ಇ-ಕೆವೈಸಿ: ಇಂದೇ ಕೊನೆಯ ದಿನ
ಮಂಗಳೂರು, ಸೆ.07: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ-ಕಿಸಾನ್) ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸಪ್ಟೆಂಬರ್ 7 ಕೊನೆಯ ದಿನವಾಗಿದೆ.
ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಸ್ಮಾರ್ಟ್ ಫೋನ್ ಬಳಸುವ ರೈತರು http://pmkisan.gov.in ಪೋರ್ಟಲ್ನ ಫಾರ್ಮರ್ಸ್ ಕೋರ್ನರ್ನ ಇ-ಕೆವೈಸಿ ಅವಕಾಶದಡಿ ತಮ್ಮ ಆಧಾರ್ ಸಂಖ್ಯೆಯನ್ನು ಮತ್ತು ಮೊಬೈಲ್ ಸಂಖ್ಯೆಯನ್ನು ದಾಖಲಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.
ಇಲ್ಲಿ ಕ್ಲಿಕ್ ಮಾಡಿ: https://exlink.pmkisan.gov.in/aadharekyc.aspx
ರೈತರು ನಾಗರಿಕ ಸೇವಾ ಕೇಂದ್ರ (ಸಿಎಸ್ಸಿ)/ ಗ್ರಾಮ ಒನ್ ಸೇವಾ ಕೇಂದ್ರದಲ್ಲಿಯೂ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿಯನ್ನು ಮಾಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.