ಕುಂದಾಪುರ: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪ್ರಕಟ
ಉಡುಪಿ, ಡಿ 01, 2021: ಕೇಂದ್ರ ಮೌಲ್ಯಮಾಪನ ಸಮಿತಿ ಬೆಂಗಳೂರು ಇವರ ಸೂಚನೆಯಂತೆ ಪ್ರಸಕ್ತ ಸಾಲಿನಲ್ಲಿ ಕುಂದಾಪುರ ಉಪ ನೋಂದಣಿ ಕಚೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದ್ದು, ಸದರಿ ಕರಡು ಪರಿಷ್ಕೃತ ದರಪಟ್ಟಿಯನ್ನು ಸಾರ್ವಜನಿಕರ ಅವಗಾಹನೆಗಾಗಿ ಕುಂದಾಪುರದ ಉಪ ನೋಂದಣಾಧಿಕಾರಿ ಹಾಗೂ ತಹಶೀಲ್ದಾರರ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು 15 ದಿನಗಳ ಒಳಗೆ, ಸಂಬಂಧಪಟ್ಟ ಪ್ರಾಧಿಕಾರಕ್ಕೆ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಕುಂದಾಪುರದ ಉಪ ನೋಂದಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.