ಮಂಗಳೂರು, ನ 15: ನವಂಬರ್ 17ರಿಂದ ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು ಕಾಲೇಜಿಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡು ಪ್ರಮಾಣ ಪತ್ರದೊಂದಿಗೆ ಹಾಜರಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ವಿದ್ಯಾರ್ಥಿಗಳು ಕೋವಿಡ್ ಟೆಸ್ಟನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಮಾಡಿಸಿಕೊಳ್ಳಬಹುದಾಗಿದೆ. ಕೋವಿಡ್ ಟೆಸ್ಟ್ ಪ್ರಮಾಣಪತ್ರ ಹೊಂದದೇ ಇರುವ ವಿದ್ಯಾರ್ಥಿಗಳಿಗೆ ಪ್ರವೇಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. Also read:Read More
ಮಂಗಳೂರು, ನ 14: ದೀಪಾವಳಿ ನರಕ ಚತುರ್ದಶಿ ಪ್ರಯುಕ್ತ ಶ್ರೀ ಕಾಶಿ ಮಠ ಸಂಸ್ಥಾನದ ಆರಾಧ್ಯ ಶ್ರೀ ವೇದವ್ಯಾಸ ದೇವರಿಗೆ ಇಂದು ಪ್ರಾತಃ ಕಾಲ ಶ್ರೀ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತಹಸ್ತಗಳಿಂದ ತೈಲಾಭಿಷೇಕ ನೆರವೇರಿತು. ಬಳಿಕ ಶ್ರೀದೇವರಿಗೆ ಪಂಚಾಮೃತ , ಪವಮಾನಾಭಿಷೇಕ , ಕನಕಾಭಿಷೇಕ ಜರಗಿತು . ಚಿತ್ರ : ಮಂಜು ನೀರೇಶ್ವಾಲ್ಯ Read More
ಉಡುಪಿ, ನ 14: ಶ್ರೀ ಕೃಷ್ಣ ಮಠದ ಕನಕ ಗೋಪುರದ ಎದುರುಗಡೆ, ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ಅದಮಾರು ಹಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು “ಬಲೀಂದ್ರ ಪೂಜೆ”ಯನ್ನು ನಡೆಸಿದರು. ಉಡುಪಿ, ನ 14: ಪಂಚ ದೀಪ ಪ್ರಜ್ವಲನೆ ಯೊಂದಿಗೆ ವಾದ್ಯ ಮೇಳ ಸಹಿತ ಕೃಷ್ಣ ಮಠದ ಎಲ್ಲಾ ಭಾಗಗಳಿಗೂ ಮತ್ತು ಪರ್ಯಾಯ ಅದಮಾರು ಮಠಕ್ಕೂ ದೀಪವನ್ನು ಪ್ರದರ್ಶಿಸಿ ನಂತರ ಒಳ ಕೊಟ್ಟಾರದಲ್ಲಿ […]Read More
“ಬೆಳಕಿನ ಹಬ್ಬ ದೀಪಾವಳಿ ಸುಜ್ಞಾನದ ಪ್ರತೀಕ. ದೀಪಾವಳಿ ಹಬ್ಬವನ್ನು ಎಲ್ಲರೂ ಶ್ರದ್ಧಾ-ಭಕ್ತಿಯಿಂದ ಸರಳವಾಗಿ ಆಚರಿಸೋಣ. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಸಂಪ್ರದಾಯ ಬದ್ಧವಾಗಿ ಸಂಸ್ಕೃತಿ ರಕ್ಷಣೆಯೊಂದಿಗೆ ಪರಿಸರ ಸ್ನೇಹಿಯಾಗಿ ಹಬ್ಬ ಆಚರಿಸುವುದು ಎಲ್ಲರ ಕರ್ತವ್ಯವೂ, ಹೊಣೆಗಾರಿಕೆಯೂ ಆಗಿದೆ.” “ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಇಳಿಮುಖವಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಆದಷ್ಟು ಶೀಘ್ರ ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಿ ಎಲ್ಲರೂ ಆರೋಗ್ಯ ಭಾಗ್ಯವನ್ನು ಹೊಂದಿ ಭಯ ಮುಕ್ತ ವಾತಾವರಣದಲ್ಲಿ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುವಂತಾಗಲಿ ಎಂದು ಹಾರೈಸುತ್ತೇನೆ.” […]Read More
ಉಡುಪಿ ನ 12: ಸರ್ಕಾರದ ಅದೇಶದಂತೆ ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಹಸಿರು ಪಟಾಕಿ ಗಳನ್ನು ರಾತ್ರಿ 8 ರಿಂದ 10 ರ ವರಗೆ ಮಾತ್ರ ಸಿಡಿಸಬೇಕು, ನಿಗಧಿತ ಅವಧಿಗಿಂತ ಮುಂಚೆ ಹಾಗೂ ನಿಗಧಿತ ಅವಧಿಯ ನಂತರ ಪಟಾಕಿ ಸಿಡಿಸುವವರವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಸುರಕ್ಷಿತ ರೀತಿಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರು ನಿಗಧಿತ ಅವಧಿಯಲ್ಲಿ […]Read More
ಉಡುಪಿ, ನ 12: ಉಡುಪಿ ಜಿಲ್ಲೆಯಲ್ಲಿ ನವೆಂಬರ್ 17 ರಿಂದ ಅಂತಿಮ ವರ್ಷದ ಪದವಿ ತರಗತಿಗಳನ್ನು, ಸರ್ಕಾರದ ಮಾರ್ಗಸೂಚಿಯಂತೆ ಎಲ್ಲಾ ಅಗತ್ಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಸರ್ಕಾರಿ/ಖಾಸಗಿ/ ಅನುದಾನಿತ/ಅನುದಾನ ರಹಿತ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳನ್ನು, ಪ್ರಮಾಣಿತ ಕಾರ್ಯಾಚರಣ ವಿಧಾನ ಮಾರ್ಗಸೂಚಿಯನ್ವಯ ಪ್ರಾರಂಭಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಲು ತಮ್ಮ ಪೋಷಕರಿಂದ ನಿಗಧಿತ ನಮೂನೆಯಲ್ಲಿ […]Read More
ಮಂಗಳೂರು ನ 12 : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಪ್ರಸ್ತುತ ಸಾಲಿನಲ್ಲಿ ಭತ್ತ ಖರೀದಿಯನ್ನು ಮಾಡಲು ಅಗತ್ಯವಿರುವ ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ತಮ್ಮ ಕಛೇರಿ ಸಭಾಂಗಣದಲ್ಲಿ ಪ್ರಸ್ತುತ ಸಾಲಿನ ಕನಿಷ್ಟ ಬೆಂಬಲ ಯೋಜನೆ ಕಾರ್ಯಚರಣೆಗೆ ಸಂಬಂಧಿಸಿದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತರಿಂದ ಕನಿಷ್ಟ ಬೆಂಬಲ ಯೋಜನೆಯಡಿ ಸಾಮಾನ್ಯ ಭತ್ತವನ್ನು 1868 ರೂ.ಗಳಲ್ಲಿ ಹಾಗೂ ಗೇಡ್-1 ಭತ್ತಗಳನ್ನು1888 ರೂ.ಗಳಲ್ಲಿ […]Read More
ಬೆಳ್ತಂಗಡಿ ನ 12: ಧರ್ಮಸ್ಥಳ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಕೇಂದ್ರಗಳ ಆಡಳಿತ ವಿಭಾಗದ ನೂತನ ಕಟ್ಟಡದ ಉದ್ಘಾಟನೆ ಇಂದು ನಡೆಯಿತು. “ಪ್ರತಿಯೊಬ್ಬ ವ್ಯಕ್ತಿಯಲ್ಲಿ ಪ್ರತಿಭೆ, ಬುದ್ಧಿವಂತಿಕೆ ಹಾಗೂ ಸಾಮಥ್ರ್ಯ ಇರುತ್ತದೆ. ಅವರಿಗೆ ಸಕಾಲದಲ್ಲಿ ಮಾಹಿತಿ ಹಾಗೂ ತರಬೇತಿ ನೀಡಿ ಸ್ವ-ಉದ್ಯೋಗ ಮಾಡಲು ಪ್ರೇರಣೆ ನೀಡುವುದೇ ರುಡ್ಸೆಟ್ ಸಂಸ್ಥೆಯ ಉದ್ದೇಶವಾಗಿದೆ. 1982 ರಲ್ಲಿ ಉಜಿರೆಯಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಿದ ರುಡ್ಸೆಟ್ ಸಂಸ್ಥೆ ಇಂದು ದೇಶದೆಲ್ಲೆಡೆ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ,” ಎಂದು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. […]Read More
ಬೆಳ್ತಂಗಡಿ, ನ 12 : ರಾಜ್ಯೋತ್ಸವ ಪ್ರಶಸ್ತಿ ಪುರಸೃತ, ಕಾರ್ಕಳದ ಹಿರಿಯ ನ್ಯಾಯವಾದಿ ಎಂ.ಕೆ. ವಿಜಯ ಕುಮಾರ್ ಅವರನ್ನು ಅವರ ನಿವಾಸದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಶುಭಶ್ಚಂದ್ರರಾಜ್, ಪುರಂದರ ಭಟ್ ಗೌರವಿಸಿ ಅಭಿನಂದಿಸಿದರು. ಮಂಗಳೂರು ವಿ.ವಿ. ಸಿಂಡಿಕೇಟ್ ಸದಸ್ಯ, ಮೋಹನ್ ಪಡಿವಾಳ್, ನೇಮಿರಾಜ ಆರಿಗ, ಮಹಾವೀರ ಹೆಗ್ಡೆ, ಎಂಕೆ. ವಿಪುಲ್ ತೇಜ್, ಪಾಶ್ರ್ವನಾಥ ವರ್ಮಾ ಮೊದಲಾದವರು ಉಪಸ್ಥಿತರಿದ್ದರು.Read More
ಉಡುಪಿ, ನ 12: ಪರ್ಯಾಯ ಶ್ರೀ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರಾದರು ಹಾಗೂ ಪರ್ಯಾಯ ಪೀಠಾಧೀಶರಾದ ಶ್ರೀ ಈಶ ಪ್ರಿಯ ತೀರ್ಥ ಶ್ರೀಪಾದರು ಉಡುಪಿ ಶ್ರೀ ಕೃಷ್ಣನಿಗೆ ನೂತನ ಸುವರ್ಣ ಛತ್ರವನ್ನು ನಿರ್ಮಿಸಲು ಸಂಕಲ್ಪಿಸಿದ್ದಾರೆ. ಶ್ರೀ ಕೃಷ್ಣ ದೇವರಿಗೆ ಪ್ರತಿ ದಿನವೂ ಅಲಂಕಾರಿಕವಾಗಿ ಸಮರ್ಪಿಸಲಾಗುವ ಛತ್ರವು (ಛತ್ರಿ, ಕೊಡೆ) ಶಿಥಿಲವಾಗಿದೆ ಸುವರ್ಣ ಛತ್ರ ನಿರ್ಮಾಣ ಕಾರ್ಯದಲ್ಲಿ ಭಾಗವಹಿಸುವ ಮೂಲಕ ಶ್ರೀ ಕೃಷ್ಣ ನ ಅನುಗ್ರಹಕ್ಕೆ ಪಾತ್ರರಾಗಲು ಭಕ್ತರಿಗೆ ಸದವಕಾಶ ನೀಡಲಾಗಿದೆ ಎಂದು […]Read More
