ಕಂದಾಯ ಸಚಿವರು ಮೊದಲಿಗೆ ಕಾರ್ಕಳ ತಾಲೂಕಿಗೆ ಭೇಟಿ ನೀಡಿ, ಅಲ್ಲಿ ಕಡತ ವಿಲೇವಾರಿ ಸಪ್ತಾಹ ಕಾರ್ಯಕ್ರಮ, ಕಂದಾಯ ಮೇಳ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಬ್ರಹ್ಮಾವರ ತಾಲೂಕಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪ್ರಯುಕ್ತ ಕೊಕ್ಕರ್ಣೆ, ಆರೂರು ಮತ್ತು ಕೆಂಜೂರು ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ ಎಂದರು.Read More
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿಗಳ ಕಚೇರಿ ಹಾಗೂ ಮಂಗಳೂರಿನ ರಾಮಕೃಷ್ಣ ರಿಜಿಸ್ಟ್ರಾರ್ ಕೋಆಪರೇಟಿವ್ ಹಾಗೂ ಸೊಸೈಟಿಯ ಸಂಯುಕ್ತಾಶ್ರಯದಲ್ಲಿ ಫೆ.16ರ ಬುಧವಾರ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕ್ಷಯ ರೋಗ ಕುರಿತ ಮಾಹಿತಿ ಕಾರ್ಯಾಗಾರ ಮತ್ತು ಪೌಷ್ಟಿಕಾಹಾರ ಪೊಟ್ಟಣಗಳನ್ನು ರೋಗಿಗಳಿಗೆ ವಿತರಿಸಿ ಅವರು ಮಾತನಾಡಿದರು.Read More
ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳನ್ನು ಗುರುತಿಸಲಾದ್ದು, ಅಲ್ಲಿ ಗೋಶಾಲೆ ತೆರೆಯಲು ಯೋಜನೆ ರೂಪಿಸಲಾಗುತ್ತಿದೆ Read More
ಜಿಲ್ಲಾ ಪ್ರಾಣಿದಯಾ ಸಂಘದ ಸಹಯೋಗದಲ್ಲಿ ಪ್ರಾಣಿ ಕ್ರೌರ್ಯ ತಡೆಗಟ್ಟುವ ದೈನಂದಿನ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಂಭಾವನೆ ಅಪೇಕ್ಷಿಸದ ಎನಿಮಲ್ ವೆಲ್ಫೇರ್ ವಾರ್ಡನ್ ಆಗಿ ಕಾರ್ಯನಿರ್ವಹಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ) ಉಡುಪಿ ಸಂಸ್ಥೆಯ ವತಿಯಿಂದ ಭಾನುವಾರದಂದು ಲೋಕ ಕಲ್ಯಾಣಾರ್ಥವಾಗಿ 24 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆಯು ನೂತನವಾಗಿ ನಿರ್ಮಿಸಲ್ಪಟ್ಟ ಬ್ರಾಹ್ಮೀ ಸಭಾ ಭವನದಲ್ಲಿ ವೇದಮೂರ್ತಿ ಮೂಡುಬೆಟ್ಟು ಶ್ರೀ ರಮೇಶ ಭಟ್ ರವರ ನೇತೃತ್ವದಲ್ಲಿ ಚಂಡೆ ವಾದನ, ಜಾಗಟೆ, ವಿಷ್ಣು ಸಹಸ್ರನಾಮ ಪಾರಾಯಣ, ಬ್ರಾಹ್ಮಣ ಸುಹಾಸಿನಿ ಆರಾಧನೆ, ವಿಪ್ರ ಮಹಿಳೆಯರಿಂದ ಭಜನೆ ಇತ್ಯಾದಿ ಕಾರ್ಯಕ್ರಮಗಳ ಮೂಲಕ ಬಹಳ ವಿಜ್ರಂಭಣೆಯಿಂದ ಸುಸಂಪನ್ನಗೊಂಡಿತು. Read More
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಕೆ-ಸ್ಟೆಪ್ಸ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಫೆ.17 ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯನ್ನು ಸಂಘಟಿಸುತ್ತಿದೆ.Read More
ಕಾರವಾರ ಶೇಜವಾಡ ಉಪಕೇಂದ್ರದಲ್ಲಿ ಶಕ್ತಿ ಪರಿವರ್ತಕದ ತುರ್ತು ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಫೆ 16 ಬುಧವಾರ ದಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.Read More
ಕ.ಸಾ.ಪ ತಾಲ್ಲೂಕ ಘಟಕ ಹಾಗೂ ಕಲಾವಿದರ ವೇದಿಕೆ ಕಾರವಾರ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಜನಪದ ಕಲಾವಿದ, ಪರಿಸರ ಹೋರಾಟಗಾರ, ಜೋಯಿಡಾ ತಾಲೂಕಿನ ಕಾರ್ಟೊಳ್ಳಿ ಗ್ರಾಮದ ಮಾದೇವ್ ವೇಳಿಫವರಿಗೆ ನುಡಿನಮನ ಅರ್ಪಿಸಲಾಯಿತು.Read More
ಉಡುಪಿ ವಿಧಾನಸಭಾ ಕ್ಷೇತ್ರದ ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರೂರು ಹೇರಂಜೆ ರೈಲ್ವೆ ಗೇಟ್ ಬಳಿಯ ರಸ್ತೆಗೆ ಖಾಸಗಿ ಜಾಗದ ಸಮಸ್ಯೆ ಇದ್ದುದರಿಂದ ಇಂದು ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಖಾಸಗಿ ಜಾಗದವರೊಂದಿಗೆ ಚರ್ಚಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ರಸ್ತೆಗೆ ತಡೆಯೊಡ್ಡದಂತೆ ಮನವಿ ಮಾಡಿದರು.Read More
ಕಟ್ಟಕಡೆಯ ವ್ಯಕ್ತಿಗೂ ಕೂಡ ವಿದ್ಯುತ್ ಸೌಲಭ್ಯ ದೊರೆಯಬೇಕೆಂಬ ಉದ್ದೇಶದಿಂದ ಬೆಳಕು ಯೋಜನೆಯನ್ನು ಹೊಸದಾಗಿ ಜಾರಿಗೆ ತರಲಾಗಿದ್ದು ಜಿಲ್ಲೆಯಲ್ಲಿ ಪ್ರತಿ ಮನೆಯಲ್ಲೂ ಕೂಡ ವಿದ್ಯುತ್ ಕಲ್ಪಿಸುವ ಕಾರ್ಯವಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.Read More