ಉಡುಪಿ, ನ 24: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕ.ರಾ.ರ.ಸಾ.ನಿಗಮದ ವತಿಯಿಂದ ಕಾರ್ಯಾಚರಣೆಯಾಗುತ್ತಿರುವ ಪ್ರತಿಷ್ಠಿತ ಸಾರಿಗೆಗಳಾದ ರಾಜಹಂಸ, ವೋಲ್ವೋ, ನಾನ್ ಎಸಿ ಸ್ಲೀಪರ್, ಮಲ್ಟಿ ಆಕ್ಸೆಲ್, ಡ್ರೀಮ್ಕ್ಲಾಸ್ ಸಾರಿಗೆಗಳಲ್ಲಿ ನವೆಂಬರ್ 22 ರಿಂದ ಅನ್ವಯವಾಗುವಂತೆ ಪ್ರಯಾಣ ದರದಲ್ಲಿ ಕಡಿಮೆ ಮಾಡಲಾಗಿದೆ. ಸದರಿ ಸಾರಿಗೆಗಳಿಗೆ ಆನ್ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದ್ದು, www.ksrtc.in ಗೆ ಹತ್ತಿರದ ರಿಸರ್ವೇಶನ್ ಕೌಂಟರ್ ಸಂಪರ್ಕಿಸಬಹುದು. ಸದರಿ ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳುವಂತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ವಿದ್ಯಾರ್ಥಿ ಉಚಿತ ಅಥವಾ ರಿಯಾಯಿತಿ ಬಸ್.....Read More
ಕಾರವಾರ, ನ 23: ಕರ್ನಾಟಕ ವಸತಿ ಶಿಕ್ಷಣ ಸಂಘದ ಅಧೀನದ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ 7, 8 ಮತ್ತು 9ನೇ ತರಗತಿಗಳಲ್ಲಿ ಖಾಲಿ ಉಳಿದ ಸ್ಥಾನಗಳನ್ನು ಭರ್ತಿ ಮಾಡಲು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು ಅರ್ಜಿ ಆಹ್ವಾನಿಸಿದೆ. 6 ಮತ್ತು 7ನೇ ತರಗತಿಯಲ್ಲಿ ವ್ಯಾಸಂಗ ಮಾಡಿರುವ ಮತ್ತು ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯದ ಆಸಕ್ತ ವಿದ್ಯಾರ್ಥಿಗಳು ಡಿಸೆಂಬರ್ 1 ರೊಳಗಾಗಿ ಆನ್ಲೈನ್ […]Read More
ಪ್ರಬೋಧಿನಿ ಏಕಾದಶಿಯಂದು ಶ್ರೀಕೃಷ್ಣ ಭಕ್ತರಿಗೆ ತಪ್ತಮುದ್ರಾಧಾರಣRead More
ಬೆಂಗಳೂರು, ನ 23 : ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ 2019-20ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು 2020-21ನೇ ಸಾಲಿಗೂ ಮುಂದುವರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಟ್ವೀಟ್ ಮಾಡಿದ್ದಾರೆ.“ಕೋವಿಡ್ ೧೯ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಸೇವೆ ಅಗತ್ಯವಾಗಿದ್ದು, ಹೀಗಾಗಿ ಅವರನ್ನು ಇನ್ನೊಂದು ಅವಧಿಗೆ ಮುಂದುವರಿಸಲಾಗಿದೆ,” ಎಂದು ಹೇಳಿದ್ದಾರೆ.Read More
ಉಡುಪಿ, ನ 23 : ಅಪ್ರಾಪ್ತ ವಯಸ್ಸಿನ ಮಕ್ಕಳಲ್ಲಿ ಧೂಮಪಾನ ಮಾಡುವ ಚಟ ಹೆಚ್ಚಿರುವುದು ಸಮೀಕ್ಷೆಯಿಂದ ತಿಳಿದು ಬಂದಿದ್ದು, ಅವರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ್ ಹೇಳಿದರು. ಅವರು ಸೋಮವಾರ ಉಡುಪಿ ತಾಲೂಕು ಆರೋಗ್ಯಾಧಿಕಾರಿಯವರ ಸಭಾಭವನದಲ್ಲಿ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಸರ್ವೇಕ್ಷಣಾ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ […]Read More
ಉಡುಪಿ, ನ 23: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲಾ ಕಛೇರಿಯಿಂದ 2020-21ರ ಸಾಲಿನಲ್ಲಿ ಶುದ್ಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ನೋಂದಾಯಿತ ಸಂಘ-ಸಂಸ್ಥೆಗಳ ಕಾರ್ಯಕ್ರಮಗಳಿಗೆ ಕಲಾತಂಡಗಳನ್ನು ಪ್ರಾಯೋಜನೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಲಾತಂಡಗಳ ಪ್ರಾಯೋಜನೆ ಕೋರಿ ಅರ್ಜಿ ಸಲ್ಲಿಸುವ ಸಂಘ-ಸಂಸ್ಥೆಯವರು ಸೇವಾಸಿಂಧು ಮುಖಾಂತರ, ತಮ್ಮ ಕಾರ್ಯಕ್ರಮದ 15 ದಿನಗಳ ಮುಂಚಿತವಾಗಿ ಅರ್ಜಿ ಸಲ್ಲಿಸುವುದು. “ಸೇವಾಸಿಂಧು” ಮೂಲಕ ಸಲ್ಲಿಸುವ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಸಂಘ-ಸಂಸ್ಥೆಗಳ ಕಾರ್ಯಕ್ರಮಕ್ಕೆ ಕಲಾತಂಡಗಳನ್ನು ಇಲಾಖೆಯಿಂದ ನಿಯಮಾನುಸಾರ ಪ್ರಾಯೋಜನೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ […]Read More
ಮಂಗಳೂರು ನ 23: ಆತ್ಮ ರಕ್ಷಣೆ ಮತ್ತು ಕೃಷಿ ರಕ್ಷಣೆಗಾಗಿ ಅಧಿಕೃತ ಶಸ್ತ್ರಾಸ್ತ್ರ ಪರವಾನಿಗೆದಾರರು ತಮ್ಮ ಶಸ್ತ್ರಾಸ್ತ್ರ ಪರವಾನಿಗೆಯಲ್ಲಿನ 3ನೇ ಆಯುಧವನ್ನು ಹೊಂದಲು ಅವಕಾಶವಿರುವುದಿಲ್ಲ ಮತ್ತು ತಮ್ಮ ಶಸ್ತ್ರಾಸ್ತ್ರ ಪರವಾನಿಗೆಯಲ್ಲಿ ಗರಿಷ್ಠ 2 ಶಸ್ತ್ರಾಸ್ತ್ರವನ್ನು ಹೊಂದಲು ಮಾತ್ರ ಅವಕಾಶವಿರುತ್ತದೆ. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಎಲ್ಲಾ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ 3ನೇ ಶಸ್ತ್ರಾಸ್ತ್ರವನ್ನು ಡಿಸೆಂಬರ್ 13 ರೊಳಗೆ ಹತ್ತಿರದ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡತಕ್ಕದ್ದು […]Read More
ಬೆಳ್ತಂಗಡಿ, ನ 23: ಧರ್ಮಸ್ಥಳದ ಶಾಂತಿವನ ದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಅನುವರ್ತನಾ ಚಿಕಿತ್ಸಾ ಘಟಕವನ್ನು ಡಿ. ಹರ್ಷೇಂದ್ರಕುಮಾರ್ ಸೋಮವಾರ ಉದ್ಘಾಟಿಸಿದರು. ಲೋಕಾಯುಕ್ತ ವಿಭಾಗದ ಜಿಲ್ಲಾ ನ್ಯಾಯಾಧೀಶ ಎಚ್.ಎ. ಮೋಹನ್, ಡಾ.ಶಿವಪ್ರಸಾದ್ ಶೆಟ್ಟಿ, ಡಾ. ಶಶಿಕಿರಣ್ ಡಾ. ಶಶಿಕಾಂತ್ ಜೈನ್ ಉಪಸ್ಥಿತರಿದ್ದರು. ಪಾದಗಳಿಗೆ ಮಸಾಜ್ ಮಾಡಿ ದೇಹದ ಅಂಗಗಳಿಗೆ ಹಾಗೂ ಮನಸ್ಸಿಗೆ ಮುದನೀಡುವ ಚಿಕಿತ್ಸಾ ಕ್ರಮವೇ ಅನುವರ್ತನಾ ಚಿಕಿತ್ಸೆ. Also read:Read More
ಉಡುಪಿ, ನ 22: ಶ್ರೀಕೃಷ್ಣ ಮಠದಲ್ಲಿ, ಮಕರ ಸಂಕ್ರಾಂತಿಯಂದು ಶ್ರೀಕೃಷ್ಣನ ಉತ್ಸವಕ್ಕಾಗಿ ಬ್ರಹ್ಮರಥವನ್ನು ತಯಾರುಗೊಳಿಸುವದಕ್ಕಾಗಿ, ದೇವರ ಪ್ರಾರ್ಥನೆ ನಡೆಸಿ ಸಂಪ್ರದಾಯದಂತೆ ರಥದ ಜಿಡ್ಡೆಯನ್ನು ರಥಬೀದಿಯಲ್ಲಿ ಹೊರತಂದಿರಿಸಿಲಾಯಿತು. ಈ ಸಂದರ್ಭದಲ್ಲಿ ಮಠದ ದಿವಾನರಾದ ಲಕ್ಷ್ಮೀನಾರಾಯಣ ಮುಚ್ಚಿಂತಾಯರು, ವ್ಯವಸ್ಥಾಪಕರಾದ ಗೋವಿಂದರಾಜ್ , ಪ್ರದೀಪ್ ರಾವ್, ಕಡೆಕಾರ್ ಶ್ರೀಶ ಭಟ್ ಮೊದಲಾದವರು ಈ ಕಾರ್ಯದಲ್ಲಿ ಪಾಲ್ಗೊಂಡಿದ್ದರು.Read More