ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುವ ಸಾಧ್ಯತೆಯನ್ನು ಪರಿಗಣಿಸಿ ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ 19 ಗ್ರಾಮಗಳ (26 ಐಎಂಎಲ್ ಹಾಗೂ 5 ಶೇಂದಿ) ಮದ್ಯದಂಗಡಿಗಳನ್ನು ಆಗಸ್ಟ್ 1ರಿಂದ 15ರವರೆಗೆ ಮುಚ್ಚಲು ಈಗಾಗಲೇ ಆದೇಶಿಸಲಾಗಿರುತ್ತದೆ.Read More
ಬಂದರು, ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಇಲಾಖೆಯ ಸಚಿವರಾದ ಎಸ್. ಅಂಗಾರ ಅವರ ಅಧ್ಯಕ್ಷತೆಯಲ್ಲಿ ಕೋವಿಡ್-19 ನಿಯಂತ್ರಣದ ಬಗ್ಗೆ ಸಭೆ ಬಂಟ್ವಾಳದಲ್ಲಿ ನಡೆಯಲಿದೆ.Read More
ಆಜಾದಿ ಕಾ ಅಮೃತ ಮಹೋತ್ಸದದ ಅಂಗವಾಗಿ ಕರ್ನಾಟಕ ಬಟಾಲಿಯನ್ ಕಾರವಾರ ಎನ್ಸಿಸಿ ಯೂನಿಟ್ ವತಿಯಿಂದ ಇತ್ತಿಚಿಗೆ ಹಮ್ಮಿಕೊಳ್ಳಲಾದ ಫಿಟ್ ಇಂಡಿಯಾ ಫ್ರೀಡಮ್ ಓಟಕ್ಕೆ ಲೆಫ್ಟಿನೆಂಟ್ ಕರ್ನಲ್ ಉನ್ನಿ ಕೃಷ್ಣನ್ ನಾಯರ್ ಚಾಲನೆ ನೀಡಿದರು.Read More
ಮುಖ್ಯಮಂತ್ರಿಗಳು ನೀಡಿದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾಗೂ ಅದರ ಪಾಸಿಟಿವಿಟಿಯನ್ನು ನಿಯಂತ್ರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ತಾಕೀತು ಮಾಡಿದರು.Read More
ಮಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಇದೇ ಆಗಸ್ಟ್ 12 ರಿಂದ ಮುಂದಿನ ಆದೇಶದ ವರೆಗೆ ಕಿ.ಮೀ 75(ಚಾರ್ಮಾಡಿ ಗ್ರಾಮ)ರಿಂದ ಕಿಮೀ 86.20 (ದಕ್ಷಿಣ ಕನ್ನಡ ಜಿಲ್ಲಾ ಗಡಿ) ರವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಜೆ 7 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.Read More
ಪ್ರಕೃತಿಯಲ್ಲಿ ದೇವರನ್ನು ಕಾಣುವ ಮಹಾ ಚಿಂತನೆಯಿಂದ ಈ ಹಬ್ಬ ಆಚರಣೆಗೆ ಬಂದಿರಬಹುದು. ಸದಾ ತಂಪನ್ನು ಬಯಸುವ ಸರಿಸೃಪ … ನಾಗ. ಇದು ಬನವನ್ನು ಆಶ್ರಯಿಸಿಕೊಂಡು ಹುತ್ತವನ್ನು ತನ್ನ ಮನೆ ಮಾಡಿಕೊಂಡಿರುತ್ತದೆ. ಕರುನಾಡಿನ ಜನರು ಕಲಿಯುಗದಲ್ಲಿ ಕಣ್ಣಿಗೆ ಕಾಣುವ ದೇವರು ನಾಗದೇವರು ಎಂದು ಬಲವಾಗಿ ನಂಬಿದವರು. ಹಾಗಾಗಿ ಈ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. Read More
ಈ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಸಂಬಂಧಿಸಿದಂತೆ ಯಾವುದೇ ಕೊರತೆ ಇಲ್ಲ. ಖಾಸಗಿ ಹಾಗೂ ಸಹಕಾರಿ ರಸಗೊಬ್ಬರ ಮಾರಾಟಗಾರರಿಂದ ರೈತರು ರಸಗೊಬ್ಬರವನ್ನು ಖರೀದಿಸುವಾಗ ಚೀಲಗಳ ಮೇಲೆ ಮುದ್ರಿತ ದರವನ್ನು ಗಮನಿಸಿ ಖರೀದಿಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.Read More
ತುಳುನಾಡಿನ ಪ್ರಮುಖ ಆಚರಣೆಯಾದ ನಾಗರ ಪಂಚಮಿಯ ದಿನದಂದೂ ದೇವಾಲಯಗಳಲ್ಲಿ ಭಕ್ತರಿಂದ ವಿಶೇಷ ಪೂಜೆ, ಸೇವೆಗಳಿಗೆ ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ.Read More
ಕೋವಿಡ್-19 ಸಾಂಕ್ರಾಮಿಕದಿಂದ ತಂದೆ-ತಾಯಿಯರನ್ನು ಕಳೆದುಕೊಂಡ ಮಕ್ಕಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ಸೌಲಭ್ಯಗಳನ್ನು ಘೋಷಿಸಿದ್ದು, ಜಿಲ್ಲೆಯಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗದಿಂದ ತಂದೆ ತಾಯಿಯರನ್ನು ಕಳೆದುಕೊಂಡ 18 ವರ್ಷದೊಳಗಿನ ಮಕ್ಕಳು ಈ ಯೋಜನೆಯ ಫಲಾನುಭವಿಯಾಗಲು ಅರ್ಹರಾಗಿರುತ್ತಾರೆ.Read More
ಪ್ರಸಕ್ತ ಸಾಲಿನಲ್ಲಿ ಶಾಲೆಯಿಂದ ವಂಚಿತರಾಗಿರುವ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬರುವ ಮನೆ ಮನೆ ಸಮೀಕ್ಷೆಯನ್ನು ಪುನಃರಂಭಿಸಲಾಗಿದೆ.Read More