ಮುನ್ನೆಚ್ಚರಿಕಾ ಡೋಸ್ ಪಡೆಯಲು ಕರೆ
ಮಂಗಳೂರು,ಜು.15, 2022: ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದಡಿ 18-59 ವರ್ಷದೊಳಗಿನ ಎಲ್ಲರಿಗೂ ಜು.15 ರಿಂದ 75 ದಿನ (ಸೆಪ್ಟಂಬರ್ 30 ತನಕ) ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಮುನ್ನೆಚ್ಚರಿಕಾ ಲಸಿಕಾ ಡೋಸ್ಗಳನ್ನು ನೀಡಲಾಗುತ್ತಿದೆ.
ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆ ಹಾಗೂ ವೆನ್ಲಾಕ್ನಲ್ಲಿ ಮುನ್ನೆಚ್ಚರಿಕಾ ಲಸಿಕಾಡೋಸ್ಗಳನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.