ಉಡುಪಿ, ನ 06 : ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ ಮುಂಗಾರು ಹಂಗಾಮಿನ ಬೆಳೆಸಮೀಕ್ಷೆ ಕಾರ್ಯವು ಕೈಗೊಳ್ಳಲಾಗಿರುತ್ತದೆ. ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆ ಇದ್ದಲ್ಲಿ ಬೆಳೆ ಸಮೀಕ್ಷೆ ವೆಬ್ ಪೋರ್ಟಲ್ www.cropsurvey.karnataka.gov.in ಅಥವಾ ಮೊಬೈಲ್ ಆಪ್ Bele Darshak Karnataka-2020-21 ಮೂಲಕ ಆಕ್ಷೇಪಣೆ ಸಲ್ಲಿಸಬಹುದು. ರೈತರಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಸಂಬಂಧಿಸಿದ ಗ್ರಾಮದ ಮೇಲ್ವಿಚಾರಕರಿಂದ ಪರಿಶೀಲಿಸಿ, ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಕಾರವಾರ, ನ 05:ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಮರಳು ಸಿಗುತ್ತಿಲ್ಲ, ಸಿಕ್ಕರೂ ಕೂಡಾ ದುಪ್ಪಟ್ಟು ಬೆಲೆ ತೆರಬೇಕಾಗಿದೆ ಎಂಬ ಕೂಗು ಪದೇ ಪದೇ ಕೇಳಿ ಬರುತ್ತಿದ್ದು, ಸಾಂಪ್ರದಾಯಿಕವಾಗಿ ಮರಳು ತೆಗೆಯಲು ಅನುಮತಿ ಪಡೆದಿರುವ ಟಿಪಿ ದಾರರು ಅಥವಾ ಸಾಗಾಣಿಕೆದಾರರು ಸಾರ್ವಜನಿಕರಿಂದ ಹೆಚ್ಚಿನ ಬೆಲೆಯನ್ನು ವಸೂಲಿ ಮಾಡುತ್ತಿರುವದು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಗಮನಕ್ಕೆ ಬಂದಿರುತ್ತದೆ. ಇದನ್ನು ನಿಯಂತ್ರಿಸುವ ಅವಶ್ಯಕತೆ ಇದ್ದು ಜಿಲ್ಲೆಯ ಸಾಮಾನ್ಯ ನಾಗರೀಕರಿಗೆ ಕೂಡಾ ಯೋಗ್ಯದರದಲ್ಲಿ ಮರಳು ಲಬ್ಯವಾಗುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ್ […]Read More
ಉಡುಪಿ, ನ 05: ಶ್ರೀಕೃಷ್ಣಮಠದಲ್ಲಿ ಆಶ್ವಯುಜ ಶುಕ್ಲ ತ್ರಯೋದಶಿಯಿಂದ ಕೃಷ್ಣ ಪಂಚಮಿಯವರೆಗೆ ಬಡಗುಮಾಳಿಗೆಯಲ್ಲಿ ನಿರ್ಮಿಸಿದ ಮಂಟಪದಲ್ಲಿ ನಡೆಯುತ್ತಿರುವ ಋಕ್ಸಂಹಿತಾ ಯಾಗ ಇಂದು ಪೂರ್ಣಾಹುತಿಯೊಂದಿಗೆ ಸಂಪನ್ನಗೊಂಡಿತು. ಮಹಾಮಂಗಳಾರತಿ ಹಾಗೂ ಪೂರ್ಣಾಹುತಿಯು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಅವಧಾನಿ ವಿದ್ವಾನ್ ಗುಂಡಿಬೈಲ್ ಸುಬ್ರಹ್ಮಣ್ಯ ಭಟ್ ಇವರ ನೇತೃತ್ವದಲ್ಲಿ ನಡೆಯಿತು. ನಂತರ ಮಧ್ವಸರೋವರದಲ್ಲಿ ಅವಭೃತ ಸ್ನಾನ ನಡೆಯಿತು.Read More
ಬೆಳ್ತಂಗಡಿ, ನ 05: ಧರ್ಮಸ್ಥಳದ ಹಿಂದೂ ರುದ್ರಭೂಮಿಯ ಸಮಿತಿ ಸದಸ್ಯರ ಆಶಯದಂತೆ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸುಮಾರು 6.00ಲಕ್ಷ ವೆಚ್ಚದಲ್ಲಿ ನವೀಕರಣ ಕಾರ್ಯವು ನಡೆಯುತ್ತಿದೆ. ಈ ನವೀಕರಣ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪೂರಕ ಅನುದಾನವಾಗಿ ರೂ.2,50,000 ಮಂಜೂರಾತಿ ನೀಡಿದ್ದಾರೆ. ಧರ್ಮಸ್ಥಳ ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಡಿ. ಹರ್ಷೇಂದ್ರ ಕುಮಾರ್ರವರ ಸಲಹೆ ಸೂಚನೆಯಂತೆ ನವೀಕರಣದ ಅಂಗವಾಗಿ ನೂತನ ಸಿಲಿಕಾನ್ ಬಾಕ್ಸ್ ಅಳವಡಿಕೆ, ಶವಕಟ್ಟೆ, ವಿಶ್ರಾಂತಿ ಕೊಠಡಿ, […]Read More
ಪ್ರತೀ ಅರ್ಹ ಫಲಾನುಭವಿಗಳಿಗೆ ರೂ.10,000 ಬ್ಯಾಂಕ್ ಸಾಲವನ್ನ ಶೇ 7% ಬಡ್ಡಿ ಸಹಾಯ ಧನದೊಂದಿಗೆ ನೀಡಲಾಗುತ್ತದೆ ಮರುಪಾವತಿಯನ್ನು 12 ಮಾಸಿಕ ಕಂತುಗಳಲ್ಲಿ ಪಾವತಿ ಮಾಡಬಹುದು ನಿಯಮಿತವಾಗಿ ಸಾಲ ಮರುಪಾವತಿ ಮಾಡಿದ್ದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ರೂ.1,200 ಕ್ಯಾಶ್ಬ್ಯಾಕ್ ಪಡೆಯಲು ಅವಕಾಶವಿದೆ ಮಂಗಳೂರು ನ 05: ಕೋವಿಡ್-19 ಲಾಕ್ಡೌನ್ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರವ ನಗರ ಪ್ರದೇಶದ ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ ನೀಡುವ ತರ್ತು ಕಿರು ಸಾಲವನ್ನು ಒದಗಿಸುವ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ.ವಿ […]Read More
ಉಡುಪಿ, ನ 04: ನಿರ್ವಹಣಾ ಕಾರ್ಯಗಳಿಂದಾಗಿ, ನವೆಂಬರ್ 5 ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ರವರೆಗೆ ಉಡುಪಿ ಜಿಲ್ಲೆಯ ಈ ಕೆಳಗಿನ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆRead More
ಬಿದ್ದು ಕೊಳೆಯಲು ಬಿಡದೆ ಬಳಸಿ ಸವೆತವೆ ಲೇಸುಎದ್ದು ತಿರುಗಲಿ ದಣಿದು ನಿಲುಗಡೆಯ ತನಕಸದ್ದು ಮಾಡುವ ಕಪ್ಪೆ, ಶುದ್ಧ ಮಾಡುವ ಮೀನುಗೆದ್ದು ಬಾಳಲು ಬೆಳಕು ಪಣಿಯರಾಮ ||೦೦೯೪|| ಜಯರಾಂ ಪಣಿಯಾಡಿRead More
ಉಡುಪಿ, ನ ೦3: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (CBRSETI) ಮಣಿಪಾಲ ಇವರ ವತಿಯಿಂದ ನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ 18 ನವೆಂಬರ್ 2020 ರಿಂದ 13 ದಿನಗಳ “ಕೃತಕ ಆಭರಣಗಳ ತಯಾರಿಕೆ”ಉಚಿತ ತರಬೇತಿಯನ್ನು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಊಟ – ವಸತಿ ಸಂಪೂರ್ಣವಾಗಿ ಉಚಿತವಾಗಿದ್ದು; ಸಂಬಂಧಿಸಿದ ಕ್ಷೇತ್ರದ ಬಗ್ಗೆ ವಿಸ್ತಾರವಾಗಿ ತಿಳಿಸುವುದರ ಜೊತೆಗೆ ಉದ್ಯಮಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿ ಮಾಹಿತಿ ನೀಡಲಾಗುತ್ತದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ […]Read More
ಮಂಗಳೂರು ನ 03: ಪ್ರಸ್ತುತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನ ಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿ, ಮೌಲನಾ ಅಝಾದ್ ಭವನ, ಓಲ್ಡ್ಕೆಂಟ್ ರಸ್ತೆ, ಪಾಂಡೇಶ್ವರ ಮಂಗಳೂರು ಇವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಮಂಗಳೂರು ನ 03 : ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತುತ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ನವೆಂಬರ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೇಡಿಯೋ ಪಾರ್ಕ್ […]Read More