ಮಂಗಳೂರು ನ 12 : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಪ್ರಸ್ತುತ ಸಾಲಿನಲ್ಲಿ ಭತ್ತ ಖರೀದಿಯನ್ನು ಮಾಡಲು ಅಗತ್ಯವಿರುವ ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ತಮ್ಮ ಕಛೇರಿ ಸಭಾಂಗಣದಲ್ಲಿ ಪ್ರಸ್ತುತ ಸಾಲಿನ ಕನಿಷ್ಟ ಬೆಂಬಲ ಯೋಜನೆ ಕಾರ್ಯಚರಣೆಗೆ ಸಂಬಂಧಿಸಿದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತರಿಂದ ಕನಿಷ್ಟ ಬೆಂಬಲ ಯೋಜನೆಯಡಿ ಸಾಮಾನ್ಯ ಭತ್ತವನ್ನು 1868 ರೂ.ಗಳಲ್ಲಿ ಹಾಗೂ ಗೇಡ್-1 ಭತ್ತಗಳನ್ನು1888 ರೂ.ಗಳಲ್ಲಿ […]Read More
ಬೆಳ್ತಂಗಡಿ ನ 12: ಧರ್ಮಸ್ಥಳ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಕೇಂದ್ರಗಳ ಆಡಳಿತ ವಿಭಾಗದ ನೂತನ ಕಟ್ಟಡದ ಉದ್ಘಾಟನೆ ಇಂದು ನಡೆಯಿತು. “ಪ್ರತಿಯೊಬ್ಬ ವ್ಯಕ್ತಿಯಲ್ಲಿ ಪ್ರತಿಭೆ, ಬುದ್ಧಿವಂತಿಕೆ ಹಾಗೂ ಸಾಮಥ್ರ್ಯ ಇರುತ್ತದೆ. ಅವರಿಗೆ ಸಕಾಲದಲ್ಲಿ ಮಾಹಿತಿ ಹಾಗೂ ತರಬೇತಿ ನೀಡಿ ಸ್ವ-ಉದ್ಯೋಗ ಮಾಡಲು ಪ್ರೇರಣೆ ನೀಡುವುದೇ ರುಡ್ಸೆಟ್ ಸಂಸ್ಥೆಯ ಉದ್ದೇಶವಾಗಿದೆ. 1982 ರಲ್ಲಿ ಉಜಿರೆಯಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿದ ರುಡ್ಸೆಟ್ ಸಂಸ್ಥೆ ಇಂದು ದೇಶದೆಲ್ಲೆಡೆ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ,” ಎಂದು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. […]Read More
ಬೆಳ್ತಂಗಡಿ, ನ 12 : ರಾಜ್ಯೋತ್ಸವ ಪ್ರಶಸ್ತಿ ಪುರಸೃತ, ಕಾರ್ಕಳದ ಹಿರಿಯ ನ್ಯಾಯವಾದಿ ಎಂ.ಕೆ. ವಿಜಯ ಕುಮಾರ್ ಅವರನ್ನು ಅವರ ನಿವಾಸದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಶುಭಶ್ಚಂದ್ರರಾಜ್, ಪುರಂದರ ಭಟ್ ಗೌರವಿಸಿ ಅಭಿನಂದಿಸಿದರು. ಮಂಗಳೂರು ವಿ.ವಿ. ಸಿಂಡಿಕೇಟ್ ಸದಸ್ಯ, ಮೋಹನ್ ಪಡಿವಾಳ್, ನೇಮಿರಾಜ ಆರಿಗ, ಮಹಾವೀರ ಹೆಗ್ಡೆ, ಎಂಕೆ. ವಿಪುಲ್ ತೇಜ್, ಪಾಶ್ರ್ವನಾಥ ವರ್ಮಾ ಮೊದಲಾದವರು ಉಪಸ್ಥಿತರಿದ್ದರು.Read More
ಉಡುಪಿ, ನ 12: ಪರ್ಯಾಯ ಶ್ರೀ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರಾದರು ಹಾಗೂ ಪರ್ಯಾಯ ಪೀಠಾಧೀಶರಾದ ಶ್ರೀ ಈಶ ಪ್ರಿಯ ತೀರ್ಥ ಶ್ರೀಪಾದರು ಉಡುಪಿ ಶ್ರೀ ಕೃಷ್ಣನಿಗೆ ನೂತನ ಸುವರ್ಣ ಛತ್ರವನ್ನು ನಿರ್ಮಿಸಲು ಸಂಕಲ್ಪಿಸಿದ್ದಾರೆ. ಶ್ರೀ ಕೃಷ್ಣ ದೇವರಿಗೆ ಪ್ರತಿ ದಿನವೂ ಅಲಂಕಾರಿಕವಾಗಿ ಸಮರ್ಪಿಸಲಾಗುವ ಛತ್ರವು (ಛತ್ರಿ, ಕೊಡೆ) ಶಿಥಿಲವಾಗಿದೆ ಸುವರ್ಣ ಛತ್ರ ನಿರ್ಮಾಣ ಕಾರ್ಯದಲ್ಲಿ ಭಾಗವಹಿಸುವ ಮೂಲಕ ಶ್ರೀ ಕೃಷ್ಣ ನ ಅನುಗ್ರಹಕ್ಕೆ ಪಾತ್ರರಾಗಲು ಭಕ್ತರಿಗೆ ಸದವಕಾಶ ನೀಡಲಾಗಿದೆ ಎಂದು […]Read More
ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಭಾರತೀಯ ಕಸ್ಟಮ್ಸ್ ವಶಪಡಿಸಿಕೊಂಡಿದ್ದ ಪುರಾತನ ಮತ್ತು ಮಧ್ಯಕಾಲೀನ ಅವಧಿಯ ಪ್ರಾಚೀನ ವಸ್ತುಗಳು/ನಾಣ್ಯಗಳನ್ನು ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಪಟೇಲ್ ಅವರಿಗೆ ನಾರ್ತ್ ಬ್ಲಾಕ್ ನಲ್ಲಿ ನಡೆದ ಸಮಾರಂಭದಲ್ಲಿಂದು ಹಸ್ತಾಂತರಿಸಿದರು. ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಖಾತೆ ರಾಜ್ಯ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್, ಹಣಕಾಸು ಕಾರ್ಯದರ್ಶಿ ಡಾ. ಅಜಯ್ ಭೂಷಣ್ ಪಾಂಡೆ, ಸಿಬಿಐಸಿ ಅಧ್ಯಕ್ಷ […]Read More
ಕಾರ್ಯಕ್ರಮದ ದಿನವಾದ ನವೆಂಬರ್ 26 ರಂದು ಬಾಬಾ ಬುಡನ್ ಗಿರಿಗೆ ಪ್ರವಾಸಿಗರು ಬರುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದ್ದುRead More
ಉಡುಪಿ, ನ 11 : ಜನಸಾಮಾನ್ಯರ ಆರೋಗ್ಯದ ಮೇಲೆ ದುಷ್ಮಾರಿಣಾಮ ಬೀರುವಂತಹ ಕಲ ಬೆರೆಕೆ ಉತ್ಪನ್ನಗಳ ತಯಾರಕರು ಸೇರಿದಂತೆ ಮಾರಾಟಗಾರರ ಮೇಲೆ ಕಾನೂನಿನ ಅಡಿಯಲ್ಲಿ ನಿರ್ದಾಕ್ಷö್ಯಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಜಿ ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಹಾರ ಸುರಕ್ಷತೆಯ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಗಳಲ್ಲಿ ಕಲಬೆರಕೆ ಉತ್ಪನ್ನಗಳು ಮಾರಾಟವಾಗುತ್ತಿವೆ ಎಂಬ ದೂರುಗಳು […]Read More
ಮಂಗಳೂರು ನ 11: ಪ್ರಾಣಿಗಳಿಗೂ ಸಹ ನಮ್ಮ ಹಾಗೆಯೇ ಬದುಕುವ ಹಕ್ಕಿದ್ದು, ಇವುಗಳ ಉಲ್ಲಂಘಿಸಿದ್ದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದರು. ಅವರು ಸೋಮವಾರ ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. “ಕಾಡಿನಂಚಿನಲ್ಲಿ ಕೃಷಿ ಭೂಮಿಯನ್ನು ಹೊಂದಿರುವವರಿಗೆ ರಕ್ಷಣೆಗಾಗಿ ಜಿಲ್ಲಾಡಳಿತದ ವತಿಯಿಂದ ಗನ್ ಲೈಸೆನ್ಸ್ ನೀಡಲಾಗಿದ್ದು, ಪರವಾನಿಗೆ ಇಲ್ಲದೆ ಅಕ್ರಮವಾಗಿ ಗನ್ಗಳನ್ನು ಇಟ್ಟುಕೊಂಡಿದ್ದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು,” […]Read More
ಉಡುಪಿ, ನ 11: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್, ಧಾರವಾಡ) ಇವರ ಸಂಯುಕ್ತಾಶ್ರಯದಲ್ಲಿ ಸರ್ಕಾರ ಪುರಸ್ಕೃತ ಸಂಕಲ್ಪ ಯೋಜನೆ ಅಡಿಯಲ್ಲಿ ಇನ್ಕ್ಯುಬೇಷನ್ ಪ್ರೋಗ್ರಾಮ್ ಮೂಲಕ ಹೊಸ ಉದ್ಯಮ ಸ್ಥಾಪಿಸುವವರಿಗೆ ನವೆಂಬರ್ ನಾಲ್ಕನೇ ವಾರದಲ್ಲಿ ಉಚಿತವಾಗಿ 6 ದಿನಗಳ ಸಂಕಲ್ಪ ಇನ್ಕ್ಯುಬೇಷನ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 18 ಕೊನೆಯ ದಿನವಾಗಿದ್ದು, ಭರ್ತಿ ಮಾಡಿದ ಅರ್ಜಿಯನ್ನು ಜಂಟಿ ನಿರ್ದೇಶಕರು, ಸಿಡಾಕ್, ಮೊದಲನೆಯ ಮಹಡಿ, ಜಿಲ್ಲಾ ಕೈಗಾರಿಕಾ […]Read More
ಮಂಗಳೂರು, ನ 11: ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಮೃಗಾಲಯ, ಲೇಕ್ ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮವು ನವೆಂಬರ್ 16 ರಂದು ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಂದು (ಸೋಮವಾರ) ವಾರದ ರಜೆ ಇರುವುದಿಲ್ಲ.Read More