ಉಡುಪಿ, ಅಕ್ಟೋಬರ್ 15: ಉಡುಪಿ ಜಿಲ್ಲೆಯಲ್ಲಿನ ಪ್ರತಿಯೊಬ್ಬರಿಗೂ ಕೋವಿಡ್-19 ಕುರಿತು ಜಾಗೃತಿ ಮೂಡಿಸಲು “ನನ್ನ ಕುಟುಂಬ ನನ್ನ ಜವಾಬ್ದಾರಿ” ಎಂಬ ಕಾರ್ಯಕ್ರಮ ರೂಪಿಸಿದ್ದು, ಇಂದಿನಿಂದ( ಅಕ್ಟೋ17) ಪ್ರತೀ ಮನೆಗಳಿಗೆ ಭೇಟಿ ನೀಡಿ ಅರಿವು ಮೂಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಆಶಾ ಕಾರ್ಯಕತೆಯರಿಗೆ ಪಲ್ಸ್ ಆಕ್ಸಿಮೀಟರ್ ಸಾಧನವನ್ನು ವಿತರಿಸಿ, ಪ್ರತಿ ಮನೆಯ ವ್ತಕ್ತಿಗಳಲ್ಲಿನ ಆಕ್ಸಿಜಿನ್ ಪ್ರಮಾಣ ಪರೀಕ್ಷಿಸಿ, ಅವರನ್ನು ಕೋವಿಡ್ ನಿಂದ ರಕ್ಷಿಸುವ ಕಾರ್ಯ […]Read More
ಅಂಕೋಲಾ, ಅ 16: ವರ್ಷ ಪ್ರತಿಯಂತೆ ಈ ವರ್ಷ ವೂ ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮದ ಶ್ರೀ ನಾಗಯಲ್ಲಮ್ಮ ದೇವಿಯ ಸನ್ನಿಧಿ ಯಲ್ಲಿ ಅ 17 ರಿಂದ ಅ 26 ರ ವರೆಗೆ ದಸರಾ ಉತ್ಸವ ನಡೆಯಲಿದೆ. ದೇವಾಲಯದ ಎಲ್ಲ ಕಾರ್ಯಕ್ರಮಗಳು ಕೋವಿಡ್-19 ಕಾರಣದಿಂದ ಸರಕಾರದ ನಿಯಮಾವಳಿ ಪ್ರಕಾರವೇ ನಡೆಯುವುದು. ಆದ್ದರಿಂದ.ದೇವಿಯ ಭಕ್ತಾದಿಗಳು ಮಾಸ್ಕ್ ಧರಿಸಿ ಸಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಿ ದೇವಿಯ ದರ್ಶನವನ್ನು ಪಡೆಯಬೇಕಾಗಿ ಶ್ರೀ ರೇಣುಕಾದೇವಿ ದೇವಸ್ಥಾನ ಅಭಿವೃದ್ಧಿ ಹಾಗೂ ಉತ್ಸವ ಸಮಿತಿಯವರು ಪ್ರಕಟಣೆಯಲ್ಲಿ […]Read More
ಮಂಗಳೂರು ಅ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಮತ್ತು ಕೋವಿಡೇತರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಸರ್ಕಾರ ನಿಗದಿಪಡಿಸಿರುವ ಸಮಯಾವಕಾಶದೊಳಗೆ ಗುಣಮುಖರಾಗದೇ ಇದ್ದಲ್ಲಿ ಹಾಗೂ ರೋಗ ಉಲ್ಬಣವಾದಲ್ಲಿ ನೀಡಿರುವ ಸಮಯಾವಕಾಶವನ್ನು ಎನ್ಹ್ಯಾನ್ಸ್ಮೆಂಟ್ (Enchancement) ಮಾಡಲು ಖಾಸಗಿ ಆಸ್ಪತ್ರೆಗಳು ಅನುಮತಿ ತೆಗೆದುಕೊಳ್ಳಲು ಅವಕಾಶ ಇರುತ್ತದೆ. ರೋಗಿಗಳಿಂದ ಯಾವುದೇ ಚಿಕಿತ್ಸಾ ವೆಚ್ಚವನ್ನು ಭರಿಸದೇ ಉಚಿತವಾಗಿ ಯೋಜನೆಯಡಿಯಲ್ಲಿ ವೆಚ್ಚ ಭರಿಸಲು ಈ ಮೂಲಕ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ […]Read More
ಮಂಗಳೂರು ಅ 15: ಜಿಲ್ಲಾಡಳಿತದ ವತಿಯಿಂದ ಪ್ರತಿ ವರ್ಷವೂ ದ.ಕ. ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನವೆಂಬರ್ 1 ರಂದು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಹಾಗೂ ಅತ್ಯುತ್ತಮ ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸಿ ನೀಡಲಾಗುತ್ತದೆ. ಪ್ರಸ್ತುತ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿಗಳನ್ನು ಅಕ್ಟೋಬರ್ 22 ರೊಳಗೆ ಆಹ್ವಾನಿಸಲಾಗಿದೆ. ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಿಲಿತಕಲೆಗಳು, ಸಮಾಜಸೇವೆ, ಜಾನಪದ, ಪರಿಸರ – ವಿಜ್ಞಾನ, ವೈದ್ಯಕೀಯ, ಸಂಶೋಧನೆ ಪತ್ರಿಕೋಧ್ಯಮ […]Read More
ಇತ್ತೀಚೆಗೆ ಕೆಲವರು ಅನಾರೋಗ್ಯ ಕಾಡಿದರೆ ಆಸ್ಪತ್ರೆಗೆ ತೆರಳಲು ಭಯಪಡುತ್ತಿರುವ ವಿಚಾರ ತಿಳಿಯಿತು. ಜ್ವರ ಬಂದರೆ ಆಸ್ಪತ್ರೆಗೆ ತೆರಳಿದರೆ ತಪಾಸಣೆ ನಡೆಸಿ ಕೊರೊನಾ ಪಾಸಿಟಿವ್ ಎಂದು ವರದಿ ನೀಡುತ್ತಾರೆ, ಅದರ ಬಳಿಕ ನಾವು ಕಷ್ಟ ಅನುಭವಿಸಬೇಕಾಗುತ್ತದೆ ಎಂಬ ತಪ್ಪು ಕಲ್ಪನೆ ಜನರಲ್ಲಿದೆ. ಆದರೆ ನನ್ನ ಅನುಭವವನ್ನೇ ಆಧರಿಸಿ ಜನರಿಗೆ ಹೇಳುವುದಾದರೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ತಪ್ಪದೆ ತಕ್ಷಣ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಿ. ಕೊರೊನಾ ಇರಲಿ, ಇಲ್ಲದಿರಲಿ ಸೂಕ್ತ ಚಿಕಿತ್ಸೆ ಪಡೆಯಬೇಕಾಗಿರುವುದು ನಮ್ಮ ಕರ್ತವ್ಯವೂ, ಜವಾಬ್ದಾರಿಯೂ ಹೌದು. ಕೆಲ […]Read More
ಕಾರವಾರ, ಅ 15: ಉತ್ತರ ಕನ್ನಡದ ಸೂಪಾ ಅಣೆಕಟ್ಟೆಯಲ್ಲಿ ನೀರಿನ ಮಟ್ಟವು ಏರುತ್ತಿರುವುದರಿಂದ ಕೆಳಭಾಗದ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಉಸ್ತುವಾರಿ ಕಾರ್ಯನಿರ್ವಾಹಕ ಎಂಜಿನಿಯರ್ ಕೇಳಿಕೊಂಡಿದ್ದಾರೆ. ಮೂರನೇ ಮತ್ತು ಅಂತಿಮ ಮುನ್ನೆಚ್ಚರಿಕೆಯನ್ನು ನೀಡಿದ ಅವರು, ಅಕ್ಟೋಬರ್ 15, ಬೆಳಿಗ್ಗೆ 8 ರ ಹೊತ್ತಿಗೆ ಜಲಾಶಯದಲ್ಲಿನ ನೀರಿನ ಮಟ್ಟವು 558.65 ಮೀಟರ್ (ಅಣೆಕಟ್ಟಿನ ಗರಿಷ್ಠ ಮಟ್ಟ 564 ಮೀಟರ್) ತಲುಪಿದೆ ಎಂದು ಹೇಳಿದ್ದಾರೆ. ಒಳಹರಿವು ಹೆಚ್ಚಾದರೆ, ಅಣೆಕಟ್ಟಿನ ನೀರು ಶೀಘ್ರದಲ್ಲೇ ಅದರ ಗರಿಷ್ಠ ಮಟ್ಟವನ್ನು ತಲುಪುತ್ತದೆ. ನೀರು ಗರಿಷ್ಠ […]Read More
ಮಂಗಳೂರು ಅ 14: ಕೇಂದ್ರೀಯ ಉಪನೊಂದಣಿ ಕಚೇರಿ, ಮಂಗಳೂರು ನಗರದ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾಪನ ಉಪಸಮಿತಿಯು 2019 ನೇ ಸಾಲಿನಲ್ಲಿ ಹೊಸ ಹಾಗೂ ಹಳೆಯ ಬಿಟ್ಟು ಹೋದ ಅಪಾರ್ಟ್ಮೆಂಟ್ಗಳ ಮಾರುಕಟ್ಟೆ ಮೌಲ್ಯವನ್ನು ನಿಗಧಿಪಡಿಸಿ, ಹಾಗೂ ಅಪಾರ್ಟ್ಮೆಂಟ್ಗಳ ಹೆಸರು ಮತ್ತು ಇದರ ರಸ್ತೆಗಳ ಹೆಸರು ತಿದ್ದುಪಡಿಗೆ ಸಂಬಂಧಪಟ್ಟ ಕಚೇರಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗಾಗಿ ಈಗಾಗಲೇ ಪ್ರಕಟಿಸಲಾಗಿದೆ. ಸಾರ್ವಜನಿಕರು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ 15 ದಿವಸದೊಳಗೆ ಸಲ್ಲಿಸಬೇಕೆಂದು ಸ್ಥಿರ ಸ್ವತ್ತುಗಳ ಮೌಲ್ಯಮಾಪನ ಉಪಸಮಿತಿ, ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ […]Read More
ಮಂಗಳೂರು ಅ 14: ಮೂಡುಬಿದಿರೆ ತಾಲೂಕು, ಶಿರ್ತಾಡಿ ಗ್ರಾಮದ ಜವಹರ್ಲಾಲ್ ನೆಹರು ಅನುದಾನಿತ ಪ್ರೌಢಶಾಲೆಯ ಶಿಕ್ಷಕಿ ಪದ್ಮಾಕ್ಷಿ ಎನ್ ಇವರ ಆರೋಗ್ಯ ಚಿಕಿತ್ಸೆಯನ್ನು ಸರಕಾರವು ಮಾನ್ಯ ಮುಖ್ಯಮಂತ್ರಿಗಳ ಸೂಚನೆಯಂತೆ ನೀಡಿದೆ. ಸೆಪ್ಟೆಂಬರ್ 28 ರಂದು ಕೆಮ್ಮು, ಮೈಕೈನೋವು ಮತ್ತು ಸಣ್ಣ ಜ್ವರದಿಂದ ಬಳಲುತ್ತಿದ್ದರು, ಕೆಮ್ಮಿದಾಗ ಕಫದಲ್ಲಿ ರಕ್ತ ಬಂದಿದ್ದರಿಂದ ಮರುದಿನ ಮೂಡಬಿದ್ರೆಯ ಸ್ಥಳಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿರುತ್ತಾರೆ. ಇದಕ್ಕೆ ಮುಂಚೆ 8-10 ದಿನದಿಂದ ಮೈಕೈನೋವು ಹಾಗೂ ತುಂಬಾ ಸುಸ್ತು ಇರುವುದಾಗಿ ತಿಳಿಸಿರುತ್ತಾರೆ. ಸೆಪ್ಟೆಂಬರ್ 29 ರಂದು […]Read More
ಮಂಗಳೂರು, ಅ 14: ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ವತಿಯಿಂದ ಇಂದು ಪ್ರತಿಭಟನೆ ನಡೆಯಿತು. ಸರಕಾರಿ ನೌಕರರ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಕಂಪ್ಯೂಟರ್ ತರಬೇತಿ ನಡೆಸಲು ಯೋಚಿಸಿದ್ದ ಸಂಘದ ಸ್ವಂತ ಸ್ಥಳದಲ್ಲಿ ಈಗ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯವರು ಅನಧಿಕೃತವಾಗಿ ಅತಿಕ್ರಮಣ ಮಾಡಿ ಹೊಸ ಕಟ್ಟಡ ನಿರ್ಮಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸರಕಾರಿ ನೌಕರರು ಪ್ರತಿಭಟಿಸಿದರು. ಪಾಂಡೇಶ್ವರ ಪೊಲೀಸ್ ಠಾಣೆಗೆ ಲಿಖಿತವಾಗಿ ದೂರು […]Read More
