ಕೇವಲ ಬಹು ಆಯ್ಕೆ ಪ್ರಶ್ನೆ ಆಧಾರಿತ ಪರೀಕ್ಷೆಯನ್ನು ನಡೆಸಲಾಗುವುದು. ಉತ್ತರ ಪತ್ರಿಕೆಯು OMR (Optical Mark Reader) ರೂಪದಲ್ಲಿರುವುದು. ಪ್ರತಿ ವಿಷಯಕ್ಕೆ ಗರಿಷ್ಠ 40 ಅಂಕಗಳಿಗೆ ಸೀಮಿತಗೊಳಿಸಿ ಪರೀಕ್ಷೆಯನ್ನು ನಡೆಸಲಾಗುವುದು.Read More
ಬ್ಯಾಂಕ್ ಆಫ್ ಬರೋಡಾದ ವತಿಯಿಂದ ಕೊರೋನಾ ಸೋಂಕು ಚಿಕಿತ್ಸೆಗೆ ಅಗತ್ಯವಿರುವ ವೈದ್ಯಕೀಯ ಕಿಟ್ಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು. Read More
ವ್ಯಾಸಂಗಕ್ಕೆ ಹಾಗೂ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳುವವರಿಗೆ ಲಸಿಕ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.Read More
ಕೋವಿಡ್ 3ನೇ ಅಲೆಯ ಚಿಕಿತ್ಸೆಗಾಗಿ ಬೇಕಾಗುವ ಎಲ್ಲ ರೀತಿಯ ಕ್ರಮ ಕೈಗೊಳ್ಳುವಂತೆ ಶಿವರಾಮ ಹೆಬ್ಬಾರ್ ಸೂಚಿಸಿದರು. Read More
ಕಾರ್ಮಿಕರ ಕೊರತೆಯ ನಡುವೆಯೂ ಕಾಮಗಾರಿ ಪ್ರಗತಿಯಲ್ಲಿದೆ ಎಂದು ವೇದವ್ಯಾಸ್ ಕಾಮತ್ ಹೇಳಿದರು. Read More
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು / ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಜೂನ್ 3 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಈವರೆಗಿನ ವರದಿ ಪ್ರಕಾರ ಜಿಲ್ಲೆಯಲ್ಲಿ ಕೋವಿಡ್ನಿಂದ ಇಬ್ಬರು ಪೋಷಕರನ್ನು ಕಳೆದುಕೊಂಡ 18 ವರ್ಷದೊಳಗಿನ ಮಕ್ಕಳು ಇಲ್ಲ. ಒಬ್ಬ ಪೋಷಕರನ್ನು ಕಳೆದುಕೊಂಡ 17 ಕುಟುಂಬಗಳಲ್ಲಿ 29 ಏಕಪೋಷಕ ಮಕ್ಕಳ ಮಾಹಿತಿ ದೊರಕಿರುತ್ತದೆ. ಸದರಿ ಮಕ್ಕಳಿಗೆ ನಿಯಮಾನುಸಾರ ಪ್ರಾಯೋಜಕತ್ವ ಯೋಜನೆಯಡಿಯಲ್ಲಿ ಧನಸಹಾಯ ಸೌಲಭ್ಯವನ್ನು ಒದಗಿಸುವ ಬಗ್ಗೆ ಪ್ರಗತಿಯಲ್ಲಿದೆ.Read More
ಸರ್ಕಾರ ಸ್ವಾಮ್ಯದ ಬಿ.ಎಸ್.ಎನ್.ಎಲ್ ಮುಂಚೂಣಿ ಟೆಲಿ ಕಂಪೆನಿಯಾಗಿದ್ದರೂ ಸಹ ಜಿಲ್ಲೆಯಲ್ಲಿನ ಗ್ರಾಹಕರುಗಳಿಗೆ ಉತ್ತಮ ಗುಣಮಟ್ಟದ ಸೇವೆಗಳನ್ನು ಒದಗಿಸುತ್ತಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದ ನಳಿನ್, ಮುಂದಿನ ದಿನಗಳಲ್ಲಿ ಹೀಗಾಗದಂತೆ ನೋಡಿಕೊಳ್ಳಲು ಯೋಜನೆಯನ್ನು ರೂಪಿಸುವುದರೊಂದಿಗೆ ಉತ್ತಮ ನೆಟ್ವರ್ಕ್ ಸೌಲಭ್ಯವನ್ನು ಒದಗಿಸಬೇಕು ಎಂದರು.Read More
ಜೂನ್ 2, 3 ಮತ್ತು 4 ರಂದು ಬೆಳಗ್ಗೆ 8 ಗಂಟೆಗೆ ಹೆಬ್ರಿಯ ಐ.ಬಿ ಬಳಿ ಮತ್ತು ಬೆಳಗ್ಗೆ 9.30 ಕ್ಕೆ ಕಾರ್ಕಳದ ಐ.ಬಿ. ಯ ಬಳಿ ಮೋಟಾರು ವಾಹನ ನಿರೀಕ್ಷಕ ವಿಶ್ವನಾಥ ನಾಯ್ಕ್, ಬೆಳಗ್ಗೆ 8 ಗಂಟೆಗೆ ಕುಂದಾಪುರ ಐ.ಬಿ. ಯ ಬಳಿ ಮತ್ತು 9.30 ಕ್ಕೆ ಬೈಂದೂರು ಐ.ಬಿ. ಯ ಸಮೀಪ ಮೋಟಾರು ವಾಹನ ನಿರೀಕ್ಷಕ ಮಾರುತಿ ನಾಯ್ಕ್, ಬ್ರಹ್ಮಾವರ ತಾಲೂಕು ಕಚೇರಿ ಬಳಿ ಬೆಳಗ್ಗೆ 8 ಗಂಟೆಗೆ ಮತ್ತು ಕಾಪು ತಾಲೂಕು ಸಮೀಪ ಬೆಳಗ್ಗೆ 9.30 ಕ್ಕೆ ಮೋಟಾರು ವಾಹನ ನಿರೀಕ್ಷಕ ಉದಯ ಕುಮಾರ್ ಕಾಮತ್ ಉಪಸ್ಥಿತರಿದ್ದು, ಚಾಲಕರ ಅನುಜ್ಞಾ ಪತ್ರವನ್ನು ಪರಿಶೀಲಿಸಿ, ದೃಢೀಕರಣ ಪತ್ರವನ್ನು ನೀಡಲಿದ್ದಾರೆ.Read More
45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ (ಸೇಂಟ್ ಸಿಸಿಲಿ ಶಾಲೆ) 250 ಡೋಸ್, ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) 150 ಡೋಸ್ ಲಸಿಕೆಯನ್ನು ನೀಡಲಾಗುವುದು.Read More