ವೈದ್ಯ ವೃತ್ತಿ ಅತ್ಯಂತ ಪವಿತ್ರ ವೃತ್ತಿಯಾಗಿದ್ದು ಪ್ರೀತಿ, ತ್ಯಾಗ ಮತ್ತು ಸೇವಾ ಮನೋಭಾವದಿಂದ ಚಿಕಿತ್ಸೆ ನೀಡಿ ರೋಗಿಗಳು ಆದಷ್ಟು ಶೀಘ್ರ ಗುಣಮುಖರಾಗಿ ಪೂರ್ಣ ಆರೋಗ್ಯ ಭಾಗ್ಯವನ್ನು ಹೊಂದುವಂತೆ ಮಾಡುವುದೇ ವೈದ್ಯರ ಗುರಿಯಾಗಿದೆ. ವೈದ್ಯ ವೃತ್ತಿಯವರು ಸಾಕಷ್ಟು ಶ್ರಮ ವಹಿಸಿ ಸಮರ್ಪಣಾ ಮನೋಭಾವದಿಂದ ಕೆಲಸ ಮಾಡಬೇಕಾಗುತ್ತದೆ. ಕೊರೊನಾ ಸಂಕಷ್ಟದ ದಿನಗಳಲ್ಲಂತೂ ಎಲ್ಲಾ ವೈದ್ಯರುಗಳು ತಮ್ಮ ಮನೆ ಹಾಗೂ ಕುಟುಂಬದ ಸಂಪರ್ಕವೂ ಇಲ್ಲದೆ, ಆಹಾರ, ವಿಶ್ರಾಂತಿ ಮತ್ತು ಸಮಯದ ಮಿತಿಯನ್ನೂ ಮರೆತು ಮಾನವೀಯತೆಯಿಂದ ರೋಗಿಗಳ ಸೇವೆ ಮಾಡಿದ್ದಾರೆ. ಅಂತಹ ಎಲ್ಲಾ ವೈದ್ಯರಿಗೆ ಅಭಿನಂದನೆಗಳು ಹಾಗೂ ಶುಭ ಹಾರೈಕೆಗಳು.Read More
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ಜುಲೈ 7 ರಂದು ತೊಕ್ಕೊಟ್ಟಿನ ಯುನಿಟಿ ಹಾಲ್ನಲ್ಲಿ ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಸಂಬಂಧಿಸಿದಂತೆ ಶಾಸಕ ಯು.ಟಿ ಖಾದರ್ ಅವರ ಗೌರವ ಉಪಸ್ಥಿತಿಯಲ್ಲಿ ಆಹಾರ ಅದಾಲತ್ ನಡೆಯಲಿದೆ.Read More
ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಜಿಲ್ಲಾಡಳಿತದ ಜೊತೆ ಕೈಜೋಡಿಸಿರುವ ಕೈಗಾ ವಿದ್ಯುತ್ ಉತ್ಪಾದನಾ ಕೇಂದ್ರ ತನ್ನ ಸಿಎಸ್ಆರ್ ಫಂಡ್ನಡಿ ಆಕ್ಸೋ ಮೀಟರ್ ಹಾಗೂ ಆಕ್ಸಿಜನ್ ಫ್ಲೋ ಮೀಟರ್ಗಳನ್ನು ಜಿಲ್ಲಾಡಳಿತಕ್ಕೆ ನೀಡಿದೆ.Read More
ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸೇರಿದಂತೆ ಕನ್ನಡ ಪ್ರದೇಶಗಳ ಕೆಲವು ಗ್ರಾಮಗಳ ಹೆಸರುಗಳನ್ನು ಕೇರಳ ಸರ್ಕಾರ ಬದಲಾಯಿಸಲು ನಿರ್ಧರಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇದು ಯಾವುದೇ ಕಾರಣಕ್ಕೂ ಸಾಧುವಾದ ಕ್ರಮವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.Read More
ಉತ್ತರ ಕನ್ನಡ ಜಿಲ್ಲಾಡಳಿತ ಜೂನ್ 28 ರಿಂದ ವಿದ್ಯಾರ್ಥಿಗಳಿಗೆ ವಿಶೇಷ ಲಸಿಕಾ ಶಿಬಿರ ನಡೆಸಲಿದೆ.Read More
ಜಿಲ್ಲಾ ಕೇಂದ್ರ ಗ್ರಂಥಾಲಯ, ಕಾರವಾರ ಉಪನಿರ್ದೇಶಕರ ಕಚೇರಿಗೆ ಕಿಲೋ ಮೀಟರ ಆಧಾರದ ಮೇಲೆ ಬಾಡಿಗೆ ವಾಹನದ ಅವಶ್ಯಕತೆ ಇದ್ದು, ಟೊಯೊಟೊ ಏಂಜೊಯ, ಟಾಟಾ ಸುಮೊ ಅಥವಾ ಬೂಲೇರೊ, ಮಾರುತಿ ಸ್ವಿಪ್ಟ್ ಅಧಿಕೃತ ವಾಹನ ಮಾಲೀಕರುಗಳಿಂದ, ಕಿಲೋ ಮೀಟರ ಲೆಕ್ಕದಲ್ಲಿ ಷರತ್ತುಗಳ ಒಳಪಟ್ಟಂತೆ ಕನಿಷ್ಠ ದರಗಳನ್ನು ನಮೂದಿಸಿದ ದರಪಟ್ಟಿ ಆಹ್ವಾನಿಸಲಾಗಿದೆ.Read More
ಕೋವಿಡ್ ಕರ್ತವ್ಯದಿಂದ ಶಿಕ್ಷಕರ ಬಿಡುಗಡೆಗೆ ಸುರೇಶ್ ಕುಮಾರ್ ಸೂಚನೆ Read More
ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಮೇ 20 ರಿಂದ ಜಾರಿಗೆ ಬರುವಂತೆ ಜಿಲ್ಲೆಯಲ್ಲಿ ಅಗ್ರಿಗೇಟರ್ಸ್ ನಿಯಮದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ಟ್ಯಾಕ್ಸಿಗಳಿಗೆ ಪ್ರಯಾಣ ದರ ಪರಿಷ್ಕರಣೆಯನ್ನು ಸಾರ್ವಜನಿಕರ ಪ್ರಯಾಣಿಕರ ಹಿತದೃಷ್ಟಿಯಿಂದ ಮತ್ತು ಸ್ಥಳೀಯ ಜನಸಂಖ್ಯೆಗನುಗುಣವಾಗಿ ಮತು ಟ್ಯಾಕ್ಸಿ ಮಾಲಕ/ ಚಾಲಕರ ಜೀವನ ನಿರ್ವಹಣಾ ವೆಚ್ಚ, ಇಂಧನ ಬೆಲೆಗಳ ಹೆಚ್ಚಳ ಹಾಗೂ ವಾಹನಗಳ ಬೆಲೆ ಮತ್ತು ನಿರ್ವಹಣಾ ವೆಚ್ಚವು ಹೆಚ್ಚಾಗಿರುವುದನ್ನು ಗಮನದಲ್ಲಿರಿಸಿಕೊಂಡು ಈ ಕೆಳಗಿನಂತೆ ದರ ನಿಗಧಿಪಡಿಸಿ, ಆದೇಶ ಹೊರಡಿಸಿ, ನಿರ್ಣಯ ಕೈಗೊಳ್ಳಲಾಗಿರುತ್ತದೆ.Read More
18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಿ ನಂತರ ಕಾಲೇಜು ಆರಂಭಿಸುವ ಕುರಿತು ಪ್ರಾಥಮಿಕ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.Read More
ಜುಲೈ 3ನೇ ವಾರದಲ್ಲಿ ನಡೆಸಲುದ್ದೇಶಿಸಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧದಲ್ಲಿ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರೂಪಿಸಿ ನೀಡಿದ ಎಸ್ ಒ ಪಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More