ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ
ಶಿರ್ವ, ನ 24, 2021: ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಎನ್.ಎಸ್.ಎಸ್. ಘಟಕದ ಆಶ್ರಯದಲ್ಲಿ ಇಂದು “ಮಹಿಳಾ ದಿನ” ವನ್ನು ಆಚರಿಸಲಾಯಿತು.
ಸಮಾರಂಭದ ಮುಖ್ಯ ಅತಿಥಿಯಾಗಿದ್ದ ಎ.ವಿ. ಬಾಳಿಗಾ ಆಸ್ಪತ್ರೆಯ ಮನೋವೈದ್ಯರಾದ ದಿವ್ಯಶ್ರೀಯವರು, ಶಿಕ್ಷಣದಿಂದ ಸ್ವಾವಲಂಬನೆ, ಸ್ವಾವಲಂಬನೆಯಿಂದ ಭಾವನಾತ್ಮಕ ಸಧೃಢತೆ, ಭಾವನಾತ್ಮಕ ಧೃಢತೆಯಿಂದ ಮಹಿಳೆಯರ ಸಬಲೀಕರಣ ಸಾದ್ಯವಾಗುತ್ತದೆ, ಆದ್ದರಿಂದ ಮಹಿಳೆಯರ ಶಿಕ್ಷಣಕ್ಕೆ ಆದ್ಯತೆಯನ್ನು ನೀಡಬೇಕೆಂದು ನುಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ನಯನ, ಮಹಿಳೆಯರ ಮೇಲಿನ ದೌರ್ಜನ್ಯಗಳು ದಿನೇ ದಿನೇ ಹೆಚ್ಚುತ್ತಿರುವ ಸಂದರ್ಭದಲ್ಲಿ ಮಹಿಳೆಯರಲಿ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ಕಾರ್ಯಕ್ರಮಗಳ ಅಗತ್ಯವಿದೆ ಎಂದು ತಿಳಿಸಿದರು.
ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಪ್ರೊ. ಟಿ. ಮುರುಗೇಶಿ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು, ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿ ನಾಯಕಿ, ವಿದ್ಯಾ ಕಾರ್ಯಕ್ರಮ ನಿರೂಪಿಸಿ, ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿ ನಾಯಕ ಶ್ರೀ ಕಾರ್ತೀಕ್ ಧನ್ಯವಾದ ಸಮರ್ಪಿಸಿದರು.