ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ
ಉಡುಪಿ, ಸೆಪ್ಟಂಬರ್ 21, 2025: ಜಿಲ್ಲೆಯಲ್ಲಿ ತೆರವಾಗಿರುವ ಸಾಮಾನ್ಯ ಕರ್ತವ್ಯದ ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ರೋಸ್ಟರ್ ಕಂ ಮೆರಿಟ್ ಆಧಾರದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ ತೆರವಾಗಿರುವ ಸಂಸ್ಥೆಗಳು:
- ಕುಂದಾಪುರ ಸಾರ್ವಜನಿಕ ಆಸ್ಪತ್ರೆ-೧
- ಕಾರ್ಕಳ ಸಾರ್ವಜನಿಕ ಆಸ್ಪತ್ರೆ-೨
- ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರ-೧
- ಬೈಂದೂರು ಸಮುದಾಯ ಆರೋಗ್ಯ ಕೇಂದ್ರ-೧
- ದುರ್ಗಾ ಪ್ರಾಥಮಿಕ ಆರೋಗ್ಯ ಕೇಂದ್ರ-೧
- ಸಂಚಾರಿ ಗಿರಿಜನ ಆರೋಗ್ಯ ಘಟಕ-೧
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ದೂ.ಸಂ: ೦೮೨೦-೨೫೨೫೫೬೬/೨೫೩೬೬೫೦ ಅನ್ನು ಸಂಪರ್ಕಿಸುವAತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಪ್ರಕಟಣೆ ತಿಳಿಸಿದೆ.
