೇರಿಯಾ/ಡೆಂಗ್ಯೂ ರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.
  • ಪ್ರತಿಯೊಂದು ಅಂಗನವಾಡಿ ಕಟ್ಟಡಗಳು ಮತ್ತು ವಸತಿ ನಿಲಯಗಳಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಕಾಲಕಾಲಕ್ಕೆ ರಾಸಾಯನಿಕ ಸಿಂಪಡಣೆಯನ್ನು ಮಾಡಬೇಕು.
  • ಜ್ವರದ ಪ್ರಕರಣಗಳ ಮಾಹಿತಿಯನ್ನು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಆರೋಗ್ಯ ಇಲಾಖೆಗೆ ನೀಡಬೇಕು ಎಂದರು.
  • ಹೂವಿನ ಕುಂಡಗಳಲ್ಲಿ ಹೆಚ್ಚಾಗಿ ನೀರು ನಿಲ್ಲದಂತೆ ಗಮನಹರಿಸಬೇಕು ಹಾಗೂ ತೊಟಗಳಿಗೆ ಹೋಗುವಾಗ ಮೈತುಂಬಾ ಬಟ್ಟೆ ಧರಿಸುವುದು, ಬೇವಿನ ಎಣ್ಣೆ ಹಚ್ಚಿಕೊಳ್ಳುಬೇಕು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಕುಮಾರ್, ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಿತ ರೋಗಿಗಳ ನಿಯಂತ್ರಣಾಧಿಕಾರಿ ಡಾ.ನವೀನ್ ಚಂದ್ರ ಕುಲಾಲ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!