ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ
ಕಾರವಾರ ಸೆ 24 : ಕರ್ನಾಟಕ ಜಾನಪದ ಅಕಾಡೆಮಿಯು 2019ರ ಜನವರಿ 1ರಿಂದ ಡಿಸೆಂಬರ್ 31ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಠ 150 ಪುಟಗಳ ಮಿತಿಯಲ್ಲಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ, ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆ ಅಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.
ಲೇಖಕರು, ಪ್ರಕಾಶಕರು, ಸಂಪಾದಕರು ನಾಲ್ಕು ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ಅಕ್ಟೋಬರ್ 25ರೊಳಗಾಗಿ ರಿಜಿಸ್ಟ್ರಾರ್ ಕರ್ನಾಟಕ ಜಾನಪದ ಅಕಾಡೆಮಿ 2ನೇ ಮಹಡಿ ಕನ್ನಡ ಭವನ ಜೆಸಿ ರಸ್ತೆ ಬೆಂಗಳೂರು-560002 ಈ ವಿಳಾಸಕ್ಕೆ ಖುದ್ದಾಗಿ ಕೋರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಎನ್.ನಮ್ರತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.