ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾಸ್ಪತ್ರೆಯಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿರ್ವಹಿಸಲು ಹಾಗೂ ವೈದ್ಯಕೀಯ ಸೇವೆಗಳನ್ನು ಒದಗಿಸಲು ಅಗತ್ಯವಿರುವ ಫಾರ್ಮಾಸಿಸ್ಟ್ -4 ಹುದ್ದೆಗಳನ್ನು ಹಾಗೂ ಗ್ರೂಪ್ ಡಿ/ ಸೆಕ್ಯೂರಿಟಿ ಗಾರ್ಡ್-10 ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಮೇ 19 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನರ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.Read More
ಜಿಲ್ಲೆಯಲ್ಲಿ ನ್ಯಾಯಾಧೀಶರುಗಳಿಗೆ, ಅಧಿಕಾರಿ, ಸಿಬ್ಬಂದಿ ಹಾಗೂ ನ್ಯಾಯವಾದಿಗಳಿಗೆ ಕೋವಿಡ್-19 ಸೋಂಕು ತಗುಲಿದಲ್ಲಿ ಚಿಕಿತ್ಸೆಗೆ ಸ್ಪಂದಿಸುವ ಸಲುವಾಗಿ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಬಿ. ಸದಾಶಿವ ಪ್ರಭು ಆದೇಶ ಹೊರಡಿಸಿದ್ದಾರೆ.Read More
ರಾಜ್ಯದಲ್ಲಿ ಕೋವಿಡ್ ಎರಡನೆ ಅಲೆ ನಿಯಂತ್ರಣ ಕುರಿತಂತೆ ಕೈಗೊಳ್ಳಬಹುದಾದ ಕ್ರಮಗಳು ಹಾಗೂ ಕೋವಿಡ್ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುವ ಕುರಿತಂತೆ ರಾಜ್ಯದ ವಿವಿಧ ಜಿಲ್ಲೆಗಳ 11 ಮಂದಿ ಪರಿಣಿತ ವೈದ್ಯರಿಂದ ಇಂದು ವೀಡಿಯೋ ಸಂವಾದದ ಮೂಲಕ ಸಲಹೆ ಸೂಚನೆ ಆಲಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉಡುಪಿಯ ಟಿ.ಎಂ.ಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಶಿಕಿರಣ್ ಅವರಿಂದ ಸಲಹೆಗಳನ್ನು ಕೋರಿದರು.Read More
ನಗರದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಆಕ್ಸಿಜನ್ ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮುಖಾಂತರ ಇಂದು ಹಸ್ತಾಂತರಿಸಲಾಯಿತು .Read More
ಮಂಗಳೂರಿನ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ನೂತನ ರಥದ ಮರದ ಮುಹೂರ್ತ ಪೂಜೆ ಅಕ್ಷಯ ತೃತೀಯದಂದು ನೆರವೇರಿತು.Read More
ಈ ವರ್ಷ ಹತ್ತನಾವಧಿಯ ಒಳಗೆ ನಡೆಯಬೇಕಾಗಿರುವ ಚಟುವಟಿಕೆಗಳಾದ ನೇಮ, ಕೋಲಾದಿಗಳನ್ನು ನಿಲ್ಲಿಸಿ ಆಯಾಯ ಅಥವಾ ಸಾನಿಧ್ಯದಲ್ಲಿ ಕ್ಷಮೆಯನ್ನು ಯಾಚಿಸಿ, ಪ್ರಾರ್ಥಿಸಿ ಪರಿಹಾರ ಕಂಡುಕೊಳ್ಳಬಹುದು.Read More
ಶ್ರೀ ಶೀರೂರು ಮಠದ ನೂತನ ಉತ್ತರಾಧಿಕಾರಿಯಾಗಿ ಇಂದು ನೇಮಕಗೊಂಡ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದರು.Read More
ಪೇಜಾವರ ಮಠದ ಪರಂಪರೆಯ ಶ್ರೀವಿಜಯಧ್ವಜ ತೀರ್ಥ ಶ್ರೀಪಾದರ ಆರಾಧನೆಯ ಪ್ರಯುಕ್ತ ಶ್ರೀಕೃಷ್ಣದೇವರ ಮುಂಬಾಗದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹಾಗೂ ಕಾಣಿಯೂರು ಮಠಾಧೀಶರದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಅರ್ಘ್ಯ ಪಾದ್ಯಾದಿಗಳನ್ನಿತ್ತು ವಿಶೇಷ ಪೂಜೆ ಸಲ್ಲಿಸಿದರು.Read More
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ತೆಗೆದುಕೊಂಡ ನಿರ್ಣಯದಂತೆ ಮೇ 15 ರ ನಂತರ ಮದುವೆ ಸಮಾರಂಭಗಳನ್ನು ನಡೆಸಬಾರದೆಂದು ಜಿಲ್ಲೆಯ ಜನತೆಗೆ ವಿನಂತಿ ಮಾಡಲಾಗಿತ್ತು.Read More
ಡಾ.ಎನ್.ಕೆ.ಅರೋರಾ ನೇತೃತ್ವದ ಕೋವಿಡ್ ಕಾರ್ಯ ಪಡೆಯು ಕೊವಿಶೀಲ್ಡ್ ಲಸಿಕೆಯ ಮೊದಲಿನ ಡೋಸ್ ಮತ್ತು ಎರಡನೇ ಡೋಸ್ ನಡುವಿನ ಅವಧಿಯ ಅಂತರವನ್ನು 12-16 ವಾರಗಳಿಗೆ ವಿಸ್ತರಿಸಿದೆ.Read More