ಈ ಬಾರಿಯ ಎಸ್ಸೆಸ್ಸೆಲ್ಲಿ ಪರೀಕ್ಷೆಯು ಸುರಕ್ಷಿತ ವಾತಾವರಣದಲ್ಲಿ ನಡೆಸುವ ಸಲುವಾಗಿ ಹಲವಾರು ಸಂಘ ಸಂಸ್ಥೆಸಗಳು ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ ನೀಡಿವೆ.Read More
ಹೊನ್ನಾವರ ತಾಲೂಕಿನ ಮಂಕಿ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಇತ್ತಿಚಿಗೆ ತಂಬಾಕು ತನಿಖಾದಳದ ಅಧಿಕಾರಿಗಳು ದಾಳಿ ನಡೆಸಿದರು.Read More
ಸದ್ಯ ಮಳೆ ಕಡಿಮೆ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ 169 ಎ ರ ತೀರ್ಥಹಳ್ಳಿ- ಉಡುಪಿ-ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ ತೆರವುಗೊಳಿಸಲಾಗಿದೆ.Read More
ಬೆಂಗಳೂರಿನಂತಹ ಮಹಾನಗರದಲ್ಲೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳು ಮುಖ ಮಾಡುತ್ತಿರುವುದು ಸರ್ಕಾರಿ ಶಾಲೆಗಳ ಮೇಲೆ ಸಾರ್ವಜನಿಕರು ಭರವಸೆ ಹೊಂದಿರುವುದರ ದ್ಯೋತಕ ವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.Read More
ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ವಿರೋಧಿಸಿ ಮಂಗಳೂರು ನಗರದ ಬೀದಿಬದಿ ವ್ಯಾಪಾರಸ್ಥರೂ ಕೂಡ ಬೀದಿಗಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.Read More
ಜಿಲ್ಲೆಯಲ್ಲಿ ಸಂಪೂರ್ಣ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಜುಲೈ 19 ಮತ್ತು 22 ರಂದು ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. Read More
ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಲಸಿಕೆ ಪಡೆಯುವುದರೊಂದಿಗೆ ಪರೀಕ್ಷೆ ಸುರಕ್ಷಿತ ವಾತಾವರಣದಲ್ಲಿ ಅಚ್ಚುಕಟ್ಟಾಗಿ ನಡೆಯಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಈ ಕುರಿತಂತೆ ಮಕ್ಕಳು ಮತ್ತು ಪೋಷಕರಲ್ಲಿ ಆತ್ಮ ವಿಶ್ವಾಸ ಮೂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.Read More
ಅಚ್ಚೇದಿನ್ ತರುವುದಾಗಿ, ಬೆಲೆಯೇರಿಕೆಯನ್ನು ನಿಯಂತ್ರಿಸುವುದಾಗಿ, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಸರಕಾರ, ಕಳೆದ 7 ವರ್ಷಗಳ ಅವಧಿಯಲ್ಲಿ ದೇಶದ ಆರ್ಥಿಕತೆಯನ್ನು ದಿವಾಳಿನಂಚಿಗೆ ಕೊಂಡೊಯ್ದು, ಜನರ ಬದುಕನ್ನೇ ಸರ್ವನಾಶಮಾಡಿದೆ. ಕೇಂದ್ರ ಸರಕಾರದ ವಿರುದ್ಧ ಪ್ರಬಲ ಜನಚಳುವಳಿ ಬೆಳೆದು ಬರುವ ಮೂಲಕ ದೇಶವನ್ನು ರಕ್ಷಿಸಲು ಜನತೆ ಒಂದಾಗಿ ನಿಲ್ಲಬೇಕಾಗಿದೆ ಎಂದು ಸಿ.ಪಿ.ಐ.ಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಕರೆ ನೀಡಿದರು.Read More
ಕೋವಿಡ್-19 ಸೋಂಕು ಪ್ರಸರಣದಿಂದಾಗಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳನ್ನು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಎಸ್ ಎಸ್ ಎಲ್ ಸಿಯಲ್ಲಿ ಪಡೆದ ಅಂಕಗಳು, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಅಂಕಗಳನ್ನು ನಿಗದಿಪಡಿಸಿ ಅತಿ ಶೀಘ್ರದಲ್ಲಿ ಫಲಿತಾಂಶಗಳನ್ನು ಘೋಷಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.Read More
ರಾಜ್ಯ ಸರ್ಕಾರವು ಕೋವಿಡ್-19 ಪಾಸಿಟಿವಿಟಿ ಆಧಾರದ ಮೇಲೆ ಹೆಚ್ಚಿನ ಆರ್ಥಿಕ ಮತ್ತು ಇತರೆ ಚಟುವಟಿಕೆಗಳನ್ನು ತೆರೆಯಲು ಅನುಮತಿ ನೀಡಿ, ಈ ಹಿಂದೆ ಹೊರಡಿಸಿದ ಎಲ್ಲಾ ಆದೇಶಗಳನ್ನು ರದ್ದುಪಡಿಸಿ, ಜುಲೈ 19 ರ ಬೆಳಗ್ಗೆ 6 ಗಂಟೆಯವರೆಗೆ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿರುತ್ತದೆ.Read More