ವಿಕಲಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ: ಅರ್ಜಿ ಆಹ್ವಾನ
ಮಂಗಳೂರು,ಡಿ.05, 2022: ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಫಜೀರು ಹಾಗೂ ಸಜೀಪನಡು ಗ್ರಾಮ ಪಂಚಾಯತ್ಗಳಲ್ಲಿ ಖಾಲಿ ಇರುವ ವಿಕಲಚೇತನರ (ಅಂಗವಿಕಲ) ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಮಾಸಿಕ 9,000 ರೂ.ಗಳ ಗೌರವಧನದೊಂದಿಗೆ ಅರ್ಜಿ ಆಹ್ವಾನಿಸಿದೆ.
ಎಸ್.ಎಸ್.ಎಲ್.ಸಿ. ಉತ್ತೀರ್ಣ ಅಥವಾ ಅನುತ್ತೀರ್ಣರಾದ 18-45 ವಯೋಮಿತಿಯ ವಿಕಲಚೇತನ (ಅಂಗವಿಕಲ)ರನ್ನು ಗ್ರಾಮ ಪಂಚಾಯತ್ಗೆ ಒಬ್ಬರಂತೆ ಆಯ್ಕೆ ಮಾಡಲಾಗುವುದು.
ಅರ್ಹರು ಇದೇ ಡಿ.31ರೊಳಗೆ ಬಂಟ್ವಾಳ ತಾಲೂಕಿನ, ಕೈಕುಂಜೆ ಗ್ರಾಮ ಪಂಚಾಯತ್ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.