ಏ. 4 ರಂದು ಭಗವಾನ್ ಮಹಾವೀರ ಜಯಂತಿ
ಮಂಗಳೂರು,ಏ.03, 2023: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಭಗವಾನ್ ಮಹಾವೀರ ಜಯಂತಿಯನ್ನು ಏ.4ರ ಮಂಗಳವಾರ ಬೆಳಿಗ್ಗೆ 10.30ಕ್ಕೆ ನಗರದ ಉರ್ವಾಸ್ಟೋರ್ ನ ತುಳುಭವನದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.