ಮುಖ್ಯಮಂತ್ರಿ ಅಲ್ಪಾವಧಿ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
ಮಂಗಳೂರು,ಜ.17, 2024: ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ಹಿಂದುಳಿದ ವರ್ಗಗಳ ಐ.ಟಿ.ಐ., ಡಿಪ್ಲೋಮಾ, ಹಾಗೂ ಪದವಿ ಪೂರೈಸಿದ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.), ಮಂಗಳೂರು ಈ ಸಂಸ್ಥೆಯಲ್ಲಿ ಸಿಸ್ಕೊ ಸರ್ಟಿಫೈಡ್ ನೆಟ್ವರ್ಕ್ ಅಸೋಸಿಯೇಟ್ (ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್, ಟ್ಯಾಲಿ ERP/PRIME ಕೋರ್ಸ್ಗಳಲ್ಲಿ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗೆ ಅರ್ಜಿ ಸಲ್ಲಿಸಬಹುದು.
ಆಸಕ್ತ ಅಭ್ಯರ್ಥಿಗಳು ಮಂಗಳೂರಿನ ಕದ್ರಿಹಿಲ್ಸ್ನಲ್ಲಿರುವ ಸರಕಾರಿ ಮಹಿಳಾ ಐ.ಟಿ.ಐ.ಯ ಎರಡನೇ ಮಹಡಿಯಲ್ಲಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.)ಯ ಕಚೇರಿಯಿಂದ ಅರ್ಜಿ ಪಡೆದು ತರಬೇತಿಗೆ ಹೆಸರು ನೊಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2211477, 8277741731 ಸಂಪರ್ಕಿಸುವಂತೆ ಕೆ.ಜಿ.ಟಿ.ಟಿ.ಐ. ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.