ಮಂಗಳೂರು ನ 7 : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ವಿಭಾಗದಲ್ಲಿ ಸಮಸ್ಯೆಗಳು ಇದ್ದಲ್ಲಿ ಕಛೇರಿಯ ದೂರವಾಣಿ ಸಂಖ್ಯೆ: 0824-2220399 ನ್ನು ಸಂಪರ್ಕಿಸುವಂತೆ ಮಹಾನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಮಂಗಳೂರು ನ 07 : ಕಿರು ಅರಣ್ಯ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ಒದಗಿಸುವ ಕಾರ್ಯಕ್ರಮದಲ್ಲಿ ವನ-ಧನ ಕೇಂದ್ರಗಳನ್ನು ಸ್ಥಾಪಿಸಿ ಮೌಲ್ಯವರ್ಧಿತ ಮಾರುಕಟ್ಟೆ ಸೃಷ್ಟಿಸುವುದರ ಮೂಲಕ ಬುಡಕಟ್ಟು ಜನರನ್ನು ಆರ್ಥಿಕ ಸದೃಡರನ್ನಾಗಿಸುವ ವನಧನ ವಿಕಾಸ ಯೋಜನೆಯನ್ನು ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು. ಜಿಲ್ಲಾಪಂಚಾಯತ್ನಲ್ಲಿ ವೀಡಿಯೋ ಕಾನ್ಫೆರೆನ್ಸ್ ಮೂಲಕ ಆಯೋಜಿಸಲಾದ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಮಂಜೂರಾದ 02 ವನ-ಧನ ವಿಕಾಸ […]Read More
ಉಡುಪಿ, ನ 07 : ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಸ್ತ್ರೀವೇಷಧಾರಿ ಶ್ರೀ ಮೂರೂರು ವಿಷ್ಣು ಭಟ್ಟರಿಗೆ ನೀಡಿ ಸನ್ಮಾನಿಸಲಾಯಿತು. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀ ಅದಮಾರು ಮಠಾಧೀಶ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ನಡೆಸಿಕೊಂಡು ಬಂದಿರುವ ಚಿಟ್ಟಾಣಿ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಟಿ. ವಿ. ರಾವ್ ಪ್ರಶಸ್ತಿಯನ್ನು ಹವ್ಯಾಸಿ ಕಲಾವಿದ ಶ್ರೀ ಕೆ. ಅಜಿತ್ ಕುಮಾರ್ ಅಂಬಲಪಾಡಿ ಇವರಿಗೆ ಪ್ರದಾನ ಮಾಡಲಾಯಿತು. ಯಕ್ಷಗಾನ ಕಲಾರಂಗದ […]Read More
ಕಾರವಾರ, ನ ೦7: ಅಂಕಿತ ಅಧಿಕಾರಿಗಳ ಕಚೇರಿಯಲ್ಲಿ ಇರುವ ಎಣ್ಣೆ, ತೊಗರಿಬೇಳೆ, ಇನ್ನಿತರ ಬಳಕೆಗೆ ಯೋಗ್ಯವಲ್ಲ ಎಂದು ತೀರ್ಮಾನವಾಗಿರುವ ವಸ್ತುಗಳನ್ನು ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಸ್ಥಳಾಂತರಿಸಿ ಕೂಡಲೇ ವಿಲೇಗೊಳಿಸಲು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ, ಕಾರವಾರ ತಹಶೀಲ್ದಾರ್ ಅವರನ್ನು ವಿನಂತಿಸಿದ್ದಾರೆ. “ಈ ಹಿಂದೆ ನೆರೆ ಬಂದ ಸಂದರ್ಭದಲ್ಲಿ ಮಾನ್ಯ ಶಾಸಕಿ ಶ್ರೀಮತಿ ರೂಪಾಲಿ ನಾಯ್ಕ ರವರು ನೆರೆ ಪೀಡಿತ ಪ್ರದೇಶದಲ್ಲಿ ನೆರೆ ಪೀಡಿತರಿಗೆ ಆಹಾರ ಸಾಮಗ್ರಿಗಳನ್ನು ನೀಡಿದ್ದರು.ಆದರೆ ಅವರು ನೀಡಿದ ಕೆಲವು ಸಾಮಗ್ರಿಗಳು ಅವಧಿ ಮುಗಿದ […]Read More
ಮಂಗಳೂರು ನ 06:- ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶವನ್ನು ನವೆಂಬರ್ 30 ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದ.ಕ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು, ಅಲ್ಪಸಂಖ್ಯಾತರಕಲ್ಯಾಣ ಇಲಾಖೆ, ಮೌಲನಾ ಅಝಾದ್ ಭವನ, ಓಲ್ಡ್ಕೆಂಟ್ರಸ್ತೆ, ಪಾಂಡೇಶ್ವರ ಮಂಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಮಂಗಳೂರು ನ 06:- ಬೆಳ್ತಂಗಡಿ ಘಟಕದ ಗೃಹರಕ್ಷಕ ವಿನೋದ್ರಾಜ್ ಆಳ್ವ ಇವರಿಗೆ ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ನವೆಂಬರ್ 6 ರಂದು ದ.ಕ ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಜಿಲ್ಲಾ ಸಮಾದೇಷ್ಠ ಡಾ: ಮುರಲೀ ಮೋಹನ್ ಚೂಂತಾರು ರವರು ವೈದ್ಯಕೀಯ ಸಹಾಯ ಧನ ಚೆಕ್ನ್ನು ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬ ಗೃಹರಕ್ಷಕರಿಗೂ ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿ ಇದ್ದು, ಗೃಹರಕ್ಷಕರ ಮಕ್ಕಳ ವೈದ್ಯಕೀಯ ವೆಚ್ಚ ಹಾಗೂ ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ಸಹಾಯ ಧನ ನೀಡಲಾಗುತ್ತದೆ. ಪ್ರತಿ ಗೃಹರಕ್ಷಕರೂ […]Read More
ಮಂಗಳೂರು ನ 06:- ಪ್ರಸ್ತುತ ಸಾಲಿನ ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ನೀಡಿರುವ ಯೋಜನೆಗಳ ಹಾಗೂ ಯೋಜನೇತರ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು. ಅವರು ಶುಕ್ರವಾರ ತಮ್ಮ ಕಚೇರಿಯ ಸಭಾಂಗಣದಲ್ಲಿ ವಿಶೇಷ ಘಟಕ/ ಗಿರಿಜನ ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಪ್ರಗತಿ ಪರಿಶೀಲನಾ ಸಭೆಯನ್ನುದ್ಧೇಶಿಸಿ ಮಾತನಾಡಿದರು. ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ […]Read More
ಗ್ರಂಥಾಲಯ - ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ Read More
ಉಡುಪಿ, ನ 06 : ಉಡುಪಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ನವಂಬರ್ 13 ರಿಂದ ಅನ್ವಯವಾಗುವಂತೆ ಬಸ್ ಪ್ರಯಾಣ ದರವನ್ನು ಪರಿಷ್ಕರಿಸಿದೆ. ಉಡುಪಿ ಜಿಲ್ಲೆಯಾದ್ಯಂತ ಕೆ ಎಸ್ ಆರ್ ಟಿ ಸಿ ಮತ್ತು ಎಲ್ಲಾ ಖಾಸಗಿ ಬಸ್ಸುಗಳಲ್ಲಿ ಇಲೆಕ್ಟ್ರಾನಿಕ್ ಟಿಕೆಟ್ ಮಷೀನ್ ನಿಂದಲೇ ಕಡ್ಡಾಯವಾಗಿ ಟಿಕೇಟನ್ನು ಪ್ರಯಾಣಿಕರಿಗೆ ವಿತರಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಳಿಸಿದ್ದಾರೆ.ತಪ್ಪಿದ್ದಲ್ಲಿ ಬಸ್ಸಿನ ನಿರ್ವಾಹಕ ಹಾಗೂ ಮಾಲಕರ ಮೇಲೆ ಕಾನೂನಿನಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.Read More
ಉಡುಪಿ, ನ 06 : ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ ಮುಂಗಾರು ಹಂಗಾಮಿನ ಬೆಳೆಸಮೀಕ್ಷೆ ಕಾರ್ಯವು ಕೈಗೊಳ್ಳಲಾಗಿರುತ್ತದೆ. ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆ ಇದ್ದಲ್ಲಿ ಬೆಳೆ ಸಮೀಕ್ಷೆ ವೆಬ್ ಪೋರ್ಟಲ್ www.cropsurvey.karnataka.gov.in ಅಥವಾ ಮೊಬೈಲ್ ಆಪ್ Bele Darshak Karnataka-2020-21 ಮೂಲಕ ಆಕ್ಷೇಪಣೆ ಸಲ್ಲಿಸಬಹುದು. ರೈತರಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಸಂಬಂಧಿಸಿದ ಗ್ರಾಮದ ಮೇಲ್ವಿಚಾರಕರಿಂದ ಪರಿಶೀಲಿಸಿ, ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More