ಅಸಾಧರಣ ಸಾಧನೆ ಮಾಡಿದ ಮಕ್ಕಳಿಂದ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕಾರವಾರ, ನ.16, 2024: ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ ಮತ್ತು ಕಲೆ, ಸಾಂಸ್ಕೃತಿಕ, ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವಯೋಮಾನದ ಮಕ್ಕಳನ್ನು ಗುರುತಿಸಿ 2024-25 ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ನೆಲೆಸಿರುವ ಹಾಗೂ ಮೇಲ್ಕಂಡ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ 5 ರಿಂದ 18 ವರ್ಷ ವರ್ಷದೊಳಗಿನ (ದಿನಾಂಕ 1-08-2006 ರಂದು ಹಾಗೂ ನಂತರ ಹುಟ್ಟಿದ) ಮಕ್ಕಳು ಈ ಪ್ರಶಸ್ತಿಗೆ ಆರ್ಹರಾಗಿರುತ್ತಾರೆ.
ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000 ನಗದು ಬಹುಮಾನ ಹಾಗೂ ಪ್ರಶಸ್ತಿಯನ್ನು ನೀಡಲಾಗುವುದು.ಪ್ರಸಕ್ತ ಸಾಲಿನ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬಯಸುವವರು ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಸಂಬAಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ನ.30 ರೊಳಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರವಾರ ಇವರಿಗೆ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.