ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಾಯಿಸಿ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಕಾರವಾರ,ಅ.19, 2023: ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡುವುದು ಅಗತ್ಯವಿದೆ. ಬೆಳೆನಷ್ಠ ಪರಿಹಾರ (ಇನ್ಪುಟ್ ಸಬ್ಸಿಡಿ) ಬೆಳೆವಿಮೆ ಪರಿಹಾರ, ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ಸಾಲ ಯೋಜನೆ ಹಾಗೂ ಬೆಳೆ ಸಮೀಕ್ಷೆ ಮಾಹಿತಿಗಾಗಿ ಸರ್ವೆ ನಂಬರ್ ಗೆ ಆಧಾರ್ ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ.
ಆದ್ದರಿಂದ ಜಿಲ್ಲೆಯಲ್ಲಿ ಇದುವರೆಗೂ ನೋಂದಣಿ ಮಾಡದೇ ಇರುವ ರೈತರು ತುರ್ತಾಗಿ ಅಗತ್ಯ ದಾಖಲೆಗಳಾದ ಪಹಣಿ ಪತ್ರಿಕೆ, ಆಧಾರ ಕಾರ್ಡ್ ಪ್ರತಿ,ಬ್ಯಾಂಕ್ ಖಾತೆಯ ವಿವರದ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಎಸ್ಸಿ ಮತ್ತು ಎಸ್.ಟಿ ರೈತರುಗಳಿಗೆ ಮಾತ್ರ) ತಮ್ಮ ಸಮೀಪದ ಗ್ರಾಮ ಲೆಕ್ಕಧಿಕಾರಿ ರೈತ ಸಂಪರ್ಕ ಕೇಂದ್ರ ಸಹಾಯಕ ಕೃಷಿ ನಿರ್ದೇಶಕರ ಕಛೇರಿ, ಸಹಾಯಕ ನಿರ್ದೇಶಕರು ತೋಟಗಾರಿಕೆ ಇಲಾಖೆ ಹಾಗೂ ರೇಷ್ಮೆ ಇಲಾಖೆಯ ತಾಲ್ಲೂಕು ಕಛೇರಿಗಳಿಗೆ ಭೇಟಿ ನೀಡಿ ಎಫ್.ಐ.ಡಿ (Farmer Identification Number) ಪಡೆದುಕೊಂಡು ಆಧಾರ ಜೋಡಣೆ ಮಾಡಿಕೊಳ್ಳಬೇಕು.
ಈಗಾಗಲೇ ಎಫ್.ಐ.ಡಿ ನಂಬರ ಹೊಂದಿರುವ ರೈತರು ತಮ್ಮ ಎಲ್ಲಾ ಭೂಹಿಡುವಳಿಗಳ ಮಾಹಿತಿಯನ್ನು ಫ್ರೋಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.