ಮಂಗಳೂರು ಅ 10 :- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸ್ತುತ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ವೆಬ್ ಸೈಟ್ kacdc.karnataka.gov.in ನಲ್ಲಿ ನವೆಂಬರ್ 15 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಮಾಹಿತಿಯನ್ನು ಇಲಾಖೆಯ ವೆಬ್ಸೈಟ್ನಿಂದ ಪಡೆದು ಸಂಬಂಧಿಸಿದ ದಾಖಲಾತಿಗಳೊಂದಿಗೆ ನಿಗಮದ ಜಿಲ್ಲಾ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್ ಬಸ್ಸು ನಿಲ್ದಾಣದ ಹತ್ತಿರ, ಮಂಗಳೂರು ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ […]Read More
ಪರೀಕ್ಷಾ ಕೇಂದ್ರದ ಹೊರ ಭಾಗದಲ್ಲಿ ಹಾಗೂ ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಶಿಕ್ಷಕರು ಎಚ್ಚರ ವಹಿಸಬೇಕು ಕೋವಿಡ್ ಪಾಸಿಟಿವ್ ಬಂದ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಕೇಂದ್ರಗಳನ್ನು ಗುರುತಿಸಬೇಕು ಉಡುಪಿ, ಅ 09:ಅಕ್ಟೋಬರ್ 13 ಹಾಗೂ 14 ರಂದು ನಡೆಯಲಿರುವ ಡಿಪ್ಲೋಮಾಮತ್ತು ಪಿಜಿಸಿಇಟಿ ಪರೀಕ್ಷೆಯಲ್ಲಿಕೋವಿಡ್ ಸೋಂಕು ತಡೆಗೆ ಸರ್ಕಾರ ಹೊರಡಿಸಿರುವ ಎಲ್ಲಾಅಗತ್ಯ ಮುಂಜಾಗೃತ ಕ್ರಮಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚನೆ ನೀಡಿದರು. ಅವರುಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ […]Read More
ಉಡುಪಿ ಅ 09: ಎಡನೀರು ತೋಟಕಾಚಾರ್ಯ ಸಂಸ್ಥಾನದ ಪೀಠಾಧಿಪತಿಗಳಾಗಿ ದೀಕ್ಷಿತರಾಗಲಿರುವ ಶ್ರೀ ಜಯರಾಮ ಮಂಜತ್ತಾಯರು ತಮ್ಮ ಸನ್ಯಾಸ ದೀಕ್ಷಾ ಪೂರ್ವಭಾವಿ ತೀರ್ಥ ಕ್ಷೇತ್ರ ಸಂಚಾರ ನಿಮಿತ್ತ ಗುರುವಾರ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಶ್ರೀ ಕೃಷ್ಣಮುಖ್ಯಪ್ರಾಣರ ದರ್ಶನ ಪಡೆದ ಬಳಿಕ ಶ್ರೀ ಮದನಂತೇಶ್ವರ ಸನ್ನಿಧಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿ ಅಲ್ಲಿರುವ ಜಗದ್ಗುರು ಶ್ರೀ ಮಧ್ವಾಚಾರ್ಯರ ಅದೃಶ್ಯ ಸನ್ನಿಧಾನದ ದರ್ಶನ ಪಡೆದು ಭಕ್ತಿ ಸಮರ್ಪಸಿದರು. ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಬಳಿಕ […]Read More
ಬೆಳ್ತಂಗಡಿ, ಅ 08: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅ. 17 ರಿಂದ 24ರ ವರೆಗೆ ನವರಾತ್ರಿ ಉತ್ಸವ ನಡೆಯಲಿದೆ. ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6 ರಿಂದ 8 ರ ವರೆಗೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ವಿವರ ಅ. 17 (ಶನಿವಾರ): ಕುಮಾರಿ ಸಾನ್ವಿ ಶೆಟ್ಟಿ, ಬೆಂಗಳೂರು (ಸುಗಮ ಸಂಗೀತ) ಅ. 18 (ಆದಿತ್ಯವಾರ): ಶ್ರೀಮತಿ ಸುನಿತಾ ಶ್ರೀಪಾದ್ ರಾವ್, ಸಾಗರ (ಸುಗಮ ಸಂಗೀತ) ಅ. 19 (ಸೋಮವಾರ): ಕುಮಾರಿ […]Read More
ಮಂಗಳೂರು, ಅ 08: ಉತ್ತರಪ್ರದೇಶದ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆಯನ್ನು ಖಂಡಿಸಿ, ಯೋಗಿ ಆದಿತ್ಯನಾಥ ಸರಕಾರದ ದಬ್ಬಾಳಿಕೆಯನ್ನು ವಿರೋಧಿಸಿ ನಗರದಲ್ಲಿಂದು ದಲಿತ ಹಕ್ಕುಗಳ ಸಮಿತಿ ಹಾಗೂ ಜನವಾದಿ ಮಹಿಳಾ ಸಂಘಟನೆಯ ನೇತ್ರತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಮಹಿಳೆಯರ ಹಾಗೂ ದಲಿತರ ಮೇಲಿನ ದೌರ್ಜನ್ಯವನ್ನು ಪರೋಕ್ಷವಾಗಿ ಸಮರ್ಥಿಸುವ ಕೇಂದ್ರದ ಮೋದಿ ಹಾಗೂ ಉತ್ತರಪ್ರದೇಶದ ಯೋಗಿ ಸರಕಾರದ ವಿರುದ್ದ ಮಹಿಳೆಯರು ಘೋಷಣೆ ಕೂಗಿದರು. “ಜಾತಿ ವ್ಯವಸ್ಥೆಯನ್ನು ಪೋಷಿಸುವ ಮೇಲ್ವರ್ಗದ ಹಿತಾಸಕ್ತಿಯನ್ನು ಕಾಪಾಡುವ ಸರಕಾರಗಳು ಕೇಂದ್ರದ ಅಧಿಕಾರದ […]Read More
ಮಂಗಳೂರು ಅ 08: ದಕ್ಷಿಣ ಕನ್ನಡ ಜಿಲ್ಲೆಯ ನಾನ್ ಸಿಆರ್ಝಡ್ ಪ್ರದೇಶದಲ್ಲಿ 15 ಮರಳು ಬ್ಲಾಕ್ಗಳಿಗೆ ಗುತ್ತಿಗೆ ಮಂಜೂರಾಗಿರುತ್ತದೆ. ಗುತ್ತಿಗೆ ಪ್ರದೇಶಗಳ ಸ್ಥಳ, ಸ್ಟಾಕ್ಯಾರ್ಡ್ನಲ್ಲಿ ಲಭ್ಯವಿರುವ ಮರಳು ದಾಸ್ತಾನಿನ ವಿವರ, ಮರಳಿನ ಮಾರುಕಟ್ಟೆ ಮೌಲ್ಯ ಹಾಗೂ ಗುತ್ತಿಗೆದಾರರ ದೂರವಾಣಿ ವಿವರಗಳು ಇಂತಿವೆ. ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ಚಂದ್ರಹಾಸ್ ಮೊ. ಸಂಖ್ಯೆ 9964277142 ಸ.ನಂ 45/1 ಫಲ್ಗುಣಿ ನದಿಯಲ್ಲಿ ಲಭ್ಯವಿರುವ ಮರಳು 50 ಮೆಟ್ರಿಕ್ ಟನ್, ಮಾರುಕಟ್ಟೆ ಮೌಲ್ಯ ಪ್ರತಿ ಮೆಟ್ರಿಕ್ ಟನ್ಗೆ ರೂ. 1000, […]Read More
ಮಂಗಳೂರು ಅ 08 :- ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ/ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ/ಸಲ್ಲಿಸಿರುವ ಶಿಕ್ಷಕರಿಂದ ರಾಜ್ಯ ಪ್ರಶಸ್ತಿಗೆ ಅಕ್ಟೋಬರ್ 20 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನುwww.dwdsc.kar.nic.in ವೆಬ್ಸೈಟ್ನಿಂದ ಅಥವಾ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಟ್ವಾರ ಜಿಲ್ಲಾ ಪಂಚಾಯತ್ ಕಟ್ಟಡ, ಮಂಗಳೂರು […]Read More
ಉಡುಪಿ, ಅ 07 : ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗ, ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರದ ಪ್ರಾತ್ಯಕ್ಷಿಕೆ“ಅಡಿಕೆಯಲ್ಲಿ ಬೇರು ಹುಳದ ಸಮಗ್ರ ಪೀಡೆ ನಿರ್ವಹಣೆಯ” ತರಬೇತಿ ಕಾರ್ಯಕ್ರಮವು ಶಿರ್ಲಾಲು ಗ್ರಾಮದ ಧರಣೀಂದ್ರ ಜೈನ್ ಮನೆಯ ವಠಾರದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಬಿ ಧನಂಜಯ, ಅಡಿಕೆ ಬೇರು ಹುಳದ ಹಾನಿಯಿಂದಾಗುವ ನಷ್ಟದ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ಕೀಟಶಾಸ್ತ್ರಜ್ಞ […]Read More