ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆಯಡಿ ಸ್ವ-ಸಹಾಯ ಗುಂಪುಗಳನ್ನು ಕಿರು ಉದ್ದಿಮೆ ಸಂಸ್ಥೆಗಳನ್ನಾಗಿ ರೂಪಿಸಲು ತಲಾ 1 ಲಕ್ಷ ರೂ. ನಂತೆ ಬೀಜಧನ ಒದಗಿಸಲಾಗುತ್ತಿದೆ. Read More
ಸೆ.23 ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ 220 ಕೆವಿ ಎಸ್.ಆರ್.ಎಸ್ ಕಾವೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಯೆಯ್ಯಾಡಿ, ವಾಮಂಜೂರು, ಹರಿಪದವು ಫೀಡರ್ಗಳ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.Read More
ಸೆ. 22ರ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ 110/33/11 ಕೆವಿ ಕೊಣಾಜೆ ಉಪಕೇಂದ್ರದಿಂದ ಹೊರಡುವ 11ಕೆವಿ ಮಂಜನಾಡಿ, ಕಿನ್ಯಾ, ಉಳ್ಳಾಲ ಎಕ್ಸ್ಪ್ರೆಸ್, ಯುನಿರ್ವಸಿಟಿ, ಕೊಣಾಜೆ, ಪಜೀರ್ ಮತ್ತು ಬೋಳಿಯಾರ್ ಫೀಡರ್ ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.Read More
ಬೊಂದೇಲ್ನಲ್ಲಿರುವ ಸರಕಾರಿ ಮಹಿಳಾ ಪಾಲಿಟಕ್ನಿಕ್ನಲ್ಲಿ ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲಿಷ್ ಮತ್ತು ಕನ್ನಡ) ಹಾಗೂ ಲೈಬ್ರರಿ ಅಂಡ್ ಇನ್ಫರ್ಮೇಷನ್ ಸೈನ್ಸ್ ಕೋರ್ಸ್ನ ಪ್ರಥಮ ವರ್ಷದ ಡಿಪ್ಲಮೋ ಪ್ರವೇಶಕ್ಕೆ ಉಳಿದಿರುವ ಸೀಟುಗಳ ಭರ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಕಾರಣ ಕೇರಳದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿಲರುವ 19ಗ್ರಾಮಗಳ ಮದ್ಯದಂಗಡಿಗಳಿಗೆ ಇದೇ ಸೆ.21ರಿಂದ ಮುಂದಿನ ಆದೇಶದ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯ ವರಗೆ ಕೆಲವು ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಿ ವ್ಯವಹಾರ ನಡೆಸಲು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.Read More
ಕೋವಿಡ್ ಸೋಂಕಿನ ಪಾಸಿಟಿವಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಈ ಹಿಂದೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಹಿಂಪಡೆದು ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಹಾಗೂ ಸೇವೆಗಳನ್ನು ನಡೆಸಲು ಷರತ್ತುಗಳನ್ನು ಪಾಲಿಸುವ ನಿಬಂಧನೆಗಳಿಗೊಳಪಟ್ಟು ಜಿಲ್ಲಾಡಳಿತ ಅನುಮತಿ ನೀಡಿದೆ. Read More
ಮುಂದಿನ 2 ವರ್ಷದ ಅವಧಿಯಲ್ಲಿ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಉತ್ಪಾದನೆ ಮಾಡುವುದರ ಜೊತೆಗೆ, ಉತ್ತಮ ಗುಣಮಟ್ಟದ, ನೈಸರ್ಗಿಕ ಅಂಶಗಳನ್ನು ಒಳಗೊಂಡ ಸಿರಿಧಾನ್ಯಗಳನ್ನು ವಿದೇಶಕ್ಕೆ ರಫ್ತು ಮಾಡುವುದರ ಮೂಲಕ, ಭಾರತವು ಇಡೀ ವಿಶ್ವಕ್ಕೆ ಸಿರಿಧಾನ್ಯಗಳನ್ನು ರಫ್ತು ಮಾಡುವ ಹಬ್ ಆಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.Read More
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಕಾನೂನು ಪದವೀಧರರಿಗೆ 4 ವರ್ಷಗಳ ತರಬೇತಿ ಭತ್ಯೆ ಪಡೆಯಲು ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಕರ್ನಾಟಕ ಸರ್ಕಾರಿ ಸಂಧ್ಯಾ ಪಾಲಿಟೆಕ್ನಿಕ್ ನಲ್ಲಿ 2021-22ನೇ ಸಾಲಿನ ಪ್ರಥಮ ವರ್ಷದ ಪ್ರವೇಶಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಎಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.Read More
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಯು ಸೆಪ್ಟಂಬರ್ 16 ರಂದು ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜುನಲ್ಲಿ ನಡೆಯಲಿದೆ.Read More