ಉಡುಪಿ, ನ 04: ನಿರ್ವಹಣಾ ಕಾರ್ಯಗಳಿಂದಾಗಿ, ನವೆಂಬರ್ 5 ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ರವರೆಗೆ ಉಡುಪಿ ಜಿಲ್ಲೆಯ ಈ ಕೆಳಗಿನ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆRead More
ಬಿದ್ದು ಕೊಳೆಯಲು ಬಿಡದೆ ಬಳಸಿ ಸವೆತವೆ ಲೇಸುಎದ್ದು ತಿರುಗಲಿ ದಣಿದು ನಿಲುಗಡೆಯ ತನಕಸದ್ದು ಮಾಡುವ ಕಪ್ಪೆ, ಶುದ್ಧ ಮಾಡುವ ಮೀನುಗೆದ್ದು ಬಾಳಲು ಬೆಳಕು ಪಣಿಯರಾಮ ||೦೦೯೪|| ಜಯರಾಂ ಪಣಿಯಾಡಿRead More
ಉಡುಪಿ, ನ ೦3: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (CBRSETI) ಮಣಿಪಾಲ ಇವರ ವತಿಯಿಂದ ನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ 18 ನವೆಂಬರ್ 2020 ರಿಂದ 13 ದಿನಗಳ “ಕೃತಕ ಆಭರಣಗಳ ತಯಾರಿಕೆ”ಉಚಿತ ತರಬೇತಿಯನ್ನು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಊಟ – ವಸತಿ ಸಂಪೂರ್ಣವಾಗಿ ಉಚಿತವಾಗಿದ್ದು; ಸಂಬಂಧಿಸಿದ ಕ್ಷೇತ್ರದ ಬಗ್ಗೆ ವಿಸ್ತಾರವಾಗಿ ತಿಳಿಸುವುದರ ಜೊತೆಗೆ ಉದ್ಯಮಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿ ಮಾಹಿತಿ ನೀಡಲಾಗುತ್ತದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ […]Read More
ಮಂಗಳೂರು ನ 03: ಪ್ರಸ್ತುತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನ ಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿ, ಮೌಲನಾ ಅಝಾದ್ ಭವನ, ಓಲ್ಡ್ಕೆಂಟ್ ರಸ್ತೆ, ಪಾಂಡೇಶ್ವರ ಮಂಗಳೂರು ಇವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಮಂಗಳೂರು ನ 03 : ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತುತ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ನವೆಂಬರ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೇಡಿಯೋ ಪಾರ್ಕ್ […]Read More
ಉಡುಪಿ, ನ 02:: ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತಂತೆಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ, ಕಾರ್ಕಳ ಮತ್ತು ಕುಂದಾಪುರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಾಮಾನ್ಯ ಭತ್ತವನ್ನು ಕ್ವಿಂಟಾಲ್ ಗೆ ೧೮೬೮ ರೂ ದರದಲ್ಲಿ ಮತ್ತು ಗ್ರೇಡ್ […]Read More
ಮಣಿಪಾಲ್, ನ 02: ಟೆಸ್ಟ್ ಡ್ರೈವ್ ಗೆ ವಾಹನ ಪಡೆದ ವ್ಯಕ್ತಿ ವಾಹನದೊಂದಿಗೆ ಪರಾರಿಯಾದ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ಅಕ್ಟೋಬರ್ 31 ರಂದು ಮಧ್ಯಾಹ್ನ 2.50 ಕ್ಕೆ ಲಕ್ಷ್ಮೀಂದ್ರ ನಗರದಲ್ಲಿರುವ ನ್ಯೂ ಮಣಿಪಾಲ್ ಬಜಾರ್ ಎಂಬ ಸೆಕೆಂಡ್ ಹ್ಯಾಂಡ್ ಶಾಪ್ ಗೆ ವ್ಯಕ್ತಿಯೊಬ್ಬ ಬಂದು ತನ್ನನ್ನು ಗಣೇಶ್ ಉದ್ಯಾವರ ಎಂದು ಪರಿಚಯಿಸಿಕೊಂಡು ಹಳೆಯ ದ್ವಿಚಕ್ರ ವಾಹನ ಬೇಕೆಂದು ಅಲ್ಲೇ ಇದ್ದ ಟಿ ವಿ ಎಸ್ ವಿಕ್ಟರ್ ಬೈಕನ್ನು ಟೆಸ್ಟ್ ರೈಡ್ ಗೆ ಪಡೆದುಕೊಂಡರು. ಬೈಕ್ […]Read More
ಮಿತ್ತಬಾಗಿಲು ಗ್ರಾಮದ ಮನೆಮನೆಗೂ ತಲುಪುತ್ತಿದೆ ಈ ಮೂವರ ತಂಡ ಶ್ವೇತಾ ಎಸ್ ಬೆಳ್ತಂಗಡಿ , ನ 01: ಬೆಟ್ಟಗುಡ್ಡಗಳನ್ನು ಹತ್ತಿ ಇಳಿದು, ಹಳ್ಳ ಕೊಳ್ಳಗಳನ್ನು ದಾಟಿ ಈ ಮೂರು ಮಂದಿಯ ತಂಡ ದನಕರುಗಳಿರುವ ಪ್ರತಿಯೊಂದು ಮನೆಗೆ ಭೇಟಿ ಕೊಡುತ್ತಿದೆ. ‘ಕಾಲು ಮತ್ತು ಬಾಯಿ ರೋಗ’ದ ವಿರುದ್ಧದ ಹೋರಾಟದಲ್ಲಿ, ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಮಿತ್ತಬಾಗಿಲು ಗ್ರಾಮದಲ್ಲಿ ಅವರಿಗೆ ಇದು ಸುಲಭದ ಕೆಲಸವಲ್ಲ. ವ್ಯಾಕ್ಸಿನೇಟರ್ ಮೋನಪ್ಪ, ಕುಸುಮಾ ಮತ್ತು ಶಾರದಾ ಅವರನ್ನೊಳಗೊಂಡ ಮೂರು ಮಂದಿಯ ತಂಡ ಈಗಾಗಲೇ ಗ್ರಾಮದ 100 […]Read More
ಕಾರವಾರ ನ 01: 65ನೇ ಕರ್ನಾಟಕ ರಾಜ್ಯೋತ್ಸವವನ್ನು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಸಹಯೋಗದಲ್ಲಿ ನಗರದ ಜಿಲ್ಲಾ ಸಶಸ್ತ್ರ ಪೊಲೀಸ್ ಪರೇಡ್ ಮೈದಾನದಲ್ಲಿ ಆಚರಿಸಲಾಯಿತು. ಕಾರ್ಮಿಕ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು. “ಕನ್ನಡ ನಾಡಿನ ಎಲ್ಲಾ ಸಂಸ್ಕೃತಿ ಮತ್ತು ಆಚರಣೆಗಳನ್ನು ಹೊಂದಿರುವ ಏಕೈಕ ಜಿಲ್ಲೆಯೆಂದರೆ ಅದು ಉತ್ತರ ಕನ್ನಡ ಜಿಲ್ಲೆಯಾಗಿದೆ. ಕರಾವಳಿ, ಮಲೆನಾಡು ಹಾಗೂ ಬಯಲು ಸೀಮೆಯನ್ನು ಹೊಂದಿರುವ ನಮ್ಮ ಜಿಲ್ಲೆ ಅಪಾರ […]Read More
