ಉಡುಪಿ: ಸಾರ್ವಜನಿಕ ಅಹವಾಲು ಸಭೆ

 ಉಡುಪಿ: ಸಾರ್ವಜನಿಕ ಅಹವಾಲು ಸಭೆ
Share this post

ಉಡುಪಿ, ಅ 14, 2021: ಕಾರ್ಕಳ ತಾಲೂಕು ಮರ್ಣೆ ಗ್ರಾಮದಲ್ಲಿ ಸಾಮಾಜಿಕ ಅರಣ್ಯ ವತಿಯಿಂದ ಬೆಳೆಸಿದ ಅಕೇಶಿಯಾ
ನೆಡುತೋಪಿನಲ್ಲಿರುವ ಒಟ್ಟು 636 ಮರಗಳನ್ನು ಕಡಿಯಲು ಉದ್ದೇಶಿಸಿದ್ದು, ಈ ಕುರಿತಂತೆ ಸಾರ್ವಜನಿಕರ ಅಹವಾಲು ಸಭೆಯನ್ನು ಅಕ್ಟೋಬರ್ 25 ಬೆಳಗ್ಗೆ 11 ಗಂಟೆಗೆ ವಲಯ ಅರಣ್ಯ ಅಧಿಕಾರಿ ಕಾರ್ಕಳ ವಲಯ ಕಾರ್ಕಳ ಇವರ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆಯನ್ನು ಕರೆಯಲಾಗಿದೆ.

ಈ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಖುದ್ದಾಗಿ ಸಭೆಯಲ್ಲಿ ಹಾಜರಾಗಿ ಆಕ್ಷೇಪಣೆಯನ್ನು ಸಲ್ಲಿಸಬಹುದು ಅಥವಾ ಸದ್ರಿ ದಿನಾಂಕದ ಒಳಗಾಗಿ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ವಿಭಾಗ, ಕುಂದಾಪುರ ಇವರಿಗೆ ಲಿಖಿತರೂಪದಲ್ಲಿ ಆಕ್ಷೇಪಣೆಯನ್ನು ಸಲ್ಲಿಸಬಹುದು.

ಇಮೇಲ್ [email protected] ಅಥವಾ ಅಂಚೆ ವಿಳಾಸ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ, ಕುಂದಾಪುರ
576201 ಗೆ ಸಹ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!