ಮಂಗಳೂರು, ನ 28: ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಕಾಶಿ ಮಠದ ಶಾಖಾಮಠದಲ್ಲಿ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀ ಸಂಯಮಿಂದ್ರ ತೀರ್ಥ ಸ್ವಾಮೀಜಯವರ ಮೊಕ್ಕಾಂ ನಡೆಯುತ್ತಿದ್ದು ” ತುಳಸಿ ಪೂಜೆ ” ಪ್ರಯುಕ್ತ ಸಂಸ್ಥಾನದ ಶ್ರೀ ಕೃಷ್ಣ ದೇವರಿಗೆ ಶ್ರೀಗಳವರ ಅಮೃತ ಹಸ್ತಗಳಿಂದ ಪಂಚಾಮೃತ, ಕ್ಷೀರಾಭಿಷೇಕ ನೆರವೇರಿತು. ಬಳಿಕ ತುಳಸಿ ಪೂಜೆಯು ವಿಜೃಂಭಣೆಯಿಂದ ನಡೆಯಿತು . ಚಿತ್ರ : ಮಂಜು ನೀರೇಶ್ವಾಲ್ಯRead More
ಉಡುಪಿ, ನ 27: ಶ್ರೀ ಕೃಷ್ಣ ಮಠದಲ್ಲಿ ಉತ್ಥಾನ ದ್ವಾದಶಿಯಂದು ತೆಪ್ಪೋತ್ಸವ ಹಾಗೂ ಲಕ್ಷ ದೀಪೋತ್ಸವ ನಡೆಯಿತು. ಉತ್ಸವದಲ್ಲಿ ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು, ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಮಠಾಧೀಶ ಶ್ರೀ ವಿದ್ಯಾರಾಜೇಶ್ವರ ತೀರ್ಥರು ಪಾಲ್ಗೊಂಡಿದ್ದರು. ಶ್ರೀ ಕೃಷ್ಣ ಮಠದಲ್ಲಿ ಕ್ಷೀರಾಬ್ದಿ […]Read More
ಬೆಳ್ತಂಗಡಿ, ನ 27: “ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ತನ್ನ 6 ವರ್ಷಗಳ ಅವಧಿಯಲ್ಲಿ ಸಾರ್ವಜನಿಕ ಸಂಸ್ಥೆಗಳಾದ ವಿಮಾನ, ರೈಲ್ವೆ, ವಿಮೆ, ಬಂದರು, ಬ್ಯಾಂಕುಗಳನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಹಾ ಮಾರಿದಂತೆ ಮಾರಾಟ ಮಾಡುತ್ತಿದ್ದಾರೆ ,” ಎಂದು ಸಿಐಟಿಯು ತಾಲೂಕು ಅಧ್ಯಕ್ಷ, ಹಿರಿಯ ನ್ಯಾಯವಾದಿ ಶಿವಕುಮಾರ್ ಎಸ್. ಎಂ ಆರೋಪಿಸಿದರು. ಅವರು ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ (JCTU) ಕರೆ ನೀಡಿದ ಅಖಿಲ ಭಾರತ ಮುಷ್ಕರ ಬೆಂಬಲಿಸಿ ಸಿಐಟಿಯು ಬೆಳ್ತಂಗಡಿ ತಾಲೂಕು […]Read More
ಮಂಗಳೂರು,ನ 26, 2020: ದ.ಕ ಜಿಲ್ಲಾ ಗೃಹರಕ್ಷಕ ದಳ ಮತ್ತು ಜಿಲ್ಲಾ ಪೌರರಕ್ಷಣಾ ಪಡೆ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 29ರಂದು ಪಣಂಬೂರು ಬೀಚ್ನಲ್ಲಿ ಸ್ವಚ್ಛತಾ ಅಭಿಯಾನ, ಪ್ರಾಣಾಯಾಮ ಮತ್ತು ಯೋಗ ಶಿಬಿರ ಅಭಿಯಾನದ 4ನೇ ಕಾರ್ಯಕ್ರಮವು ಪಣಂಬೂರು ಕಡಲ ತೀರದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 7 ರಿಂದ 8.30 ರವರೆಗೆ ಪ್ರಾಣಾಯಾಮ ಮತ್ತು ಯೋಗ ಶಿಬಿರ ಕಾರ್ಯಕ್ರಮ ಮತ್ತು ಬೆಳಗ್ಗೆ 9 ರಿಂದ 10 ರವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿ […]Read More
ಉಡುಪಿ, ನ 26: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಸಾಮಾನ್ಯ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಕಲಾಸಕ್ತರಿಗೆ ಗುರುಶಿಷ್ಯ ಪರಂಪರೆ ಯೋಜನೆಯಡಿ ಜಾನಪದ ನೃತ್ಯ, ಸಂಗೀತ ಮುಂತಾದ ಕಲಾ ಪ್ರಕಾರಗಳಲ್ಲಿ 3 ತಿಂಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗುತ್ತಿದೆ. ಶಿಬಿರದಲ್ಲಿ ಭಾಗವಹಿಸುವ ಗುರುಗಳಿಗೆ ಮತ್ತು ಶಿಬಿರಾರ್ಥಿಗಳಿಗೆ ಗೌರವ ಸಂಭಾವನೆ ನೀಡಲಾಗುವುದು ಹಾಗೂ ಅರ್ಜಿಯನ್ನು ಇತ್ತೀಚಿಗೆ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದೊಂದಿಗೆ ಡಿಸೆಂಬರ್ 2 […]Read More
ಕನಿಷ್ಠ ಬೆಂಬಲಬೆಲೆ ಯೋಜನೆಯಡಿಯಲ್ಲಿ ಭತ್ತವನ್ನು ಮಾರಾಟ ಮಾಡಲಿಚ್ಚಿಸುವ ರೈತರು ನವೆಂಬರ 30 ರಿಂದ ಡಿಸೆಂಬರ 30ರವರೆಗೆ ಆನ್ಲೈನ್ ಮೂಲಕ ನೋಂದಣಿ ಮಾಡಬಹುದಾಗಿದೆRead More
ಇಂದು ಚಾತುರ್ಮಾಸ್ಯ ಸಮಾಪ್ತಿ ದಿನವಾದ ದೇವಪ್ರಬೋಧಿನಿ ಏಕಾದಶಿ. Read More
ಕಾರವಾರ, ನ 24: ಅಂಕೋಲಾ ತಾಲೂಕಿನ ಬೇಲೇಕೇರಿ ಹೊಬಳಿಯಲ್ಲಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 2020-21ನೇ ಸಾಲಿಗೆ 6 ರಿಂದ 9ನೇ ತರಗತಿಯ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಇಂಗ್ಲಿಷ್, ವಿಜ್ಞಾನ ವಿಷಯಗಳನ್ನು ಬೋಧಿಸಲು ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ನವೆಂಬರ್ 30ರೊಳಗಾಗಿ ಸ್ವ-ವಿವರ ಮತ್ತು ವಿದ್ಯಾರ್ಹತೆಯ ದಾಖಲೆಗಳನ್ನು ವಸತಿ ಶಾಲೆಗೆ ಸಲ್ಲಿಸಬೇಕು. ಆಯ್ಕೆಯಾದ ಶಿಕ್ಷಕರುಗಳಿಗೆ ಮಾಸಿಕ 10 ಸಾವಿರ ರೂಪಾಯಿಗಳನ್ನು ಗೌರವಧನ ನೀಡಲಾಗುವುದು. ಅಭ್ಯರ್ಥಿಯ ವಿದ್ಯಾರ್ಹತೆ; ಬಿಎ,ಬಿಇಡಿ ಹಾಗೂ ಬಿಎಸ್ಸಿ ಬಿ.ಇಡಿ(ಸಿಬಿಝಡ್) ಆಗಿರಬೇಕು. […]Read More
ಬೆಳ್ತಂಗಡಿ, ನ 25: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 73 ನೆ ಜನ್ಮದಿನವನ್ನು ಧರ್ಮಸ್ಥಳದಲ್ಲಿ ಇಂದು ಸರಳವಾಗಿ ಆಚರಿಸಲಾಯಿತು. ಮಾಣಿಲದ ಮೋಹನದಾಸ ಸ್ವಾಮೀಜಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್.ಡಿ. ಸಂಪತ್ ಸಾಮ್ರಾಜ್ಯ, ಬಿ. ಅಪ್ಪಣ್ಣ ಹೆಗ್ಡೆ ಮೊದಲಾದವರು ಹೆಗ್ಗಡೆಯವರಿಗೆ ಗೌರವಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳನ್ನು ಅರ್ಪಿಸಿದರು. ಸಾವಿರಾರು ಮಂದಿ ಅಭಿಮಾನಿಗಳು, ಭಕ್ತರು ದೂರವಾಣಿ, ವಾಟ್ಸಾಪ್, ವಿದ್ಯುದಂಚೆ […]Read More
ಬೆಳ್ತಂಗಡಿ, ನ 25: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ “ವಾತ್ಸಲ್ಯ” ಕಾರ್ಯಕ್ರಮಕ್ಕೆ ಹೇಮಾವತಿ ವಿ. ಹೆಗ್ಗಡೆಯವರು ಚಾಲನೆ ನೀಡಿದರು. “ರೋಗಿಗಳು, ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದುಃಖವನ್ನು ನಿವಾರಿಸಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ ಅಭಯ ನೀಡುವುದೇ ವಾತ್ಸಲ್ಯ ಕಾರ್ಯಕ್ರಮದ ಉದ್ದೇಶವಾಗಿದೆ,” ಹೇಮಾವತಿ ವಿ. ಹೆಗ್ಗಡೆಯವರು ಹೇಳಿದರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಸ್ವಾವಲಂಬನೆ ಮತ್ತು ಸ್ವಾಭಿಮಾನದ ಬದುಕಿಗೆ ಮಾರ್ಗದರ್ಶನ […]Read More