ಮಂಗಳೂರು ಅ13:- ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನುಭರ್ತಿ ಮಾಡುವ ಸಲುವಾಗಿ ಅಕ್ಟೋಬರ್ 18 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಲಿಖಿತ ಪರೀಕ್ಷೆಗಳನ್ನು ಪೂರ್ವ ನಿಗಧಿಯಾಗಿರುವಂತೆ ಮಂಗಳೂರಿನ ಮೇರ್ಲಪದವು ಶ್ರೀನಿವಾಸ ಇನ್ಸ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಇಂಜಿನಿಯರಿಂಗ್ ಕಾಲೇಜು, ಮತ್ತು ಅಡ್ಯಾರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮೆನೇಜ್ಮೆಂಟ್ ಇಲ್ಲಿ ನಡೆಸಲಾಗುವುದು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ 90 ನಿಮಿಷ ಮುಂಚಿತವಾಗಿ ಹಾಜರಿರುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಮಂಗಳೂರು ಅ13:- ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆಯಿಂದ ನೀಡಲಾಗುತ್ತಿರುವ ಒಟ್ಟು ಆರು ಸೇವೆಗಳಾದ ಮಾಜಿ ಸೈನಿಕರ ಹಾಗೂ ಮೃತ ಮಾಜಿ ಸೈನಿಕರ ಪತ್ನಿಗೆ ಗುರುತಿನ ಚೀಟಿ ವಿತರಿಸುವುದು, ಉದ್ಯೋಗ ನೋಂದಣಿ, ಸಿ.ಇ.ಟಿ ಪ್ರಮಾಣ ಪತ್ರ, ಕನ್ನಡಕ ಅನುದಾನ, ಮದುವೆ ಅನುದಾನ ಹಾಗೂ ಮನೆ ದುರಸ್ಥಿ ಅನುದಾನ (ಯುದ್ಧ ಸಂತ್ರಸ್ಥರ ಪ್ರಕರಣಗಳಿಗೆ) ಸೇವೆಗಳನ್ನು ಕರ್ನಾಟಕ ಸಕಾಲ ಸೇವೆಗಳ ಮುಖಾಂತರ ನೀಡಲು ಸರ್ಕಾರವು ತಿರ್ಮಾನಿಸಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಆನ್ಲೈನ್ ತಂತ್ರಾಂಶ ಸೇವಾ ಸಿಂಧು www.sakala.kar.nic.in ಜಾಲತಾಣದಿಂದ […]Read More
ಮಂಗಳೂರು ಅ 12 : ಮಂಗಳೂರು ತಾಲೂಕಿನಲ್ಲಿ ಬೆಳೆ ಸಮೀಕ್ಷೆ ಮೂಲಕ ಮುಂಗಾರು ಹಂಗಾಮಿನಲ್ಲಿ ರೈತರ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಸರ್ಕಾರವು ಈ ಬೆಳೆಗಳ ಮಾಹಿತಿಯನ್ನು ಬೆಳೆ ವಿಮೆ, ಕನಿಷ್ಠ ಬೆಂಬಲ ಬೆಲೆ, ಬೆಳೆ ನಷ್ಟ ಪರಿಹಾರ ಇತ್ಯಾದಿ ಯೋಜನೆಗಳಲ್ಲಿ ಉಪಯೋಗಿಸುವುದರಿಂದ ಬೆಳೆ ಮಾಹಿತಿ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ಬೆಳೆ ದರ್ಶಕ್ – 2020 ಮೊಬೈಲ್ ಆ್ಯಪ್ ಅಭಿವೃದ್ಧಿ ಪಡಿಸಲಾಗಿದ್ದು, ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 15 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ […]Read More
ಮಂಗಳೂರು ಅ 12 : ಕೊಂಚಾಡಿ ಶ್ರೀ ಕಾಶೀ ಮಠದಲ್ಲಿ ಲೋಕ ಕಲ್ಯಾಣಾರ್ಥ ಶತ ಚಂಡಿಕಾ ಯಾಗವು ಅ 12 ರಿಂದ ಅ 16 ವರೆಗೆ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಹಾಗೂ ಮಾರ್ಗದರ್ಶನದಲ್ಲಿ ನಡೆಯಲಿದೆ. ಪ್ರಪಂಚಕ್ಕೆ ತಗಲಿರುವ ಮಹಾಮಾರಿಯ ಅಂತ್ಯಕ್ಕಾಗಿ, ಜನರ ಆತಂಕ ನಿವಾರಣೆಗಾಗಿ , ಆರ್ಥಿಕ ಪರಿಸ್ಥಿತಿ ಸುಧಾರಣೆಗಾಗಿ ಹಾಗೂ ಎಲ್ಲಾ ರೀತಿಯ ತೊಂದರೆಗಳ ನಿವಾರಣೆಗಾಗಿ ಶ್ರೀ ಮಹಾಲಕ್ಷ್ಮಿಯ ಪ್ರೀತ್ಯರ್ಥ ಶತ ಚಂಡಿಕಾ ಹವನ ನಡೆಯಲಿರುವುದು. ಶತ ಚಂಡಿಕಾ ಯಾಗದ ಪ್ರಥಮ ದಿನದಂದು […]Read More
ಬೆಳ್ತಂಗಡಿ, ಅ 11: ಧರ್ಮಸ್ಥಳದ ಲಲಿತೋದ್ಯಾನದಲ್ಲಿ ಮತ್ಸ್ಯ ಪ್ರದರ್ಶನಾಲಯವನ್ನು ಮುಜರಾಯಿ ಹಾಗೂ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ ಪ್ರಾಣಿ – ಪಕ್ಷಿಗಳನ್ನು ಪ್ರೀತಿಯಿಂದ ಸಾಕುವುದರಿಂದ ನಮ್ಮ ಮಾನಸಿಕ ಒತ್ತಡಗಳು ದೂರವಾಗುತ್ತವೆ. ಅಲಂಕಾರಿಕ ಮೀನುಗಳನ್ನು ಕೆರೆ, ನದಿ, ಸಮುದ್ರದಲ್ಲಿ ನೋಡಲು ಸಾಧ್ಯವಿಲ್ಲ. ಮೀನು ಸಾಕುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಉದ್ಘಾಟನಾ ಭಾಷಣದಲ್ಲಿ ಸಚಿವರು ತಮ್ಮ ಇಲಾಖೆಯ ಸಾಧನಗಳ ಬಗ್ಗೆ ತಿಳಿಸಿದರು. Also read: Kasarkod, Padubidri […]Read More
ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಸಾಂಕೇತಿಕವಾಗಿ ಚಾಲನೆ Read More
ಉಡುಪಿ, ಅ 10 : ಕೋವಿಡ್ 19 ನಿಂದ ಜಿಲ್ಲೆಯಲ್ಲಿ ಮರಣ ಹೊಂದಿರುವವರ ಪ್ರಮಾಣಅತ್ಯಂತ ಕಡಿಮೆಯಾಗಿದ್ದು, ಇಡೀ ರಾಜ್ಯದಲ್ಲಿ ಈ ಸಾಧನೆ ಮಾಡಿರುವ 3 ಜಿಲ್ಲೆಗಳಲ್ಲಿ ಉಡುಪಿ ಒಂದಾಗಿದೆ. ಉಳಿದ 2 ಜಿಲ್ಲೆಗಳಲ್ಲಿ ಅತ್ಯಂತ ವಿಷಮ ಪರಿಸ್ಥಿತಿಯಲ್ಲಿ, ಸಾವಿನ ದವಡೆಯಲ್ಲಿದ್ದ ರೋಗಿಗಳನ್ನು , ಬೇರೆಡೆ ಸ್ಥಳಾಂತರಿಸಿ ಚಿಕಿತ್ಸೆ ನೀಡಿದ್ದು, ಉಡುಪಿ ಜಿಲ್ಲೆಯಲ್ಲಿ ಅಂತಹ ರೋಗಿಗಳಿಗೆ , ಜಿಲ್ಲೆಯಲ್ಲೇ ಚಿಕಿತ್ಸೆ ನೀಡಿ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದೇವೆ, ಇದಕ್ಕೆ ಮುಖ್ಯ ಕಾರಣ ಜಿಲ್ಲೆಯ ಕೋವಿಡ್ ಫ್ರಂಟ್ಲೈನ್ ವಾರಿಯರ್ಸ್ ಗಳು ಎಂದು […]Read More
ಮಂಗಳೂರು ಅ 10:- ಪ್ರಸಕ್ತ ಸಾಲಿನಲ್ಲಿ ಮಂಗಳೂರು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್ ಸಂಸ್ಥೆಯಲ್ಲಿರುವ ಇಲೆಕ್ಟ್ರಾನಿಕ್ ಆ್ಯಂಡ್ ಕಮ್ಯನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ ಹಾಗೂ ಲೈಬ್ರೆರಿ ಆ್ಯಂಡ್ ಇನ್ಫಾರ್ಮಮೇಶನ್ ಸೈನ್ಸ್ ಕೋರ್ಸ್ಗಳ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ https;//dtek.karnataka.gov.in ವೆಬ್ಸೈಟ್ ಹಾಗೂ ದೂ.ಸಂ.0824-2482334 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಮಂಗಳೂರು ಅ 10 :– ಮಂಗಳೂರು ವಿಶ್ವವಿದ್ಯಾನಿಲಯ ದೂರಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಅಕ್ಟೋಬರ್ 15 ರಿಂದ ಪ್ರಾರಂಭವಾಗಬೇಕಾಗಿದ್ದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದ್ದು, ಈ ಪರೀಕ್ಷೆಯು ಅಕ್ಟೋಬರ್ 27 ರಿಂದ ಪ್ರಾರಂಭವಾಗಲಿದೆ. ಪರಿಷ್ಕೃತ ವೇಳಾಪಟ್ಟಿ ಮತ್ತು ಪರೀಕ್ಷಾ ಕೇಂದ್ರಗಳ ವಿವರವು ಮಂಗಳೂರು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ www.mangaloreuniversity.ac.in ನಲ್ಲಿ ಲಭ್ಯವಿರುತ್ತದೆ. ಈ ಬದಲಾವಣೆಯನ್ನು ದೂರಶಿಕ್ಷಣದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷಾ ಅಭ್ಯರ್ಥಿಗಳು ಗಮನಿಸುವಂತೆ ಕುಲಸಚಿವರ ಪ್ರಕಟಣೆ ತಿಳಿಸಿದೆ.Read More